HomeಅಂಕಣಗಳುKarnataka against SIRDELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

- Advertisement -
- Advertisement -

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

ಎಸ್‌ಐಆರ್‌ನ ಮನೆ ಮನೆ ಗಣತಿ ಅಥವಾ ಎನ್ಯುಮರೇಷನ್ ಫಾರಂ ವಿತರಣೆ ಮತ್ತು ವಾಪಸ್ ಪಡೆಯುವ ಪ್ರಕ್ರಿಯೆಯ ಬಳಿಕ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ಬಿಬೆಕ್ ದೆಬ್ರಾಯ್ ಅವರ ಹೆಸರು ಇದ್ದು, ಹಿಂದಿನ ವಿಶೇಷ ತೀವ್ರ ಪರಿಷ್ಕರಣೆ ಪಟ್ಟಿಯೊಂದಿಗೆ ಸೆಲ್ಫ್ ಮ್ಯಾಪಿಂಗ್ ಮಾಡಿಲ್ಲ (ಅನ್‌ ಮ್ಯಾಪ್ಡ್ ) ಎಂಬುವುದಾಗಿ ಗುರುತಿಸಲಾಗಿದೆ ಎಂದು thehindu.com ವರದಿ ಮಾಡಿದೆ.

ನವದೆಹಲಿ ವಿಧಾನಸಭಾ ಕ್ಷೇತ್ರದ ಮತದಾರರಾಗಿದ್ದ ದೆಬ್ರಾಯ್ ಅವರು, 2024ರ ನವೆಂಬರ್‌ನಲ್ಲಿ ನಿಧನ ಹೊಂದಿದ್ದಾರೆ.

“ದೆಬ್ರಾಯ್ ಅವರ ನಿಧನದ ಬಗ್ಗೆ ತಮಗೆ ತಿಳಿದಿದೆ. ಅಂತಿಮ ಪಟ್ಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುವುದು. ಆದರೆ, ಫ್ಲ್ಯಾಗ್ ಮಾಡಲಾದ (ಗುರುತಿಸಲ್ಪಟ್ಟ) ಹೆಸರುಗಳಿಗೆ ಸಂಬಂಧಿಸಿದ ಚುನಾವಣಾ ಆಯೋಗದ ನಿರ್ದೇಶನಗಳ ಅನ್ವಯ, ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಹಾಗೆಯೇ ಉಳಿದುಕೊಂಡಿದೆ” ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ ಎಂಬುವುದಾಗಿ indiatoday.in ವರದಿ ಮಾಡಿದೆ.

ಚುನಾವಣಾ ಆಯೋಗದ ಸೂಚನೆಯ ಮೇರೆಗೆ ದೆಬ್ರಾಯ್ ಅವರ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ದೆಹಲಿ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಮುಖ್ಯ ಚುನಾವಣಾ ಅಧಿಕಾರಿಯವರ ಕಚೇರಿಯ ಪ್ರಕಾರ, ಚುನಾವಣಾ ಡೇಟಾಬೇಸ್ ಈಗಾಗಲೇ ಫ್ಲ್ಯಾಗ್ ಮಾಡಲಾದ (ಗುರುತಿಸಲ್ಪಟ್ಟ) ನ್ಯಾಯಾಂಗದ ಸದಸ್ಯರು, ಜನಪ್ರತಿನಿಧಿಗಳು, ಘೋಷಿತ ಹುದ್ದೆಗಳನ್ನು ಹೊಂದಿರುವವರು ಮತ್ತು ಕಲೆ, ಸಂಸ್ಕೃತಿ, ಪತ್ರಿಕೋದ್ಯಮ, ಕ್ರೀಡೆ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಎಲ್ಲಾ ಹೆಸರುಗಳನ್ನು ಕರಡು ಮತದಾರರ ಪಟ್ಟಿಯಲ್ಲಿ ಸೇರಿಸಬೇಕು ಎಂದು ಈ ನಿರ್ದೇಶನವು ತಿಳಿಸುತ್ತದೆ. ಹಕ್ಕುಗಳು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ದೇಶನವನ್ನು ಹೊರಡಿಸಲಾಗಿದೆ ಎಂದು ಕಚೇರಿಯು ತಿಳಿಸಿದೆ ಎಂದು ವರದಿ ವಿವರಿಸಿದೆ.

ಹಿರಿಯ ಚುನಾವಣಾ ಅಧಿಕಾರಿಯೊಬ್ಬರು, “ಅವರ ಮರಣದ ಬಗ್ಗೆ ನಮಗೆ ತಿಳಿದಿದೆ. ಅಂತಿಮ ಪಟ್ಟಿಯಿಂದ ಹೆಸರನ್ನು ಕೈಬಿಡಲಾಗುವುದು” ಎಂದು ಹೇಳಿರುವುದಾಗಿ ವರದಿ ಹೇಳಿದೆ.

ದೆಬ್ರಾಯ್ ಅವರು ಮೃತಪಟ್ಟಿದ್ದಾರೆ ಎಂದು ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಗಮನಕ್ಕೆ ತಂದಿದ್ದರೂ, ಚುನಾವಣಾ ಆಯೋಗದ ಸೂಚನೆಗಳ ಪ್ರಕಾರ ಅವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲು ಸಾಧ್ಯವಾಗಿಲ್ಲ ಮತ್ತು ಕರಡು ಮತದಾರರ ಪಟ್ಟಿಯಲ್ಲಿ ಅದನ್ನು ಸೇರಿಸಲಾಗಿತ್ತು ಎಂಬುವುದಾಗಿ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...