Homeಮುಖಪುಟದೆಹಲಿ ಗಲಭೆ ಪ್ರಕರಣ: 11 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ದೆಹಲಿ ಗಲಭೆ ಪ್ರಕರಣ: 11 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಫೆಬ್ರವರಿ 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ಸಂಭವಿಸಿದ್ದ ಗಲಭೆಗಳ ಸಂದರ್ಭ ಬೆಂಕಿ ಹಚ್ಚಿದ್ದ, ಮಾರಕ ಆಯುಧಗಳೊಂದಿಗೆ ಗಲಭೆ ನಡೆಸಿದ್ದ ಮತ್ತು ಅಕ್ರಮವಾಗಿ ಗುಂಪು ಸೇರಿದ್ದ ಆರೋಪಗಳನ್ನು ಎದುರಿಸುತ್ತಿದ್ದ 11 ಜನರನ್ನು ದೆಹಲಿಯ ಕರ್ಕರಡೂಮಾ ನ್ಯಾಯಾಲಯವು ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

“ಪ್ರಾಸಿಕ್ಯೂಷನ್ ಸಾಕ್ಷಿ 9 ಸಹಾಯಕ ಸಬ್-ಇನ್ಸ್ಪೆಕ್ಟರ್ ಜಹಾಂಗೀರ್ ಮತ್ತು  ಪ್ರಾಸಿಕ್ಯೂಷನ್ ಸಾಕ್ಷಿ 10 ಸಹಾಯಕ ಸಬ್-ಇನ್ಸ್ಪೆಕ್ಟರ್ ವನ್ವೀರ್ ಅವರು ಫೆಬ್ರವರಿ 24, 2020ರಂದು ಗಲಭೆಕೋರರಲ್ಲಿ ಆರೋಪಿಗಳನ್ನು ನಿಜವಾಗಿಯೂ ನೋಡಿ ಗುರುತಿಸಿದ್ದರೆ, ಅವರು ಇಷ್ಟು ದೀರ್ಘಾವಧಿಯವರೆಗೆ (10 ತಿಂಗಳುಗಳು) ಮೌನವಾಗಿದ್ದು ಏಕೆ? ಎಂದು ಕರ್ಕಾರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಮೇ 14 ರಂದು ಆರೋಪಿಗಳನ್ನು ಖುಲಾಸೆಗೊಳಿಸುವಾಗ ತಮ್ಮ ಆದೇಶದಲ್ಲಿ ಪ್ರಶ್ನಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಈ ಪ್ರಕರಣದಲ್ಲಿ ಆರೋಪಿಗಳನ್ನು ಈಗಾಗಲೇ ಬಂಧಿಸಿರುವಾಗ, ಪ್ರಾಸಿಕ್ಯೂಷನ್ ಸಾಕ್ಷಿ 9 ಸಹಾಯಕ ಸಬ್-ಇನ್ಸ್ಪೆಕ್ಟರ್ ಜಹಾಂಗೀರ್‌ ಅವರಿಗೆ ಆರೋಪಿಗಳ ಫೋಟೋಗಳನ್ನು ತೋರಿಸುವುದು ಅಸ್ವಾಭಾವಿಕ ಕ್ರಮವೆಂದು ತೋರುತ್ತದೆ. ಆರೋಪಿಗಳನ್ನು ಗುರುತಿಸಲು ಜಹಾಂಗೀರ್ ಅವರನ್ನು ಕೃತಕವಾಗಿ ಪ್ರತ್ಯಕ್ಷದರ್ಶಿಯನ್ನಾಗಿ ಮಾಡಲಾಗಿದೆ ಎಂಬ ಭಾವನೆ ಮೂಡುತ್ತದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.ಪೋಲಿಸರು ಆರೋಪಿಗಳನ್ನು ಗುರುತಿಸಿದ್ದು ವಿವಾದ ಮತ್ತು ಅನುಮಾನದಿಂದ ಹೊರತಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಗಲಭೆಯ ಸಮಯದಲ್ಲಿ ಗೋಕಲ್ಪುರಿಯಲ್ಲಿರುವ ತಮ್ಮ ‘ಕ್ರೌನ್ ಮೆಡಿಕೋಸ್’ ಅಂಗಡಿಗೆ ಬೆಂಕಿ ಹಚ್ಚಲಾಗಿದೆ, ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ಮೊಹಮ್ಮದ್ ಇಮ್ರಾನ್ ಶೇಖ್ ಎಂಬವರು ನೀಡಿದ್ದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿತ್ತು.

ದೂರುದಾರರ ಅಂಗಡಿಯನ್ನು ಸುಟ್ಟು ಲೂಟಿ ಮಾಡಿದ್ದನ್ನು ಫೋಟೋಗಳು ಶಂಕಾತೀತವಾಗಿ ಸಾಬೀತುಗೊಳಿಸಿವೆ ಎಂದು ಹೇಳಿದ ನ್ಯಾಯಾಲಯ, 12 ಪ್ರಾಸಿಕ್ಯೂಷನ್ ಸಾಕ್ಷಿಗಳ ಹೇಳಿಕೆಗಳನ್ನು ನೆಚ್ಚಿಕೊಂಡಿದ್ದ ಪೋಲಿಸರು ಆರೋಪಿಗಳನ್ನು ಗುರುತಿಸುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದ್ದಾರೆ ಎಂದಿದೆ.

ಆರೋಪಿಗಳ ವಿರುದ್ಧದ ಆರೋಪಗಳು ಶಂಕಾತೀತವಾಗಿ ಸಾಬೀತಾಗಿಲ್ಲ ಎನ್ನುವುದನ್ನು ಗಮನಿಸಿದ ನ್ಯಾಯಾಲಯವು, ಅಂಕಿತ್ ಚೌಧರಿ, ಸುಮಿತ್, ಪಪ್ಪು, ವಿಜಯ, ಆಶಿಷ್ ಕುಮಾರ, ಸೌರಭ ಕೌಶಿಕ್, ಭೂಪೇಂದರ್, ಶಕ್ತಿಸಿಂಗ್, ಸಚಿನ್ ಕುಮಾರ್, ರಾಹುಲ್ ಮತ್ತು ಯೋಗೇಶ್ ಅವರನ್ನು ಖುಲಾಸೆಗೊಳಿಸಿದೆ.

2020ರ ಫೆಬ್ರವರಿ 24 ರಿಂದ 26 ರವರೆಗೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿಬೀಳಿಸಿದ್ದ ಈಶಾನ್ಯ ದೆಹಲಿ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದ್ದು ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಕೋಟ್ಯಂತರ ಮೌಲ್ಯದ ಆಸ್ತಿಗೆ ಹಾನಿಯಾಗಿತ್ತು. ಗಲಭೆಯ ನಂತರ ಈಶಾನ್ಯ ಜಿಲ್ಲಾ ಪೊಲೀಸರು ಒಟ್ಟು 700 ಪ್ರಕರಣಗಳನ್ನು ದಾಖಲಿಸಿದ್ದರು.

ನರೇಗಾ ಹಗರಣ: ಗುಜರಾತ್ ಸಚಿವ ಬಚು ಖಬಾದ್ ಪುತ್ರನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...