Homeಚಳವಳಿದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ದೆಹಲಿ | ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಬೆಂಬಲ

ಸಂಯುಕ್ತ ಕಿಸಾನ್ ಮೋರ್ಚಾ ದೆಹಲಿ ಸುತ್ತ ವರ್ಷಗಳ ಕಾಲ ಪ್ರತಿಭಟನೆ ನಡೆಸಿ ಬಿಜೆಪಿಯ ಮೋದಿ ಸರ್ಕಾರವನ್ನು ಮಂಡಿಯೂರಿಸಿತ್ತು

- Advertisement -
- Advertisement -

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿಸಿ ರೈತರು ದೇವನಹಳ್ಳಿಯಲ್ಲಿ ಬುಧವಾರ ನಡೆಸಿದ್ದ ಹೋರಾಟವನ್ನು ಪೊಲೀಸ್ ಬಲ ಪ್ರಯೋಗಿಸಿ ಹತ್ತಿಕ್ಕಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಶುಕ್ರವಾರ ಖಂಡಿಸಿದ್ದು, ನ್ಯಾಯಕ್ಕಾಗಿ ನಡೆಸುತ್ತಿರುವ ರೈತರ ಹೋರಾಟಕ್ಕೆ ಅದು ಬೆಂಬಲ ವ್ಯಕ್ತಪಡಿಸಿದೆ. ದೆಹಲಿ | ಚನ್ನರಾಯಪಟ್ಟಣ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೇಶದಾದ್ಯಂತ ಇರುವ ಪ್ರಮುಖ ರೈತ ಸಂಘಟನೆಗಳ ಒಕ್ಕೂಟವಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕರಾಳ ರೈತ ವಿರೋಧಿ ಕಾಯ್ದೆ ವಿರೋಧಿಸಿ ವರ್ಷಗಳ ಕಾಲ ದೆಹಲಿಯ ಸುತ್ತ ನಡೆಸಲಾಗಿದ್ದ ರೈತ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವ ನೀಡಿತ್ತು. ಜೊತೆಗೆ ರೈತ ಸಂಘಟನೆಗಳ ಈ ಹೋರಾಟದ ಕಾರಣಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಮಣಿದು ಕಾಯ್ದೆಯನ್ನು ವಾಪಾಸು ಪಡೆಯಿತು.

ಶಾಂತಿಯುತವಾಗಿ ಪ್ರತಿಭಟಿಸಿದ ನೂರಾರು ರೈತರನ್ನು ಅಮಾನುಷವಾಗಿ ಎಳೆದಾಡಿ ಬಂಧಿಸಿ ಪೊಲೀಸರಿಂದ ದೌರ್ಜನ್ಯ ನಡೆಸಿದ್ದಕ್ಕಾಗಿ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರವನ್ನು ಎಸ್‌ಕೆಎಂ ತೀವ್ರವಾಗಿ ಖಂಡಿಸಿದೆ.

ತಮ್ಮ ಪೂರ್ವಜರ ಭೂಮಿಯಲ್ಲಿ ಕೃಷಿಯನ್ನು ಅವಲಂಭಿಸಿ ಬದುಕುತ್ತಿರುವ ದೇವನಹಳ್ಳಿಯ ಚನ್ನರಾಯಪಟ್ಟಣದ 13 ಹಳ್ಳಿಗಳಿಗೆ ಸೇರಿದ ಸುಮಾರು 800 ಕುಟುಂಬಗಳು ಈಗ 1180 ದಿನಗಳಿಂದ (ಸುಮಾರು 3.5 ವರ್ಷಗಳು) ಅನಿರ್ದಿಷ್ಟ ಹೋರಾಟ ನಡೆಸುತ್ತಿವೆ.

2022ರ ಜನವರಿ ವೇಳೆಗೆ ಆಗಿನ ಬಿಜೆಪಿ ನೇತೃತ್ವದ ಬಸವರಾಜ ಬೊಮ್ಮಾಯಿ ಸರ್ಕಾರವು ಕಾರ್ಪೊರೇಟ್ ಕಂಪೆನಿಗಳ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಅನುಕೂಲವಾಗುವಂತೆ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಈ 13 ಗ್ರಾಮಗಳ ರೈತರ 1777 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿ ಅವರಿಗೆ ನೋಟಿಸ್ ನೀಡಿತ್ತು.

ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಹರಳೂರು ಕೈಗಾರಿಕಾ ಪ್ರದೇಶಕ್ಕಾಗಿ ಸುತ್ತಮುತ್ತಲಿನ ಹಳ್ಳಿಗಳಿಂದ 6000 ಎಕರೆಗಳನ್ನು ಈಗಾಗಲೇ ಸ್ವಾಧೀನಪಡಿಸಿಕೊಂಡಿತ್ತು. ಆ ಹಿಂದಿನ ಸ್ವಾಧೀನಗಳಲ್ಲಿ ಸಾವಿರಾರು ರೈತರು ಮತ್ತು ಗ್ರಾಮಸ್ಥರನ್ನು ಹೊರಹಾಕಲಾಯಿತು ಆದರೆ ಅವರಿಗೆ ಯಾವುದೇ ಸರಿಯಾದ ಪರಿಹಾರವನ್ನು ನೀಡಲಾಗಿಲ್ಲ.

ಈ ಸಂದರ್ಭದಲ್ಲಿ, ‘ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ಅಡಿಯಲ್ಲಿ ರೈತರು 1777 ಎಕರೆಗಳ ಸ್ವಾಧೀನ ಪ್ರಯತ್ನವನ್ನು ದೃಢವಾಗಿ ವಿರೋಧಿಸಿದ್ದರು. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ವಿಧಾನಸಭೆಯಲ್ಲಿ ಈ ಭೂಸ್ವಾಧೀನ ಕ್ರಮವನ್ನು ಪ್ರಶ್ನಿಸಿತ್ತು ಮತ್ತು ಅಂದಿನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಧಿಸೂಚನೆಯನ್ನು ಹಿಂಪಡೆಯಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದರು.

ಅದಾಗ್ಯೂ, 2024ರ ಏಪ್ರಿಲ್ ತಿಂಗಳಲ್ಲಿ ಅಧಿಕಾರಕ್ಕೆ ಬಂದ ನಂತರ, ಸಿದ್ದರಾಮಯ್ಯ ಸರ್ಕಾರವು ಕಾಂಗ್ರೆಸ್ ತೆಗೆದುಕೊಂಡಿದ್ದ ಹಿಂದಿನ ನಿಲುವನ್ನು ಬದಲಾಯಿಸಿ ರೈತರ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲು ಬಿಜೆಪಿಯ ನೀತಿಯನ್ನು ಅನುಸರಿಸಿತ್ತು.

“ಇದು ಕಾಂಗ್ರೆಸ್ ನೇತೃತ್ವದ ಯುಪಿಎ 2 ಸರ್ಕಾರ ತಂದ “ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆ -2013″ ರ ಸಂಪೂರ್ಣ ಉಲ್ಲಂಘನೆಯಾಗಿದೆ.” ಎಂದು ಎಸ್‌ಕೆಎಂ ಆಕ್ರೋಶ ವ್ಯಕ್ತಪಡಿಸಿದೆ.

ದೊಡ್ಡ ಕಾರ್ಪೊರೇಟ್ ಶಕ್ತಿಗಳ ವಿರುದ್ಧ ಹೋರಾಟ ನಡೆಸುತ್ತಿರುವ 13 ಹಳ್ಳಿಗಳ ರೈತರ ಹೋರಾಟದ ಮನೋಭಾವಕ್ಕೆ ಹೆಮ್ಮೆ ವ್ಯಕ್ತಪಡಿಸಿರುವ ಎಸ್‌ಕೆಎಂ, ಪ್ರಸ್ತುತ ಹೋರಾಟದಲ್ಲಿ ರೈತರೊಂದಿಗೆ ದೃಢವಾಗಿ ನಿಂತಿದ್ದಕ್ಕಾಗಿ ಎಸ್‌ಕೆಎಂನ ಕರ್ನಾಟಕದ ಘಟಕವಾಗಿರುವ ‘ಸಂಯುಕ್ತ ಹೋರಾಟ ಕರ್ನಾಟಕ’ ಶ್ಲಾಘಿಸಿ, ಅಭಿನಂದನೆ ಸಲ್ಲಿಸಿದೆ. ದೆಹಲಿ | ಚನ್ನರಾಯಪಟ್ಟಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಯೋತ್ಪಾದನೆಗಿಂತ ಜಾತಿವಾದವೇ ಹೆಚ್ಚು ಅಪಾಯಕಾರಿ: ಎರಡು ಘಟನೆ ಉಲ್ಲೇಖಿಸಿದ ಗಾಯಕಿ ನೇಹಾ ಸಿಂಗ್ ರಾಥೋರ್

ಭಯೋತ್ಪಾದನೆಗಿಂತ ಜಾತಿವಾದವೇ ಹೆಚ್ಚು ಅಪಾಯಕಾರಿ: ಎರಡು ಘಟನೆ ಉಲ್ಲೇಖಿಸಿದ ಗಾಯಕಿ ನೇಹಾ ಸಿಂಗ್ ರಾಥೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...