Homeಮುಖಪುಟದೆಹಲಿ ಗಲಭೆ ಪ್ರಕರಣ | ವಾಟ್ಸಾಪ್‌ನಲ್ಲಿ ಗಲಭೆಗೆ ಕರೆ ನೀಡಿಲ್ಲ - ಕೋರ್ಟ್‌ಗೆ ತಾಹಿರ್ ಹುಸೇನ್

ದೆಹಲಿ ಗಲಭೆ ಪ್ರಕರಣ | ವಾಟ್ಸಾಪ್‌ನಲ್ಲಿ ಗಲಭೆಗೆ ಕರೆ ನೀಡಿಲ್ಲ – ಕೋರ್ಟ್‌ಗೆ ತಾಹಿರ್ ಹುಸೇನ್

- Advertisement -
- Advertisement -

2020 ರ ಗಲಭೆಗಳ ಪಿತೂರಿ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪ್ರಸ್ತುತಪಡಿಸಿದ ಅವರ ವಾಟ್ಸಾಪ್ ಚಾಟ್‌ಗಳಲ್ಲಿ, ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಳ್ಳಲು ಅಥವಾ ಹಿಂಸಾಚಾರದಲ್ಲಿ ಭಾಗವಹಿಸುವ ಬಗ್ಗೆ ಯಾವುದೇ ಸೂಚನೆಗಳು ಹೊಂದಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಶುಕ್ರವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ದೆಹಲಿ ಗಲಭೆ ಪ್ರಕರಣ

ಪ್ರಕರಣದಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್‌ ಉಲ್ಲೇಖಿಸಿರುವ ಚಾಟ್‌ಗಳಲ್ಲಿ “ಚಕ್ಕಾ ಜಾಮ್” ಅಥವಾ ರಸ್ತೆ ತಡೆಗಳು ಮತ್ತು ಶಾಂತಿಯುತ ಪ್ರತಿಭಟನೆಗಳನ್ನು ಮಾತ್ರ ಉಲ್ಲೇಖಿಸುತ್ತವೆಯೇ ಹೊರತು ಹಿಂಸಾಚಾರ ಅಥವಾ ಶಸ್ತ್ರಾಸ್ತ್ರಗಳ ಬಳಕೆಯನ್ನಲ್ಲ ಎಂದು ಹುಸೇನ್ ಅವರ ವಕೀಲ ರಾಜೀವ್ ಮೋಹನ್ ವಾದಿಸಿದ್ದಾರೆ. ದೆಹಲಿ ಗಲಭೆ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಚಕ್ಕಾ ಜಾಮ್ ಭಯೋತ್ಪಾದಕ ಕೃತ್ಯವಲ್ಲ… ದೆಹಲಿಯ ಪೊಲೀಸರ ಪ್ರಕಾರ ಜನರನ್ನು ಭೇಟಿಯಾಗುವುದು ಮತ್ತು ಪ್ರತಿಭಟಿಸುವುದು ಕೂಡ ಭಯೋತ್ಪಾದಕ ಚಟುವಟಿಕೆಯೇ?” ಮೋಹನ್ ನ್ಯಾಯಾಲಯಕ್ಕೆ ಕೇಳಿದ್ದಾರೆ. “ಭಾರತ ಸರ್ಕಾರ ಅಥವಾ ಅದರ ತನಿಖೆಗಳ ವಿರುದ್ಧ ನಾವು ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳಬೇಕು ಎಂದು ವಾಟ್ಸಾಪ್ ಸಂದೇಶಗಳಲ್ಲಿ ಎಲ್ಲಿಯೂ ಉಲ್ಲೇಖಿಸಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜ್ಪೇಯ್ ಅವರ ನ್ಯಾಯಾಲಯವು ಪ್ರಕರಣದ ಆರೋಪಗಳನ್ನು ರೂಪಿಸುವ ಕುರಿತು ವಾದಗಳನ್ನು ಆಲಿಸುತ್ತಿತ್ತು.

2020ರ ಫೆಬ್ರವರಿಯಲ್ಲಿ, ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುವವರ ವಿರುದ್ಧ ಬಿಜೆಪಿ ಬೆಂಬಲಿಗರು ದಾಳಿ ಮಾಡಿದ್ದರು. ಇದು ಹಿಂಸಾಚಾರಕ್ಕೆ ತಿರುಗಿ, ಹಿಂಸಾಚಾರದಲ್ಲಿ 53 ಮಂದಿ ಸಾವನ್ನಪ್ಪಿ, ನೂರಾರು ಮಂದಿ ಗಾಯಗೊಂಡಿದ್ದರೆ. ಕೊಲ್ಲಲ್ಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಇದರ ನಂತರ ದೆಹಲಿ ಪೊಲೀಸರು ಹಿಂಸಾಚಾರದ ಹಿಂದಿನ ಸಂಚಿನ ಬಗ್ಗೆ ತನಿಖೆ ನಡೆಸಲು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಭಯೋತ್ಪಾದನಾ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ಈ ವೇಳೆ ಅವರು ತಾಹಿರ್ ಹುಸೇನ್ ಸೇರಿದಂತೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಆರು ಆರೋಪಿಗಳು ಜಾಮೀನು ಪಡೆದಿದ್ದರೆ, 12 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ಎಸಗಿದ ವೈಯಕ್ತಿಕ ಕೃತ್ಯಗಳಿಗೆ ಪೊಲೀಸರು ಈಗಾಗಲೇ ಎಫ್‌ಐಆರ್ ಮತ್ತು ಆರೋಪಪಟ್ಟಿ ದಾಖಲಿಸಿದ್ದಾರೆ ಎಂದು ಹುಸೇನ್ ಪರ ವಕೀಲರು ವಾದಿಸಿದ್ದಾರೆ. ಆರೋಪಿಗಳು ಸಶಸ್ತ್ರ ದಂಗೆ ಅಥವಾ ಗಲಭೆಯನ್ನು ಉತ್ತೇಜಿಸಿದ್ದಾರೆ ಎಂಬುದಕ್ಕೆ ಪುರಾವೆಗಳಿಲ್ಲದಿದ್ದರೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)ಯನ್ನು ಪ್ರಕರಣಕ್ಕೆ ಅನ್ವಯಿಸಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ಪ್ರವಾಸೋದ್ಯಮ ಕುಸಿತ ಎಂದ ವ್ಯಕ್ತಿಯ ವಿರುದ್ಧ ಗೋವಾ ಅಧಿಕಾರಿಗಳು ದೂರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...