Homeಮುಖಪುಟದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ...

ದೆಹಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ಅ.31ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಪ್ರಾಸಿಕ್ಯೂಷನ್‌ಗೆ ಹೆಚ್ಚುವರಿ ಸಮಯ ನೀಡಲು ನಿರಾಕರಿಸಿದ ನ್ಯಾಯಾಲಯ

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಶಿಫಾ ಉರ್ ರೆಹಮಾನ್ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಯಾಗಿ ಅಫಿಡವಿಟ್‌ಗಳನ್ನು ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ನೀಡಬೇಕೆಂಬ ದೆಹಲಿ ಪೊಲೀಸರ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು (ಅಕ್ಟೋಬರ್ 27) ತಿರಸ್ಕರಿಸಿದೆ.

ಸಾಕಷ್ಟು ಸಮಯ ನೀಡಲಾಗಿದೆ ಎಂದು ಹೇಳಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ, ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ (ಅ.31) ಮುಂದೂಡಿ, ಈ ಮಧ್ಯೆ ಪ್ರತಿ ಅಫಿಡವಿಟ್ ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದೆ.

ವಿಚಾರಣೆ ವೇಳೆ ದೆಹಲಿ ಪೊಲೀಸರ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್.ವಿ. ರಾಜು, ಪ್ರತಿ-ಅಫಿಡವಿಟ್ ಸಲ್ಲಿಸಲು ಸಮಯ ಕೋರಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕುಮಾರ್ ಅವರು, “ನಾವು ನಿಮಗೆ ಸಾಕಷ್ಟು ಸಮಯ ನೀಡಿದ್ದೇವೆ. ನೀವು ಮೊದಲ ಬಾರಿಗೆ ಹಾಜರಾಗುತ್ತಿರಬಹುದು. ಕಳೆದ ಬಾರಿ ನಾವು ನೋಟಿಸ್ ಜಾರಿ ಮಾಡುವಂತೆ ಮತ್ತು ಮುಕ್ತ ನ್ಯಾಯಾಲಯದಲ್ಲಿ ಅಕ್ಟೋಬರ್ 27ರಂದು ಈ ವಿಷಯವನ್ನು ಆಲಿಸಿ ಇತ್ಯರ್ಥಪಡಿಸುವುದಾಗಿ ಹೇಳಿದ್ದೆವು” ಎಂದಿದ್ದಾರೆ.

ಇದೇ ವೇಳೆ ನ್ಯಾಯಮೂರ್ತಿ ಕುಮಾರ್ ಅವರು ಜಾಮೀನು ಪ್ರಕರಣದಲ್ಲಿ ಪ್ರತಿ-ಅಫಿಡವಿಟ್‌ನ ಮಹತ್ವವನ್ನು ಪ್ರಶ್ನಿಸಿದ್ದಾರೆ. ಎಎಸ್‌ಜಿ ಪ್ರತಿ ಅಫಿಡವಿಟ್ ದಾಖಲಿಸಲು ಎರಡು ವಾರಗಳ ಸಮಯ ಕೇಳಿದಾಗ ನ್ಯಾಯಾಧೀಶರು ಅದಕ್ಕೆ ಒಪ್ಪಿಲ್ಲ. ಒಂದು ವಾರದ ಕಾಲಾವಕಾಶ ಕೇಳಿದಾಗಲೂ ಒಪ್ಪಿಗೆ ನೀಡಿಲ್ಲ. ಇದು ತೀರ್ಪಿನ ತುರ್ತು ಸ್ವರೂಪವನ್ನು ತೋರಿಸುತ್ತದೆ.

ಉಮರ್ ಖಾಲಿದ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಅರ್ಜಿದಾರರು ಕಳೆದ 5 ವರ್ಷಗಳಿಗೂ ಹೆಚ್ಚು ಸಮಯದಿಂದ ಜೈಲಿನಲ್ಲಿದ್ದಾರೆ ಎಂಬುವುದನ್ನು ಎತ್ತಿ ತೋರಿಸಿದ್ದಾರೆ. ಹಿರಿಯ ವಕೀಲ ಎ.ಎಂ. ಸಿಂಘ್ವಿ ಅವರು ಇಡೀ ಪ್ರಕರಣದಲ್ಲಿ ವಿಳಂಬವನ್ನು ಉಲ್ಲೇಖಿಸಿದ್ದು, ಇನ್ನೂ ಹೆಚ್ಚಿನ ವಿಳಂಬ ಆಗಬಾರದು ಎಂದು ಮನವಿ ಮಾಡಿದ್ದಾರೆ.

ಅಂತಿಮವಾಗಿ, ನ್ಯಾಯಪೀಠ ಈ ವಿಷಯವನ್ನು ಶುಕ್ರವಾರಕ್ಕೆ ಮುಂದೂಡಲು ಒಪ್ಪಿತು. ಎಎಸ್‌ಜಿ ರಾಜು ಅವರಿಗೆ, “ನೀವು ಏನಾದರೂ ಯೋಚಿಸಬಹುದೇ ಎಂದು ಪರಿಶೀಲಿಸಿ” ಎಂದು ನ್ಯಾ. ಕುಮಾರ್ ಹೇಳಿದ್ದಾರೆ. ವಿಳಂಬದ ಆಧಾರದ ಮೇಲೆ ಜಾಮೀನು ನೀಡಬಹುದೇ ಎಂದು ಪರೋಕ್ಷವಾಗಿ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಎಎಸ್‌ಜಿ ತಾವು ದಾಖಲೆಗಳನ್ನು ಪರಿಶೀಲಿಸುವುದಾಗಿ ಹೇಳಿದರೂ, “ಮೇಲ್ನೋಟಕ್ಕೆ ಕಾಣುವ ವಿಷಯಗಳು ಕೆಲವೊಮ್ಮೆ ತಪ್ಪು ತಿಳುವಳಿಕೆಗೆ ಕಾರಣವಾಗಬಹುದು” ಎಂದಿದ್ದಾರೆ. ಇದಕ್ಕೆ ನ್ಯಾ. ಕುಮಾರ್, “ತಾವು ಎಲ್ಲವನ್ನೂ ವಿವರವಾಗಿ ಓದಿಲ್ಲವಾದರೂ, ಇದು ಜಾಮೀನಿನ ಪ್ರಕರಣವಾಗಿದ್ದು, ಆರೋಪಿಗಳು ಈಗಾಗಲೇ ಐದು ವರ್ಷಗಳ ಕಾಲಾವಧಿಯನ್ನು ಜೈಲಿನಲ್ಲಿ ಪೂರ್ಣಗೊಳಿಸಿದ್ದಾರೆ” ಎಂದು ಹೇಳಿದ್ದಾರೆ. ಇದರಿಂದ ವಿಳಂಬದ ಆಧಾರದ ಮೇಲೆ ಜಾಮೀನು ಪರಿಗಣಿಸಬಹುದು ಎಂಬ ಸೂಚನೆಯಿದೆ.

ಹಿರಿಯ ವಕೀಲರಾದ ಕಪಿಲ್ ಸಿಬಲ್ (ಖಾಲಿದ್ ಪರವಾಗಿ), ಎ.ಎಂ. ಸಿಂಘ್ವಿ (ಫಾತಿಮಾ ಪರವಾಗಿ), ಸಿದ್ಧಾರ್ಥ್ ದೇವ್ (ಇಮಾಮ್ ಪರವಾಗಿ), ಸಿದ್ಧಾರ್ಥ್ ಅಗರ್ವಾಲ್ ಮುಂತಾದವರು ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದಾರೆ.

ಸೆಪ್ಟೆಂಬರ್ 19ರಂದು, ಈ ವಿಷಯವನ್ನು ನ್ಯಾಯಮೂರ್ತಿ ಕುಮಾರ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠದ ಮುಂದೆ ಇಡಲಾಗಿತ್ತು. ಆದರೆ, ಕಪಿಲ್ ಸಿಬಲ್ ಅವರು ಈ ಹಿಂದೆ ಅವರ ಕೊಠಡಿಯಲ್ಲಿ ಸಹವರ್ತಿಯಾಗಿದ್ದರಿಂದ ಅವರು ಹಿಂದೆ ಸರಿದಿದ್ದರು. ಅದಕ್ಕೂ ಮೊದಲು, ಸೆಪ್ಟೆಂಬರ್ 12 ರಂದು ಪ್ರಕರಣವನ್ನು ಮೊದಲು ಪಟ್ಟಿ ಮಾಡಿದಾಗ, ಪೀಠವು ಫೈಲ್‌ಗಳನ್ನು ತಡವಾಗಿ ಸ್ವೀಕರಿಸಿದ್ದರಿಂದ ನ್ಯಾಯಾಲಯವು ಪ್ರಕರಣವನ್ನು ಆಲಿಸಲು ಸಾಧ್ಯವಾಗಿರಲಿಲ್ಲ.

ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 2ರಂದು ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಮೂರ್ತಿ ನವೀನ್ ಚಾವ್ಲಾ ಮತ್ತು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ದೆಹಲಿ ಪೊಲೀಸರ ವಿಶೇಷ ಘಟಕವು ದಾಖಲಿಸಿರುವ 2020ರ ಎಫ್‌ಐಆರ್ ಸಂಖ್ಯೆ 59 ರಲ್ಲಿ ತೀರ್ಪು ಪ್ರಕಟಿಸಿತ್ತು.

ಮುಂದಿನ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಅವರನ್ನು ಶಿಫಾರಸು ಮಾಡಿದ ಸಿಜೆಐ ಬಿ.ಆರ್‌. ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...