Homeಮುಖಪುಟದೆಹಲಿಯಲ್ಲಿ ಹೀನಕೃತ್ಯ: ಅತ್ಯಾಚಾರ ಸಂತ್ರಸ್ತೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ನೆರೆಹೊರೆಯವರು

ದೆಹಲಿಯಲ್ಲಿ ಹೀನಕೃತ್ಯ: ಅತ್ಯಾಚಾರ ಸಂತ್ರಸ್ತೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ನೆರೆಹೊರೆಯವರು

- Advertisement -
- Advertisement -

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆಯನ್ನು ಆಕೆಯ ನೆರೆ ಹೊರೆಯವರೇ ಚಪ್ಪಲಿ ಹಾರ ಹಾಕಿ, ಮುಖಕ್ಕೆ ಮಸಿ ಬಳಿದು ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಹೀನ ಕೃತ್ಯ ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದಿದೆ.

ದೆಹಲಿಯ ಶಹದಾರ್‌ ಜಿಲ್ಲೆಯಲ್ಲಿ ಅತ್ಯಾಚಾರ ಸಂತ್ರಸ್ತೆಯ ರತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಕೊರಳಿಗೆ ಚಪ್ಪಲಿಹಾರ ಹಾಕಿ ಹರ್ಷೋದ್ಗಾರದ ನಡುವೆ ನೆರೆಹೊರೆಯವರು ಆಕೆಯ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದಾರೆ ಎಂದು ದೆಹಲಿ ಮಹಿಳಾ ಆಯೋಗ ಇಂದು ತಿಳಿಸಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ನಾಲ್ವರು ಮಹಿಳೆಯರನ್ನು ಬಂಧಿಸಲಾಗಿದೆ.

ಸಂತ್ರಸ್ತ ಯುವತಿಯನ್ನು ಭೇಟಿಯಾದ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್, ಸೂಕ್ತ ಕ್ರಮ ಮತ್ತು ಪ್ರಕರಣದಲ್ಲಿ ಉಳಿದ ಆರೋಪಿಗಳನ್ನು ಬಂಧಿಸುವಂತೆ ದೆಹಲಿ ಪೊಲೀಸರನ್ನು ಒತ್ತಾಯಿಸಿದ್ದಾರೆ.

”ಕಸ್ತೂರಬಾ ನಗರದಲ್ಲಿ 20 ವರ್ಷದ ಯುವತಿ ಮೇಲೆ ಅಕ್ರಮ ಮದ್ಯ ಮಾರಾಟಗಾರರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಆಕೆಯ ತಲೆಯನ್ನು ಬೋಳಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು. ನಾನು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡುತ್ತಿದ್ದೇನೆ. ಎಲ್ಲಾ ಆರೋಪಿ ಪುರುಷರು ಮತ್ತು ಮಹಿಳೆಯರನ್ನು ಬಂಧಿಸಬೇಕು. ಸಂತ್ರಸ್ತ ಯುವತಿ ಮತ್ತು ಆಕೆಯ ಕುಟುಂಬಕ್ಕೆ ಭದ್ರತೆ ನೀಡಬೇಕು” ಎಂದು ವೀಡಿಯೊವನ್ನು ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

“ಸಂತ್ರಸ್ತೆಯನ್ನು ಮನೆಯಿಂದ ಅಪಹರಿಸಿ, ಸ್ಥಳೀಯವಾಗಿ ಮದ್ಯ ಮತ್ತು ಮಾದಕವಸ್ತುಗಳ ಅಕ್ರಮ ವ್ಯಾಪಾರದಲ್ಲಿ ತೊಡಗಿರುವ 3 ಪುರುಷರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗುತ್ತಿರುವಾಗ, ಅಲ್ಲಿದ್ದ ಮಹಿಳೆಯರು ಆಕೆಯ ಮೇಲೆ ಅತ್ಯಾಚಾರವೆಸಗಲು ಪುರುಷರನ್ನು ಪ್ರಚೋದಿಸುತ್ತಿದ್ದರು. ನಂತರ ಆಕೆಯನ್ನು ಅಮಾನುಷವಾಗಿ ಥಳಿಸಿ, ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿ ಮಾಡಿದ್ದಾರೆ ಎಂದು ಸಂತ್ರಸ್ತೆ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರಿಗೆ ತಿಳಿಸಿದ್ದಾರೆ” ಎಂದು ಮಹಿಳಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

“ಇದಲ್ಲದೆ, ಯುವತಿಗೆ ಭದ್ರತೆ ಒದಗಿಸಲು ಪೊಲೀಸರು ತೆಗೆದುಕೊಂಡ ಕ್ರಮಗಳ ಕುರಿತು ಮಾಹಿತಿ ಒದಗಿಸುವಂತೆ ದೆಹಲಿ ಪೊಲೀಸರನ್ನು ಕೇಳಿದೆ. ಇಡೀ ಘಟನೆಯ ಸಿಸಿಟಿವಿ ದೃಶ್ಯಗಳ ಜೊತೆಗೆ ಈ ವಿಷಯದಲ್ಲಿ ವಿವರವಾದ ಕ್ರಮ ತೆಗೆದುಕೊಂಡ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ದೆಹಲಿ ಪೊಲೀಸರಿಗೆ 72 ಗಂಟೆಗಳ ಕಾಲಾವಕಾಶ ನೀಡಲಾಗಿದೆ” ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಸಂತ್ರಸ್ತೆಯ ಸಹೋದರಿಯ ಪ್ರಕಾರ, ಕಳೆದ ವರ್ಷ ನವೆಂಬರ್‌ನಲ್ಲಿ ಯುವತಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗಿನಿಂದ ಆತನ ಸಾವಿಗೆ ಸಂತ್ರಸ್ತೆ ಯುವತಿ ಕಾರಣ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ ಎಂದು ಹೇಳಿದ್ದಾರೆ.

“ನಿನ್ನೆ, ಕೆಲವು ಮಹಿಳೆಯರು ಮಹಿಳೆಯನ್ನು ಅಪಹರಿಸಿ, ಥಳಿಸಿ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ನಮಗೆ ಬಂದಿತ್ತು. ಸಂತ್ರಸ್ತೆಯನ್ನು ಆರೋಪಿಯ ಮನೆಯಿಂದ ರಕ್ಷಿಸಿದ್ದೇವೆ. ಸದ್ಯ ಸಂತ್ರಸ್ತೆಗೆ ಕೌನ್ಸೆಲಿಂಗ್ ಮತ್ತು ವೈದ್ಯಕೀಯ ಚಿಕಿತ್ಸೆ ನೀಡುತ್ತಿದ್ದೇವೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದೇವೆ. ಕಾನೂನಿನ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಘಟನೆಯನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದು, “ಇದು ತುಂಬಾ ನಾಚಿಕೆಗೇಡಿನ ಸಂಗತಿ. ಅಪರಾಧಿಗಳಿಗೆ ಇಷ್ಟೊಂದು ಧೈರ್ಯ ಬಂದಿದ್ದು ಹೇಗೆ..? ಕೇಂದ್ರ ಗೃಹ ಸಚಿವರು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕೆಂದು ಒತ್ತಾಯಿಸುತ್ತೇನೆ. ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ದೆಹಲಿಗರು ಇಂತಹ ಘೋರ ಅಪರಾಧ ಮತ್ತು ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ದೆಹಲಿ: 8 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ದೇಶದ ರಾಜಧಾನಿ ದೆಹಲಿಯಲ್ಲಿ ನಡೆದಿರುವ ಈ ದುರ್ಘಟನೆ ಕಂಡನಾರ್ಹ. ಅಪರಾದಿಗಳಿಗೆ ಕಟಿಣ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

Must Read

ಹಿಂದು-ಮುಸ್ಲಿಂ ರೈತ ಮೈತ್ರಿಯ ಚಹರೆ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲ

0
ಭಾರತೀಯ ಕಿಸಾನ್ ಯೂನಿಯನ್‌ನ ಸಂಸ್ಥಾಪಕ ಸದಸ್ಯ ಮತ್ತು ಹಿಂದೂ-ಮುಸ್ಲಿಂ ಏಕತೆಯ ಪ್ರತೀಕವಾಗಿದ್ದ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲವಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಜೌಲಾ ನಿಧನದಿಂದಾಗಿ ಮಹೇಂದ್ರಸಿಂಗ್ ಟಿಕೇತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್...