Homeಕರೋನಾ ತಲ್ಲಣಕೊರೊನಾ 3ನೇ ಅಲೆ: ಭಯ ಬೇಡ, ಸರ್ಕಾರ ಸಿದ್ಧತೆ ನಡೆಸುತ್ತಿದೆ- ಕೇಜ್ರಿವಾಲ್

ಕೊರೊನಾ 3ನೇ ಅಲೆ: ಭಯ ಬೇಡ, ಸರ್ಕಾರ ಸಿದ್ಧತೆ ನಡೆಸುತ್ತಿದೆ- ಕೇಜ್ರಿವಾಲ್

’ಖಾಸಗಿ ಆಸ್ಪತ್ರೆಗಳಲ್ಲಿ 80% ಐಸಿಯು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಕಾಯ್ದಿರಿಸಬೇಕೆಂಬ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ತಡೆಯಾಜ್ಞೆ ತೆರವುಗೊಳಿಸಲು ಕೋರಿ ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ’

- Advertisement -
- Advertisement -

ನವದೆಹಲಿಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮೂರನೇ ಅಲೆ ಆರಂಭವಾಗಿದೆ. ಆದರೆ ಭಯ ಬೇಡ ಸರ್ಕಾರ ಎಲ್ಲಾ ಸಿದ್ಧತೆ ನಡೆಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

“ಕೆಲವು ದಿನಗಳಿಂದ ದೆಹಲಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಇದನ್ನು ನಾವು ಮೂರನೇ ಅಲೆ ಎಂದು ಕರೆಯಬಹುದು. ಈ ಕುರಿತು ನಾಳೆ ಪರಿಶೀಲನಾ ಸಭೆ ನಡೆಸುತ್ತಿದ್ದೇವೆ” ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದರು.

ರಾಜ್ಯದ ಜನರು ಈ ಕುರಿತು ಯಾವುದೇ ರೀತಿ ಭೀತಿಗೆ ಒಳಗಾಗುವ ಅಗತ್ಯವಿಲ್ಲ. ಸರ್ಕಾರ ಪರಿಸ್ಥಿತಿಯನ್ನು ನಿಯಮಿತವಾಗಿ ಗಮನಿಸಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತದೆ. ಆತಂಕ, ಭಯ ಬೇಡ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ’ನಿಮ್ಮ ಬಗ್ಗೆ ನನಗೆ ಹೆಮ್ಮೆಯಿದೆ…ದೆಹಲಿಗರೆ’: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ಕೊರೊನಾ ಸೋಂಕಿನಿಂದ ಜೀವಹಾನಿಯನ್ನು ತಪ್ಪಿಸಲು ಮತ್ತು ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲು ಸರ್ಕಾರ ಸಿದ್ಧವಿದೆ. ಯಾವುದೇ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಯ ಹಾಸಿಗೆಗಳ ಕೊರತೆಯಿಲ್ಲ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಿದರು.

“ಖಾಸಗಿ ಆಸ್ಪತ್ರೆಗಳಲ್ಲಿ 80% ಐಸಿಯು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಕಾಯ್ದಿರಿಸಬೇಕೆಂಬ ನಮ್ಮ ನಿಯಮಕ್ಕೆ ಹೈಕೋರ್ಟ್ ತಡೆ ನೀಡಿದೆ. ಹೀಗಾಗಿ ನಾವು ತಡೆಯಾಜ್ಞೆಯನ್ನು ತೆರವುಗೊಳಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಹೋಗಲಿದ್ದೇವೆ” ಎಂದು ಕೇಜ್ರಿವಾಲ್ ಹೇಳಿದರು. ಸೆಪ್ಟೆಂಬರ್‌ನಲ್ಲಿ ದೆಹಲಿ ಹೈಕೋರ್ಟ್ ದೆಹಲಿ ಸರ್ಕಾರದ ಆದೇಶವನ್ನು ತಡೆಹಿಡಿದಿದೆ.

ದೆಹಲಿಯಲ್ಲಿ ಮಂಗಳವಾರ 59,540 ಕೊರೊನಾ ಪರೀಕ್ಷೆಗಳನ್ನು ನಡೆಸಿದ್ದು, ಒಟ್ಟು 6,725 ಪ್ರಕರಣಗಳು ವರದಿಯಾಗಿದ್ದವು. ಈ ಮೂಲಕ ಒಂದೇ ದಿನ ಅತಿ ಹೆಚ್ಚು ಪ್ರಕರಣ ವರದಿಯಾಗಿತ್ತು. ಜೊತೆಗೆ 48 ಕೊರೊನಾ ಸಾವುಗಳು ದಾಖಲಾಗಿವೆ. ಕಳೆದ ಕೆಲವು ದಿನಗಳಲ್ಲಿ ದೆಹಲಿಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕ್ರಮೇಣ ಹೆಚ್ಚಾಗಿದೆ.

ದೀಪಾವಳಿ ಹಬ್ಬ ಹತ್ತಿರದಲ್ಲೇ ಇದ್ದು, ಹಬ್ಬದಂದು ಸಾಮಾನ್ಯವಾಗಿ ಉತ್ತುಂಗಕ್ಕೇರಿರುವ ಪಟಾಕಿ ಸಿಡಿಸುವುದನ್ನು ನಿಷೇಧಿಸುವುದರ ಬಗ್ಗೆ ರಾಜ್ಯ ಸರ್ಕಾರ ಚಿಂತಿಸುತ್ತಿದೆ. ಹಬ್ಬದ ಅವಧಿಯಲ್ಲಿ ನಗರದಲ್ಲಿ ಪಟಾಕಿ ಸಿಡಿಸುವ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.


ಇದನ್ನೂ ಓದಿ:ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...