Homeಮುಖಪುಟದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್...

ದೆಹಲಿ ಗಲಭೆ ಪ್ರಕರಣ | ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ 2020ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಸಚಿವ ಹಾಗೂ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಸೇರಿದಂತೆ ಇತರರ ಪಾತ್ರ ಇರುವ ಬಗ್ಗೆ ಎಫ್‌ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸಲು ದೆಹಲಿ ನ್ಯಾಯಾಲಯ ಮಂಗಳವಾರ (ಏ.1) ನಿರ್ದೇಶಿಸಿದೆ.

ಕಪಿಲ್ ಮಿಶ್ರಾ, ದಯಾಳ್‌ಪುರ ಪೊಲೀಸ್ ಠಾಣೆಯ ಆಗಿನ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಹೆಚ್‌ಒ), ಬಿಜೆಪಿ ಶಾಸಕ ಮೋಹನ್ ಸಿಂಗ್ ಬಿಶ್ತ್ ಮತ್ತು ಪಕ್ಷದ ಮಾಜಿ ಶಾಸಕ ಜಗದೀಶ್ ಪ್ರಧಾನ್ ಸೇರಿದಂತೆ ಇತರ ಐವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಯಮುನಾ ವಿಹಾರ್ ನಿವಾಸಿ ಮೊಹಮ್ಮದ್ ಇಲ್ಯಾಸ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಪುರಸ್ಕರಿಸಿದ್ದಾರೆ.

2020ರ ಫೆಬ್ರವರಿ 24 ಮತ್ತು 26ರ ನಡುವೆ ಈಶಾನ್ಯ ದೆಹಲಿಯಲ್ಲಿ ಕೋಮು ಹಿಂಸಾಚಾರ ನಡೆದಿತ್ತು. ಇದರಲ್ಲಿ 53 ಜನರು ಸಾವನ್ನಪ್ಪಿದ್ದರು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು ಮತ್ತು ಕೋಟ್ಯಂತರ ಮೌಲ್ಯದ ಆಸ್ತಿ-ಪಾಸ್ತಿ ಹಾನಿಯಾಗಿತ್ತು.

ಈ ವರ್ಷದ ಫೆಬ್ರವರಿಯಲ್ಲಿ, ದೆಹಲಿ ಪೊಲೀಸರು ದೂರುದಾರರ ಅರ್ಜಿಯನ್ನು ವಿರೋಧಿಸಿದ್ದರು. ಮಿಶ್ರಾ ಅವರನ್ನು ಈ ವಿಷಯದಲ್ಲಿ ಸಿಲುಕಿಸಲಾಗುತ್ತಿದೆ. 2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಅವರ ಪಾತ್ರವಿಲ್ಲ ಎಂದು ಹೇಳಿದ್ದರು.

ಗಲಭೆಯ ಹಿಂದಿನ ಪಿತೂರಿಯಲ್ಲಿ ಮಿಶ್ರಾ ಅವರ ಪಾತ್ರದ ಬಗ್ಗೆ ಈಗಾಗಲೇ ತನಿಖೆ ಮಾಡಲಾಗಿದೆ. ಅವರ ವಿರುದ್ಧ ಯಾವುದೇ ದೋಷಾರೋಪಣೆ ಕಂಡುಬಂದಿಲ್ಲ ಎಂದು ವಿಶೇಷ ಸಾರ್ವಜನಿಕ ಅಭಿಯೋಜಕ ಅಮಿತ್ ಪ್ರಸಾದ್ ನ್ಯಾಯಾಲಯಕ್ಕೆ ತಿಳಿಸಿದ್ದರು.

ಕಪಿಲ್ ಮಿಶ್ರಾ ಮತ್ತು ಇತರರು ಈಶಾನ್ಯ ದೆಹಲಿಯ ಕರ್ದಂಪುರಿಯಲ್ಲಿ ರಸ್ತೆ ತಡೆದು ವ್ಯಾಪಾರಸ್ಥರ ತಳ್ಳುಗಾಡಿಗಳನ್ನು ನಾಶಪಡಿಸಿರುವುದನ್ನು ನೋಡಿರುವುದಾಗಿ ಅರ್ಜಿದಾರ ಇಲ್ಯಾಸ್ ಅವರು ಹೇಳಿದ್ದರು. ಈಶಾನ್ಯ ದೆಹಲಿಯ ಆಗಿನ ಪೊಲೀಸ್ ಆಯುಕ್ತರು (ಡಿಸಿಪಿ) ಮಿಶ್ರಾ ಪಕ್ಕದಲ್ಲಿ ಇತರ ಪೊಲೀಸ್ ಸಿಬ್ಬಂದಿಯೊಂದಿಗೆ ನಿಂತು ಪ್ರತಿಭಟನಾಕಾರರಿಗೆ ಪ್ರದೇಶವನ್ನು ಖಾಲಿ ಮಾಡುವಂತೆ ಎಚ್ಚರಿಕೆ ನೀಡುತ್ತಿದ್ದರು ಎಂದು ಅವರು ಹೇಳಿಕೊಂಡಿದ್ದರು.

ಬಿಜೆಪಿ ನಾಯಕರಾದ ಪ್ರಧಾನ್ ಮತ್ತು ಬಿಶ್ತ್ ಅವರೊಂದಿಗೆ ದಯಾಳ್‌ಪುರದ ಎಸ್‌ಎಚ್‌ಒ ಈಶಾನ್ಯ ದೆಹಲಿಯಾದ್ಯಂತ ಮಸೀದಿಗಳನ್ನು ಧ್ವಂಸ ಮಾಡಿದ್ದನ್ನು ತಾನು ನೋಡಿರುವುದಾಗಿ ವಿವರಿಸಿದ್ದರು.

2020ರ ಫೆಬ್ರವರಿಯಲ್ಲಿ ನಡೆದ ದೆಹಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೋಮು ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಜನತಾ ಪ್ರಾತಿನಿಧ್ಯ ಕಾಯ್ದೆ (ಆರ್‌ಪಿಎ) ಅಡಿಯಲ್ಲಿ ದಾಖಲಾಗಿರುವ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಶ್ರಾ ವಿರುದ್ಧದ ಆರೋಪದ ಕುರಿತು ವಾದಗಳನ್ನು ಆಲಿಸಲು ಪ್ರಾರಂಭಿಸುವುದಾಗಿ ಮಾರ್ಚ್‌ನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿಳಿಸಿದೆ.

ಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10 ಲಕ್ಷ ಪಾವತಿಸಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...