Homeಮುಖಪುಟದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿ 9 ಮಂದಿಯ ಜಾಮೀನು ಅರ್ಜಿ...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿ 9 ಮಂದಿಯ ಜಾಮೀನು ಅರ್ಜಿ ವಜಾ

- Advertisement -
- Advertisement -

ದೆಹಲಿ ಗಲಭೆಗೆ (2020) ‘ದೊಡ್ಡ ಮಟ್ಟದ ಪಿತೂರಿ’ ರೂಪಿಸಿದ ಆರೋಪ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ ಏಳು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಸೆ.2) ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರ ವಿಭಾಗೀಯ ಪೀಠವು ಜಾಮೀನು ನಿರಾಕರಿಸಿ ತೀರ್ಪು ಪ್ರಕಟಿಸಿದೆ.

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಅಥರ್ ಖಾನ್, ಖಾಲಿದ್ ಸೈಫಿ, ಮೊಹಮ್ಮದ್ ಸಲೀಂ ಖಾನ್, ಶಿಫಾ ಉರ್ ರೆಹಮಾನ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಾದಾಬ್ ಅಹ್ಮದ್ ಅವರು ಜಾಮೀನು ನಿರಾಕರಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ವಿಚಾರಣೆಯ ಸಮಯದಲ್ಲಿ, ಉಮರ್ ಖಾಲಿದ್ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ತ್ರಿದೀಪ್ ಪೈಸ್ “ಯಾವುದೇ ಸಂದೇಶವನ್ನು ಕಳುಹಿಸದೆ ಕೇವಲ ವಾಟ್ಸಾಪ್ ಗುಂಪುಗಳಲ್ಲಿ ಇರುವುದು ಅಪರಾಧವಲ್ಲ” ಎಂದು ವಾದಿಸಿದ್ದಾರೆ.

ಖಾಲಿದ್‌ ಅವರಿಂದ ಹಣ ಅಥವಾ ಇತರ ಯಾವುದೇ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ. 2020ರ ಫೆಬ್ರವರಿ 23-24ರ ರಾತ್ರಿ ನಡೆದ ಸಭೆಯು ಪ್ರಾಸಿಕ್ಯೂಷನ್ ಹೇಳಿದಂತೆ ರಹಸ್ಯವಾಗಿರಲಿಲ್ಲ ಎಂದು ಪೈಸ್ ಹೇಳಿದ್ದಾರೆ.

ಖಾಲಿದ್ ಸೈಫಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲೆ ರೆಬೆಕ್ಕಾ ಜಾನ್ ಅವರು, “ನಿರುಪದ್ರವಿ’ ಸಂದೇಶಗಳ ಆಧಾರದ ಮೇಲೆ ಯುಎಪಿಎ ಅಥವಾ ಅವರ (ಪ್ರಾಸಿಕ್ಯೂಷನ್) ಅಂತಹ ಸಂದೇಶಗಳಿಂದ ಕಥೆಗಳನ್ನು ಸೃಷ್ಟಿಸಲು ಪ್ರಯತ್ನಿಸಬಹುದೇ, ಅದು ಜಾಮೀನು ನಿರಾಕರಿಸಲು ಒಂದು ಕಾರಣವಾಗಬಹುದೇ ಅಥವಾ ಯುಎಪಿಎ ಅಡಿಯಲ್ಲಿ ಮೊಕದ್ದಮೆ ಹೂಡಲು ಒಂದು ಕಾರಣವೇ?” ಎಂದು ವಾದಿಸಿದ್ದಾರೆ.

ಜೂನ್ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮೂವರು ಸಹ-ಆರೋಪಿಗಳಂತೆಯೇ ಸೈಫಿ ಜಾಮೀನಿನ ಮೇಲೆ ಬಿಡುಗಡೆಗೆ ಅರ್ಹರು ಎಂದು ಹೇಳಿದ್ದಾರೆ.

ಶಾರ್ಜೀಲ್ ಇಮಾಮ್ ಅವರು ಎಲ್ಲಾ ಸಹ-ಆರೋಪಿಗಳಿಂದ ಸಂಪೂರ್ಣವಾಗಿ ಸಂಪರ್ಕ ಕಡಿದುಕೊಂಡಿದ್ದರು. ದೆಹಲಿ ಪೊಲೀಸರು ಆರೋಪಿಸಿದಂತೆ ಅವರು ಯಾವುದೇ ರೀತಿಯ ಪಿತೂರಿ ಸಭೆಗಳ ಭಾಗವಾಗಿರಲಿಲ್ಲ ಎಂದು ಶಾರ್ಜೀಲ್ ಪರ ವಕೀಲ ತಾಲಿಬ್ ಮುಸ್ತಫಾ ವಾದಿಸಿದ್ದಾರೆ.

ಇಮಾಮ್‌ ಗಲಭೆಯ ಹಿಂದಿನ ಪಿತೂರಿಯ ಭಾಗವಾಗಿದ್ದರು ಎಂದು ಜನವರಿ 23, 2023ರವರೆಗೆ ಪ್ರಾಸಿಕ್ಯೂಷನ್ ಹೇಳಿಕೊಂಡು ಬಂದಿತ್ತು. ಆದರೆ, ಕೊನೆಗೆ ಇಮಾಮ್ ಬಿಹಾರದಲ್ಲಿ ಮಾಡಿದ ಒಂದು ಭಾಷಣವನ್ನು ಮುಂದಿಟ್ಟು ಪೊಲೀಸರು ಆರೋಪ ಮಾಡಿದ್ದಾರೆ ಎಂದು ತಾಲಿಬ್ ಮುಸ್ತಫಾ ಹೇಳಿದ್ದಾರೆ.

ದೆಹಲಿ ಪೊಲೀಸರ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ, ಜಾಮೀನು ಅರ್ಜಿಗೆ ವಿರೋಧ ವ್ಯಕ್ತಪಡಿಸಿದ್ದು, “ಆರೋಪಿಗಳು ರಾಷ್ಟ್ರ ವಿರೋಧಿ ಕೃತ್ಯವೆಸಗಿರುವ ಆರೋಪ ಇರುವುದರಿಂದ ಅವರು ಖುಲಾಸೆಗೊಳ್ಳುವವರೆಗೆ ಅಥವಾ ಶಿಕ್ಷೆಗೊಳಗಾಗುವವರೆಗೆ ಜೈಲಿನಲ್ಲಿರುವುದು ಉತ್ತಮ” ಎಂದಿದ್ದಾರೆ.

“ಹೆಚ್ಚಿನ ಗಲಭೆ ಮತ್ತು ಬೆಂಕಿ ಹಚ್ಚುವಿಕೆಗೆ ನಿರ್ದಿಷ್ಟ ದಿನವನ್ನು ಆಯ್ಕೆ ಮಾಡುವ ಮೂಲಕ ಜಾಗತಿಕವಾಗಿ ರಾಷ್ಟ್ರದ ಹೆಸರು ಕೆಡಿಸುವುದು ಆರೋಪಿಗಳ ಉದ್ದೇಶವಾಗಿತ್ತು” ಎಂದು ಮೆಹ್ತಾ ಆರೋಪಿಸಿದ್ದಾರೆ.

ವಿಶೇಷ ಸಾರ್ವಜನಿಕ ಅಭಿಯೋಜಕ ಅಮಿತ್ ಪ್ರಸಾದ್ ಕೂಡ ದೆಹಲಿ ಪೊಲೀಸರನ್ನು ಪ್ರತಿನಿಧಿಸಿದ್ದರು.

ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರನ್ನೊಳಗೊಂಡ ಇನ್ನೊಂದು ಸಮನ್ವಯ ಪೀಠವು ಆರೋಪಿ ತಸ್ಲೀಮ್ ಅಹ್ಮದ್‌ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದೆ.

ತಸ್ಲೀಮ್ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲ ಮೆಹಮೂದ್ ಪ್ರಾಚಾ ಅವರು, ವಿಚಾರಣೆ ವಿಳಂಬವನ್ನು ಉಲ್ಲೇಖಿಸಿ ಜಾಮೀನು ನೀಡುವಂತೆ ಕೋರಿದ್ದರು.

2020ರಲ್ಲಿ ದೆಹಲಿ ಪೊಲೀಸರ ವಿಶೇಷ ವಿಭಾಗವು ಭಾರತೀಯ ದಂಡ ಸಂಹಿತೆ, 1860 (ಐಪಿಸಿ) ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967ರ (ಯುಎಪಿಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ಸಂಖ್ಯೆ 59 ಅನ್ನು ದಾಖಲಿಸಿತ್ತು.

ಈ ಪ್ರಕರಣದಲ್ಲಿ ತಾಹಿರ್ ಹುಸೇನ್, ಉಮರ್ ಖಾಲಿದ್, ಖಾಲಿದ್ ಸೈಫಿ, ಇಶಾರತ್ ಜಹಾನ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ, ಶಿಫಾ-ಉರ್-ರೆಹಮಾನ್, ಆಸಿಫ್ ಇಕ್ಬಾಲ್ ತನ್ಹಾ, ಶಾದಾಬ್ ಅಹಮದ್, ತಸ್ಲೀಮ್ ಅಹಮದ್, ಸಲೀಂ ಮಲಿಕ್, ಮೊಹಮ್ಮದ್ ಸಲೀಮ್ ಖಾನ್, ಅಥರ್ ಖಾನ್, ಸಫೂರ ಝರ್ಗರ್, ಶಾರ್ಜೀಲ್ ಇಮಾಮ್, ಫೈಝಾನ್ ಖಾನ್ ಮತ್ತು ನತಾಶಾ ನರ್ವಾಲ್ ಅವರನ್ನು ಆರೋಪಿಗಳಾಗಿ ಗುರುತಿಸಲಾಗಿದೆ.

ಈ ಪೈಕಿ ಆಸಿಫ್ ಇಕ್ಬಾಲ್ ತನ್ಹಾ, ನತಾಶಾ ನರ್ವಾಲ್ ಮತ್ತು ಸಫೂರ ಝರ್ಗರ್ ಅವರಿಗೆ ಈಗಾಗಲೇ ಜಾಮೀನು ದೊರೆತಿದೆ.

ಅಲ್ಪಸಂಖ್ಯಾತ ಶಾಲೆಗಳು ಮತ್ತು ಆರ್‌ಟಿಇ: 2014ರ ತೀರ್ಪಿನ ಕುರಿತು ವಿಸ್ತೃತ ಪೀಠದ ಪರಿಶೀಲನೆ ಕೋರಿದ ಸುಪ್ರೀಂ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...