Homeರಾಷ್ಟ್ರೀಯದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

ದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

- Advertisement -
- Advertisement -

ದೆಹಲಿಯ ಜಹಾಂಗೀರಪುರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಕೋಮು ಘರ್ಷಣೆಗೂ ಮೊದಲು ನಡೆದ ಕಾನೂನುಬಾಹಿರ ಮೆರವಣಿಗೆಯನ್ನು ತಡೆಯದೆ ಇದ್ದಿದ್ದಕ್ಕಾಗಿ ಸ್ಥಳೀಯ ನ್ಯಾಯಾಲಯವು ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿದೆ. ಘಟನೆಯಲ್ಲಿನ ‘ಸಂಪೂರ್ಣ ವಿಫಲತೆ’ಯನ್ನು ಪೊಲೀಸ್‌ ಮುಖ್ಯಸ್ಥರು ತನಿಖೆ ನಡೆಸಬೇಕು ಎಂದಿರುವ ನ್ಯಾಯಾಲಯ ಘಟನೆಯಲ್ಲಿ ಒಳಗೊಂಡಿರುವ ಅಧಿಕಾರಿಗಳ ಹೊಣೆಗಾರಿಕೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಕೋಮು ಘರ್ಷಣೆಯಲ್ಲಿ ಭಾಗಿಯಾದ ಎಂಟು ಜನರ ಜಾಮೀನನ್ನು ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗಳು ಸ್ಥಳೀಯ ಕ್ರಿಮಿನಲ್‌ಗಳಾಗಿದ್ದು, ಅವರು ಬಿಡುಗಡೆಯಾದರೆ ಸಾಕ್ಷಿಗಳನ್ನು ಬೆದರಿಸಬಹುದು ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ತಿಂಗಳು ರಾಮನವಮಿ ಮೆರವಣಿಗೆಯ ಸಂದರ್ಭ ವಾಯುವ್ಯ ದೆಹಲಿ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಇಪ್ಪತ್ತು ಜನರನ್ನು ಬಂಧಿಸಲಾಗಿದೆ. ಗಲಭೆಯಲ್ಲಿ ಎಂಟು ಪೊಲೀಸರು ಮತ್ತು ನಾಗರಿಕರು ಗಾಯಗೊಂಡಿದ್ದಾರೆ. ಪೊಲೀಸರ ಅನುಮತಿಯಿಲ್ಲದೆ ಮೆರವಣಿಗೆ ನಡೆದಿದ್ದು ಮಾತ್ರವಲ್ಲದೆ, ಪೊಲೀಸರ ಸಮ್ಮುಖದಲ್ಲಿಯೇ ಅಲ್ಪಸಂಖ್ಯಾತ ಸಮುದಾಯದವರೊಂದಿಗೆ ವಾಗ್ವಾದ ನಡೆಸಲಾಗಿತ್ತು.

ಇದನ್ನೂ ಓದಿ: ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

ಅಕ್ರಮ ಮೆರವಣಿಗೆಯನ್ನು ನಿಲ್ಲಿಸಿ ಗುಂಪನ್ನು ಚದುರಿಸುವ ಬದಲು, ಪೊಲೀಸ್ ಅಧಿಕಾರಿಗಳು ದಾರಿಯಲ್ಲಿ ಅದರೊಂದಿಗೆ ಸಾಗುತ್ತಿರುವುದು ಕಂಡುಬಂದಿದೆ ಎಂದು ನ್ಯಾಯಾಲಯ ಹೇಳಿದೆ.

ದೆಹಲಿ ಗಲಭೆಗೂ ಮೊದಲು ಒಟ್ಟು ಮೂರು ಮೆರವಣಿಗೆ ನಡೆದಿದ್ದು, ಅದರಲ್ಲಿ ಕೊನೆಯ ಮೆರವಣೆಗೆಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಈ ಮೆರವಣಿಗೆಯನ್ನು ಬಿಜೆಪಿ ಬೆಂಬಲಿತ ವಿಹಿಂಪ ಮತ್ತು ಬಜರಂಗದಳ ಆಯೋಜಿಸಿತ್ತು.

“ಇನ್‌ಸ್ಪೆಕ್ಟರ್ ರಾಜೀವ್ ರಂಜನ್ ನೇತೃತ್ವದ ಜಹಾಂಗೀರ್‌ಪುರಿ ಪೊಲೀಸ್ ಠಾಣೆಯ ಸ್ಥಳೀಯ ಸಿಬ್ಬಂದಿ ಮತ್ತು ಇತರ ಅಧಿಕಾರಿಗಳು…ಆಪಾದಿತ ಅಕ್ರಮ ಮೆರವಣಿಗೆಯ ಜೊತೆಯಲ್ಲಿದ್ದರು ಎಂದು ಎಫ್‌ಐಆರ್‌ನಲ್ಲಿರುವ ವಿಷಯಗಳು ತೋರಿಸುತ್ತವೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

“ಯಾವುದೇ ಅನುಮತಿಯಿಲ್ಲದೆ ನಡೆದ ಮೆರವಣಿಗೆಯನ್ನು ತಡೆಯುವಲ್ಲಿ ಸ್ಥಳೀಯ ಪೊಲೀಸರ ಸಂಪೂರ್ಣ ವೈಫಲ್ಯವನ್ನು ಇದು ಪ್ರಾಥಮಿಕವಾಗಿ ಪ್ರತಿಬಿಂಬಿಸುತ್ತದೆ” ಎಂದು ಅವರು ಹೇಳಿದ್ದಾರೆ.

“ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯುವಲ್ಲಿ ಪೊಲೀಸರು ವಿಫಲರಾಗದಂತೆ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆಗಾರಿಕೆಯನ್ನು ಹೊರಿಸಬೇಕು” ಎಂದು ನ್ಯಾಯಾಧೀಶರು ಹೇಳಿದ್ದು, ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಮುಖ್ಯಸ್ಥರಿಗೆ ಆದೇಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...