Homeಮುಖಪುಟದೆಹಲಿ ಗಲಭೆ: ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್‌ ಮತ್ತೆ ಬಂಧನ

ದೆಹಲಿ ಗಲಭೆ: ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್‌ ಮತ್ತೆ ಬಂಧನ

ಈ ಹಿಂದೆ, ಜನವರಿ 28ರಂದು ಶಾರ್ಜೀಲ್ ಇಮಾಮ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದ ಪೊಲೀಸರು, ಬಿಹಾರದ ಜಹಾನಾಬಾದ್‌ನಲ್ಲಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದಂತೆ ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್ ಇಮಾಮ್‌‌ರನ್ನು ದೆಹಲಿ ಪೋಲೀಸ್ ವಿಶೇ‍ಷ ವಿಭಾಗವು ಬಂಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆಯ ಕಾಯ್ದೆಯ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈಗಾಗಲೇ ಅಸ್ಸಾಂ ಅನ್ನು ಭಾರತದಿಂದ ಬೇರ್ಪಡಿಸುವುದಾಗಿ  ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಕಸ್ಟಡಿಯಲ್ಲಿರುವ ಅವರನ್ನು ಅಸ್ಸಾಂನಿಂದ ದೆಹಲಿಗೆ ಕರೆತರಲಾಗಿದೆ.

ಈ ಹಿಂದೆ, ಜನವರಿ 28ರಂದು ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದಾ ಕಾರಣಕ್ಕೆ ಶಾರ್ಜೀಲ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿದ್ದ ಪೊಲೀಸರು, ಬಿಹಾರದ ಜಹಾನಾಬಾದ್‌ನಲ್ಲಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

ಪ್ರಸ್ತುತ, ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಚೋದನಾಕಾರಿ ಭಾಷಣಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಶಾರ್ಜೀಲ್ ಆರೋಪಿಯಾಗಿದ್ದು, ಅಸ್ಸಾಂ ಪೊಲೀಸರು UAPA ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹಲವಾರು ಸ್ಥಳಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಶಾರ್ಜೀಲ್ ಅವರ ಪ್ರಚೋದನಾಕಾರಿ ಭಾಷಣಗಳಿಗೆ ಸಂಬಂಧಿಸಿದ ಪ್ರಕರಣಕ್ಕೆ ದೆಹಲಿ ಪೊಲೀಸರು ಜುಲೈ 25 ರಂದು ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಸೆಕ್ಷನ್ 124 ಎ (ದೇಶದ್ರೋಹ), 153 (ಎ) (ದ್ವೇಷವನ್ನು ಹರಡುವುದು), 153 (ದ್ವೇಷವನ್ನು ಉತ್ತೇಜಿಸುವುದು, ವಿವಿಧ ಸಮುದಾಯಗಳ ನಡುವೆ ದ್ವೇಷ ಹರಡುವುದು), 505 (ವದಂತಿಗಳನ್ನು ಹರಡುವುದು) ಸೇರಿದಂತೆ ಐಪಿಸಿ ಅಡಿಯಲ್ಲಿ 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

ಐಐಟಿ ಮುಂಬೈನ ಹಳೆಯ ವಿದ್ಯಾರ್ಥಿ, ಮಾಜಿ ಜನತಾದಳ (ಯುನೈಟೆಡ್) ನಾಯಕರಾಗಿದ್ದ, ದಿವಂಗತ ಅಕ್ಬರ್ ಇಮಾಮ್ ಅವರ ಪುತ್ರನಾದ ಶಾರ್ಜೀಲ್‌ 2017 ರಲ್ಲಿ, ಸಂಶೋಧನಾ ವಿದ್ಯಾರ್ಥಿಯಾಗಿ ಜೆಎನ್‌ಯುನ ಆಧುನಿಕ ಇತಿಹಾಸ ವಿಭಾಗಕ್ಕೆ ಸೇರಿದ್ದರು.


ಇದನ್ನೂ ಓದಿ: ಜೆಎನ್‍ಯು, ಜಾಮಿಯಾ ಮತ್ತು ಬೀದರ್‌ ಪ್ರಕರಣ: ನಮ್ಮ ಪೊಲಿಸರು ಹಿಂಗ ಯಾಕ ಅದಾರ?

ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...