HomeಅಂಕಣಗಳುSIRದೆಹಲಿ ಪ್ರತಿಭಟನೆ: ಇಂಡಿಯಾ ಬ್ಲಾಕ್ ಸಂಸದರು, ನಾಗರಿಕ ಸಮಾಜ ಮತ್ತು ವಿದ್ಯಾರ್ಥಿ ಸಂಘಟನೆಗಳೊಂದಿಗೆ ರಾಹುಲ್ ಗಾಂಧಿ...

ದೆಹಲಿ ಪ್ರತಿಭಟನೆ: ಇಂಡಿಯಾ ಬ್ಲಾಕ್ ಸಂಸದರು, ನಾಗರಿಕ ಸಮಾಜ ಮತ್ತು ವಿದ್ಯಾರ್ಥಿ ಸಂಘಟನೆಗಳೊಂದಿಗೆ ರಾಹುಲ್ ಗಾಂಧಿ ಚಹಾ ಕೂಟ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಚುನಾವಣಾ ಅಕ್ರಮಗಳು ಮತ್ತು ‘ಮತ ಚೋರಿ’ ಆರೋಪಗಳ ವಿರುದ್ಧ ದೇಶಾದ್ಯಂತ ವಿರೋಧ ಪಕ್ಷಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂಡಿಯಾ ಬ್ಲಾಕ್ ಸಂಸದರು, ನಾಗರಿಕ ಸಮಾಜದ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳ ಸದಸ್ಯರನ್ನು ಚಹಾ ಕೂಟಕ್ಕೆ ಆಹ್ವಾನಿಸಿದ್ದಾರೆ. 

ಮಂಗಳವಾರ ದೆಹಲಿಯ ತಮ್ಮ ನಿವಾಸದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಚುನಾವಣಾ ಅಕ್ರಮಗಳ ವಿರುದ್ಧದ ಹೋರಾಟವನ್ನು ಮುಂದುವರಿಸುವುದು, ಜಂಟಿ ಪ್ರತಿಭಟನಾ ಕಾರ್ಯತಂತ್ರ ರೂಪಿಸುವುದು ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸುವ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ಮೂಲಗಳ ಪ್ರಕಾರ, ದೆಹಲಿಯ 5, ಸುನೇಹ್ರಿ ಬಾಗ್ ರಸ್ತೆಯಲ್ಲಿರುವ ರಾಹುಲ್ ಗಾಂಧಿ ನಿವಾಸದಲ್ಲಿ ಈ ಸಭೆ ನಡೆಯಲಿದೆ. ಸಭೆಯ ಬಳಿಕ ಇಂಡಿಯಾ ಬ್ಲಾಕ್ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆಯೂ ಇದೆ. ‘ವೋಟ್ ಚೋರಿ’ ಆರೋಪ ಮತ್ತು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ಹೋರಾಟ ನಡೆಸಬೇಕು ಎಂಬುದರ ಕುರಿತು ಸಭೆಯಲ್ಲಿ ಚರ್ಚೆಯಾಗಲಿದೆ.

ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮಗಳು ಮತ್ತು ಎಸ್‌ಐಆರ್ ವಿರುದ್ಧದ ವಿರೋಧ ಪಕ್ಷಗಳ ಹೋರಾಟ ಸುಪ್ರೀಂ ಕೋರ್ಟ್‌ವರೆಗೂ ತಲುಪಿದ ಮರುದಿನವೇ ಈ ಸಭೆ ನಡೆಯುತ್ತಿರುವುದು ಮಹತ್ವ ಪಡೆದುಕೊಂಡಿದೆ. ಸೋಮವಾರ ದೆಹಲಿಯಲ್ಲಿ ವಿರೋಧ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ನಾಗರಿಕ ಸಮಾಜದ ಸದಸ್ಯರು ‘ಪ್ರಜಾಪ್ರಭುತ್ವಕ್ಕಾಗಿ ಮೆರವಣಿಗೆ’ ನಡೆಸಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಬ್ಯಾರಿಕೇಡ್‌ಗಳ ನಡುವೆಯೇ ನಡೆದ ಈ ಮೆರವಣಿಗೆಯಲ್ಲಿ ದೊಡ್ಡ ಸಂಖ್ಯೆಯ ಪ್ರತಿಭಟನಾಕಾರರು ಪಾಲ್ಗೊಂಡಿದ್ದರು. ಧ್ವಜಗಳು ಮತ್ತು ಪೋಸ್ಟರ್‌ಗಳನ್ನು ಹಿಡಿದು ಕೇಂದ್ರ ದೆಹಲಿಯ ಕನ್ನಾಟ್ ಪ್ಲೇಸ್ ಪ್ರದೇಶದತ್ತ ಸಾಗಿದ ಪ್ರತಿಭಟನಾಕಾರರು, ಎಸ್‌ಐಆರ್ ಮತ್ತು ಚುನಾವಣಾ ಅಕ್ರಮಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಮೆರವಣಿಗೆಯಲ್ಲಿ ರಾಹುಲ್ ಗಾಂಧಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಸಿಪಿಐ ನಾಯಕ ಡಿ. ರಾಜಾ, ಸಿಪಿಐ(ಎಂ) ನಾಯಕ ಎಂ.ಎ. ಬೇಬಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಎನ್‌ಸಿಪಿ-ಎಸ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಸೇರಿದಂತೆ ಹಲವು ಪ್ರಮುಖ ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದರು.

ಮೆರವಣಿಗೆಯ ಸಂದರ್ಭದಲ್ಲಿ ಭಗವಾನ್ ದಾಸ್ ರಸ್ತೆಯಲ್ಲಿ ಪ್ರತಿಭಟನಾಕಾರರು ಒಂದು ಬ್ಯಾರಿಕೇಡ್ ಮುರಿದು ಮುಂದೆ ಸಾಗಲು ಪ್ರಯತ್ನಿಸಿದರು. ಆದರೆ, ಅದೇ ರಸ್ತೆಯಲ್ಲಿದ್ದ ಮತ್ತೊಂದು ಬ್ಯಾರಿಕೇಡ್ ಬಳಿ ಪೊಲೀಸರು ಅವರನ್ನು ತಡೆದರು. ಬಳಿಕ ವಿರೋಧ ಪಕ್ಷದ ಹಿರಿಯ ನಾಯಕರು ಸುಪ್ರೀಂ ಕೋರ್ಟ್‌ಗೆ ತೆರಳಿ ಚುನಾವಣಾ ಅಕ್ರಮಗಳು ಮತ್ತು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಜಂಟಿ ಅರ್ಜಿ ಸಲ್ಲಿಸಿದರು. ಈ ಅರ್ಜಿಯಲ್ಲಿ ಭಾರತದ ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಅವರನ್ನು ಪ್ರತಿವಾದಿಗಳನ್ನಾಗಿ ಸೇರಿಸಲಾಗಿದೆ.

ಇದೇ ವೇಳೆ, ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಲು ಭಾರತದ ಮುಖ್ಯ ನ್ಯಾಯಮೂರ್ತಿಗಳು ಮಾಡಿದ ಮನವಿಯನ್ನು ಅವರು ನಿರಾಕರಿಸಿದ್ದು, ಪ್ರಕರಣ ಈಗಾಗಲೇ ವಿಚಾರಣೆಯ ಹಂತದಲ್ಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ, ಚುನಾವಣಾ ಪ್ರಕ್ರಿಯೆಯ ಕುರಿತು ವಿರೋಧ ಪಕ್ಷಗಳು ಎತ್ತಿರುವ ಪ್ರಶ್ನೆಗಳು ಇದೀಗ ನ್ಯಾಯಾಲಯದ ಕಾನೂನು ಹೋರಾಟದ ಜೊತೆಗೆ ರಾಜಕೀಯ ಹೋರಾಟದ ಸ್ವರೂಪವನ್ನೂ ಪಡೆದುಕೊಂಡಿವೆ.

ರಾಹುಲ್ ಗಾಂಧಿ ಈಗ ಸಂಸದರು, ನಾಗರಿಕ ಸಮಾಜದ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳನ್ನು ಒಂದೇ ವೇದಿಕೆಗೆ ಆಹ್ವಾನಿಸಿರುವುದು, ಈ ಹೋರಾಟವನ್ನು ಇನ್ನಷ್ಟು ಸಂಘಟಿತವಾಗಿ ಮುಂದುವರಿಸುವ ಪ್ರಯತ್ನದ ಭಾಗವಾಗಿ ಕಾಣುತ್ತಿದೆ. ಎಸ್‌ಐಆರ್ ಮತ್ತು ‘ಮತ ಚೋರಿ’ ಆರೋಪಗಳ ವಿರುದ್ಧದ ಪ್ರತಿಭಟನೆಗೆ ರಾಜಕೀಯ ಪಕ್ಷಗಳಷ್ಟೇ ಅಲ್ಲದೆ ನಾಗರಿಕ ಸಮಾಜ ಹಾಗೂ ವಿದ್ಯಾರ್ಥಿ ಸಂಘಟನೆಗಳ ಬೆಂಬಲವನ್ನೂ ಒಗ್ಗೂಡಿಸುವುದು ಸಭೆಯ ಪ್ರಮುಖ ಉದ್ದೇಶಗಳಲ್ಲೊಂದಾಗಿದೆ. 

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸುವುದರ ಜೊತೆಗೆ, ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮಗಳ ವಿರುದ್ಧ ಮುಂದಿನ ಹಂತದಲ್ಲಿ ಯಾವ ರೀತಿಯ ಜಂಟಿ ಹೋರಾಟ ರೂಪಿಸಬೇಕು ಎಂಬುದರ ಬಗ್ಗೆ ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗೆ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ರಾಜೀನಾಮೆ

ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ಪಶ್ಚಿಮ ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗಳಿಗೆ ರಾಜೀನಾಮೆ ನೀಡಿದ್ದಾರೆ, ಒಂದು ತಿಂಗಳಲ್ಲಿ ಸಮಿತಿಯಿಂದ ಹೊರಗುಳಿದ 19 ಸದಸ್ಯರಲ್ಲಿ ನಾಲ್ಕನೇ ವ್ಯಕ್ತಿಯಾಗಿದ್ದಾರೆ. ರಾಜ್ಯದ ಮತದಾರರ ಪಟ್ಟಿಯಿಂದ ಹೊರಗುಳಿದ...

‘ನೋಟ್ ಬಂದಿ’ ಆರ್ಥಿಕತೆ ಹಾಳು ಮಾಡಿದೆ, ‘ವೋಟ್ ಬಂದಿ’ ರಾಜಕೀಯ ನಾಶಪಡಿಸುತ್ತಿದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದೆ. 2016ರಲ್ಲಿ ಜಾರಿಗೊಳಿಸಿದ 'ನೋಟ್ ಬಂದ್' ದೇಶದ ಆರ್ಥಿಕತೆಯನ್ನು ಹಾಳುಮಾಡಿದ್ದರೆ, ಈಗ ನಡೆಯುತ್ತಿರುವ 'ವೋಟ್ ಬಂದ್' ದೇಶದ ರಾಜಕೀಯ...

“ಪಟಾಕಿಗಳನ್ನು ಸಿಡಿಸುವುದರಿಂದ ಹಲವು ರೋಗ-ರುಜಿನಗಳು ಗುಣಮುಖವಾಗುತ್ತವೆ” – ಪಶ್ಚಿಮ ಬಂಗಾಳ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ ಹೇಳಿಕೆ!

ಕಾಳಿ ಪೂಜೆ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಹಾಗೂ ಶಬ್ದ ನಿಯಂತ್ರಿಸಲು ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ವಿಧಿಸುತ್ತಿರುವ ಬೆನ್ನಲ್ಲೇ, ಕೋಲ್ಕತ್ತಾದ ಟಾಲಿಗಂಜ್ ಕ್ಷೇತ್ರದ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ...

ಎನ್‌ಡಿಎ ಪರೀಕ್ಷೆ; ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಶಿವಮೊಗ್ಗದ ವಿದ್ಯಾರ್ಥಿನಿ

ಕರ್ನಾಟಕದ 18 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ...

ಗೂಗಲ್ ‘ರೀಯೂನಿಯನ್’ ಜಾಹೀರಾತು ಬಿಡುಗಡೆಯಾಗಿ 13 ವರ್ಷ: ಕುನಾಲ್ ಕಾಮ್ರಾ ಪೋಸ್ಟ್‌ನಿಂದ ಮತ್ತೆ ನೆನಪಾದ ಗಡಿ ಮೀರಿದ ಸೌಹಾರ್ದತೆ!

13 ವರ್ಷಗಳ ಹಿಂದೆ ಅಂದರೆ 2013ರ ನವೆಂಬರ್ 13ರಂದು ಗೂಗಲ್ ಇಂಡಿಯಾ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಿದ್ದ ಜಾಗತಿಕ ಪ್ರಸಿದ್ಧ ‘ರೀಯೂನಿಯನ್’ (Google Reunion) ಜಾಹೀರಾತು, ಇಂದು ಸಾಮಾಜಿಕ ಜಾಲತಾಣ...

ಕೇಂದ್ರ ಸಚಿವರ ಜೇಬು ತುಂಬಿಸಲು ಎಥನಾಲ್ ದಂಧೆ!: 130 ಕೋಟಿ ಜನರಿಗೆ 20% ಹೆಸರಲ್ಲಿ 40% ಎಥನಾಲ್ – ಪ್ರಿಯಾಂಕ್‌ ಖರ್ಗೆ!

ಕರ್ನಾಟಕದಲ್ಲಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು (OMCs) ಸರಬರಾಜು ಮಾಡುತ್ತಿರುವ ಪೆಟ್ರೋಲ್‌ನಲ್ಲಿ ನಿಯಮಾನುಸಾರ ಇರಬೇಕಾದ ಶೇಕಡಾ 20 ಕ್ಕಿಂತಲೂ ಅಧಿಕ ಪ್ರಮಾಣದ ಎಥನಾಲ್ ಮಿಶ್ರಣ ಮಾಡುತ್ತಿರುವುದು ಈಗ ರಾಜ್ಯ ಸರ್ಕಾರ ನಡೆಸಿದ ತನಿಖೆಯಿಂದ...

ಎಥೆನಾಲ್ ಅತಿಯಾದ ಮಿಶ್ರಣ: ಸಾವಿರಾರು ವಾಹನಗಳಿಗೆ ಸಮಸ್ಯೆ, ಎಂಜಿನ್‌ಗಳು ಸ್ಥಗಿತ; ಆರೋಪ ಮತ್ತಷ್ಟು ತೀವ್ರಗೊಳಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ವಿವಾದ ಕರ್ನಾಟಕದಲ್ಲಿ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯದ ವಿವಿಧೆಡೆ ಸಾವಿರಾರು ವಾಹನಗಳು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿವೆ, ಎಂಜಿನ್‌ಗಳು ಪದೇಪದೇ ಸ್ಥಗಿತಗೊಳ್ಳುತ್ತಿವೆ ಮತ್ತು...

‘ಕಾಂಗ್ರೆಸಿಗರನ್ನು ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತೇವೆ’ ಎಂದಿದ್ದ ನಾರಾಯಣಸ್ವಾಮಿ ಮನೆಗೆ ಬ್ಲಿಂಕಿಟ್ ಮೂಲಕ 20 ಚಾಕುಗಳ ಆರ್ಡರ್: ದೂರು ದಾಖಲಿಸಿದ ಬಿಜೆಪಿ

ಬೆಂಗಳೂರು: ಕ್ವಿಕ್ ಕಾಮರ್ಸ್ ವೇದಿಕೆ ಬ್ಲಿಂಕಿಟ್ ಮೂಲಕ ತನಗೆ 20 ಚಾಕುಗಳನ್ನು ಕಳುಹಿಸಲಾಗಿದೆ. ಕಾಂಗ್ರೆಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರೇ ಈ ಚಾಕುಗಳನ್ನು ಆರ್ಡರ್ ಮಾಡಿದ್ದಾರೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ...

ಫಿರೋಜಾಬಾದ್‌ನಲ್ಲಿ ಸಾಮೂಹಿಕ ಅತ್ಯಾಚಾರ; ಬಹು ಅಂಗಾಂಗ ಹಾನಿಯಿಂದ 16 ವರ್ಷದ ದಲಿತ ಬಾಲಕಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನವೆಂಬರ್ 1 ರಂದು ಬರ್ಬರ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 16 ವರ್ಷದ ದಲಿತ ಬಾಲಕಿ, ಆಗ್ರಾದ ಆಸ್ಪತ್ರೆಯೊಂದರಲ್ಲಿ ಸುಮಾರು ಒಂದು ವಾರಗಳ ಕಾಲ ಸಾವಿನೊಂದಿಗೆ ಹೋರಾಡಿದ ನಂತರ ಶುಕ್ರವಾರ ಕೊನೆಯುಸಿರೆಳೆದಿದ್ದಾಳೆ. ಆಕೆಯನ್ನು...

ಬಂಗಾಳದ SIR ಟ್ರಿಬ್ಯೂನಲ್‌ನಿಂದ 4ನೇ ನ್ಯಾಯಾಧೀಶರ ನಿರ್ಗಮನ: ನಿವೃತ್ತ ನ್ಯಾಯಮೂರ್ತಿ ಬಿಸ್ವಜಿತ್ ಬಸು ರಾಜೀನಾಮೆ!

ಕೋಲ್ಕತಾ: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಮೇಲ್ಮನವಿ ಟ್ರಿಬ್ಯೂನಲ್‌ನಿಂದ ನಿವೃತ್ತ ನ್ಯಾಯಮೂರ್ತಿ ಬಿಸ್ವಜಿತ್ ಬಸು ಅವರು ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ವರದಿಗಳ ಪ್ರಕಾರ, ಕಲ್ಕತ್ತಾ...