2020 ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನೀಡಿತ್ತು. ಆದರೆ ದೆಹಲಿ ಪೊಲೀಸರ ಕಾರಣಕ್ಕೆ ಸೆಷನ್ಸ್ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಿರಲಿಲ್ಲ. ಇದರ ವಿರುದ್ದ ವಿದ್ಯಾರ್ಥಿಗಳು ಮತ್ತೆ ದೆಹಲಿ ಹೈಕೋರ್ಟ್ ಹತ್ತಿದ್ದು, ನ್ಯಾಯಾಲಯವು ಅವರನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದಿದೆ.
‘ಆಪಾದಿತರ ವಿಳಾಸ ಪರಿಶೀಲನೆ ಆಗದ ಕಾರಣ ಜಾಮೀನು ಜಾರಿಗೆ ತಡೆ ನೀಡಬೇಕೆಂದು’ ದೆಹಲಿ ಪೋಲೀಸರು ನ್ಯಾಯಾಲಯವನ್ನು ಕೋರಿದ್ದರು. ಇದನ್ನು ಒಪ್ಪದ ಕೋರ್ಟ್ ಇಂದು ಸಂಜೆಯ ಒಳಗೆ ಬಿಡುಗಡೆ ಮಾಡಬೇಕು ಎಂದು ಆದೇಶ ನೀಡಿದೆ. ಅವರನ್ನು ಬಿಡುಗಡೆ ಮಾಡದೇ ಇರುವುದಕ್ಕೆ ಪೊಲೀಸರು ಪರಿಶೀಲನಾ ಪ್ರಕ್ರಿಯೆಯಲ್ಲಿ ವಿಳಂಬ ಮಾಡುವುದು ಸರಿಯಾದ ಕಾರಣವಲ್ಲ ಎಂದು ಕೋರ್ಟ್ ತಿಳಿಸಿದೆ.
ಇದನ್ನೂ ಓದಿ: ಜೈಲಿನಲ್ಲಿದ್ದಾಗಲೂ ಅವಳು ಹೋರಾಟ ಮಾಡುತ್ತಲೇ ಇದ್ದಳು, ಆಕೆಯ ಬಗ್ಗೆ ಹೆಮ್ಮೆಯಿದೆ: ಕಾಲಿತಾ ದೇವಂಗನಾ ಬಗ್ಗೆ ತಾಯಿ
ಕಳೆದ ವರ್ಷ ನಡೆದ ದೆಹಲಿ ಗಲಭೆಯಲ್ಲಿ ಪಿಂಜ್ರಾ ತೋಡ್ ಕಾರ್ಯಕರ್ತರಾದ ನತಾಶಾ, ದೇವಂಗಾನಾ ಮತ್ತು ವಿದ್ಯಾರ್ಥಿ ಹೋರಾಟಗಾರ ಆಸಿಫ್ ಅವರ ಕೈವಾಡವಿದೆ ಎಂದು ಆರೋಪಿಸಿ ಅವರ ವಿರುದ್ಧ ಯುಎಪಿಎ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ನತಾಶಾ ನರ್ವಾಲ್ ಮತ್ತು ದೇವಂಗನಾ ಕಾಳಿತಾ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾಗಿದ್ದಾರೆ. ಪಿಂಜ್ರಾ ತೋಡ್ ಎಂಬ ಸಂಘಟನೆಯ ಸದಸ್ಯರಾದ ಇವರು ಮೇ 2020 ರಿಂದಲೂ ಬಂಧನದಲ್ಲಿದ್ದಾರೆ. ಆಸಿಫ್ ಇಕ್ಬಾಲ್ ತನ್ಹಾ ಅವರು ಬಿ.ಎ. ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದಾರೆ.
ಇದನ್ನೂ ಓದಿ: ಜಾಮೀನು ಸಿಕ್ಕರೂ ಬಿಡುಗಡೆಯಿಲ್ಲ!-ಹೈಕೋರ್ಟ್ ಕದ ತಟ್ಟಿದ ವಿದ್ಯಾರ್ಥಿಗಳು



ಇದು ಸ್ವಾಗತಾರ್ಹ.