Homeಮುಖಪುಟಬಿಜೆಪಿಯ ಬುಲ್ಡೋಜರ್‌ ರಾಜಕೀಯದಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ: ಎಎಪಿ

ಬಿಜೆಪಿಯ ಬುಲ್ಡೋಜರ್‌ ರಾಜಕೀಯದಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ: ಎಎಪಿ

- Advertisement -
- Advertisement -

ಅತಿಕ್ರಮಣ ವಿರೋಧಿ ಕಾರ್ಯಾಚರಣೆಯ ಹೆಸರಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಘಟನೆಗಳಿಗೆ ಆಮ್ ಆದ್ಮಿ ಪಕ್ಷ (ಎಎಪಿ) ಪ್ರತಿಕ್ರಿಯೆ ನೀಡಿದೆ. “ಬಿಜೆಪಿ ಬುಲ್ಡೋಜರ್ ರಾಜಕೀಯ ಮಾಡುತ್ತಿದ್ದು, ಇದರಿಂದ ಇಡೀ ದೆಹಲಿಯೇ ಧ್ವಂಸವಾಗಲಿದೆ” ಎಂದು ಎ‌ಚ್ಚರಿಸಿದ್ದಾರೆ.

“ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಮೊದಲು ಅನುಮತಿ ನೀಡಿದ ಕೌನ್ಸಿಲರ್‌ಗಳಿಗೂ ನೋಟಿಸ್ ಜಾರಿ ಮಾಡಬೇಕು” ಎಂದು ಎಎಪಿ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಮಶೀಶ್‌ ಸಿಸೋಡಿಯಾ, “1,750 ಅನಧಿಕೃತ, ನಿಯಮಿತವಲ್ಲದೆ ಕಾಲೋನಿಗಳಿಗೆ ನೋಟಿಸ್ ಕಳುಹಿಸಲಾಗಿದೆ. ಇಲ್ಲಿ 50 ಲಕ್ಷಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇದು ಬುಲ್ಡೋಜರ್ ರಾಜಕಾರಣ. ಈ ಜನರನ್ನು ನಿರಾಶ್ರಿತರನ್ನಾಗಿ ಮಾಡಲು ಬಿಜೆಪಿ ಬಯಸುತ್ತಿದೆ. ಜೊತೆಗೆ 10 ಲಕ್ಷ ಜನರು ವಾಸಿಸುವ ಜೆಜೆ ಕ್ಲಸ್ಟರ್‌ಗಳ 860 ಕಾಲೋನಿಗಳಿಗೂ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಈ ರೀತಿಯಾಗಿ ಇಡೀ ದೆಹಲಿಯನ್ನು ಧ್ವಂಸ ಮಾಡಲು ಬಿಜೆಪಿ ಹೊರಟಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದನ್ನು ಉಲ್ಲೇಖಿಸಿ ಮಾತನಾಡಿರುವ ಅವರು, “ಬಿಜೆಪಿಯ 17 ವರ್ಷಗಳ ಅಧಿಕಾರಾವಧಿಯಲ್ಲಿ ಕೌನ್ಸಿಲರ್‌ಗಳು, ಎಂಜಿನಿಯರ್‌ಗಳು ಮತ್ತು ಇತರ ಹಲವಾರು ಅಧಿಕಾರಿಗಳು ಭ್ರಷ್ಟಾಚಾರದ ಮೂಲಕ ಹಣ ಸಂಪಾದಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ತುಚ್ಚಿ (ಅಗ್ಗದ) ರಾಜಕೀಯವನ್ನು ನಡೆಸದಂತೆ ನಾನು ಬಿಜೆಪಿಯಲ್ಲಿ ಒತ್ತಾಯಿಸುತ್ತೇನೆ. ನೀವು ಏನನ್ನಾದರೂ ಮಾಡಲು ಬಯಸಿದರೆ, ಈ ನಿರ್ಮಾಣಗಳು ಯಾರ ಅಧಿಕಾರಾವಧಿಯಲ್ಲಿ ನಡೆದಿವೆಯೋ ಆ ಪಾರ್ಷದ್‌ಗಳನ್ನು (ಕೌನ್ಸಿಲರ್‌ಗಳು), ಎಂಜಿನಿಯರ್‌ ಹಾಗೂ ಮೇಯರ್‌ಗಳನ್ನು ಹೊಣೆಗಾರರನ್ನಾಗಿ ಮಾಡಿ” ಎಂದು ಸಿಸೋಡಿಯಾ ಆಗ್ರಹಿಸಿದ್ದಾರೆ.

ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಫ್ಲಾಟ್‌ಗಳಲ್ಲಿ ಹೆಚ್ಚುವರಿ ಬಾಲ್ಕನಿ ಅಥವಾ ಕೊಠಡಿಯನ್ನು ನಿರ್ಮಿಸಿದ ಜನರಿಗೆ ನೋಟಿಸ್ ನೀಡಲಾಗಿದೆ ಎಂದು ಸಿಸೋಡಿಯಾ ತಿಳಿಸಿದ್ದು, “ಕಳೆದ ಎರಡು ವರ್ಷಗಳಲ್ಲಿ ಸುಮಾರು ಮೂರು ಲಕ್ಷ ಜನರು ಇಂತಹ ನೋಟಿಸ್‌ಗಳನ್ನು ಸ್ವೀಕರಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ನಾವು ಜನರಿಗೆ ಮನೆ ನೀಡಲು ಪ್ರಯತ್ನಿಸುತ್ತಿದ್ದೇವೆ ಮತ್ತು ಬಿಜೆಪಿ ಬುಲ್ಡೋಜರ್‌ ಮೂಲಕ ಅವುಗಳನ್ನು ಉರುಳಿಸುತ್ತದೆ” ಎಂದು ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿರಿ: ಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ದೆಹಲಿಯ ಜಹಾಂಗೀರ್‌ಪುರಿ ಕೋಮು ಸಂಘರ್ಷ ನಡೆದ ಬಳಿಕ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಬಿಜೆಪಿ ಆರಂಭಿಸಿತು. ಸುಪ್ರೀಂ ಕೋರ್ಟ್ ತಡೆಯಾಜ್ಞೆಯ ನಡುವೆಯೂ ಕಾರ್ಯಾಚರಣೆಯನ್ನು ನಡೆಸಿದ್ದು ಚರ್ಚೆಗೆ ಗ್ರಾಸವಾಗಿತ್ತು.

“ಸುಪ್ರೀಂಕೋರ್ಟ್ ತೀರ್ಪನ್ನು ಮೇಯರ್‌ಗೆ ತಿಳಿಸಿದ ನಂತರವೂ ನಡೆದ ಎಲ್ಲಾ ಉರುಳಿಸುವಿಕೆ ಕಾರ್ಯಾಚರಣೆಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎರಡು ವಾರಗಳ ನಂತರ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿತ್ತು.

ಜಹಾಂಗೀರ್‌ಪುರಿ ಅರ್ಜಿದಾರರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ದುಶ್ಯಂತ್ ದವೆ, “ದೆಹಲಿ ಬಿಜೆಪಿ ಮುಖ್ಯಸ್ಥರು ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್‌ಗೆ ದೂರು ನೀಡಿದ ನಂತರ ಹಿಂಸಾಚಾರ ಪೀಡಿತ ಪ್ರದೇಶದಿಂದ ಅತಿಕ್ರಮಣಗಳನ್ನು ತೆಗೆದುಹಾಕಲು ರಾತ್ರೋರಾತ್ರಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಯಾವುದೆ ಸೂಚನೆಯಿಲ್ಲದೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು” ಎಂದು ವಾದಿಸಿದ್ದರು.

ಇದನ್ನೂ ಓದಿರಿ: ದೆಹಲಿ: ಲೈಂಗಿಕ ದೌರ್ಜನ್ಯದ ಕುರಿತು ದೂರು ಹೇಳಿದ ವಿದ್ಯಾರ್ಥಿನಿಯರಿಗೆ ‘ಮರೆತುಬಿಡಿ’ ಎಂದ ಪ್ರಾಂಶುಪಾಲರು

ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ದೆಹಲಿಯಂತಹ ರಾಜ್ಯಗಳಲ್ಲಿ ಮುಸ್ಲಿಮರ ಕಟ್ಟಡಗಳನ್ನು ನೆಲಸಮಗೊಳಿಸಲಾಗುತ್ತಿದೆ ಎಂದು ಜಮಿಯತ್ ಉಲಾಮಾ-ಇ-ಹಿಂದ್ ಸಲ್ಲಿಸಿದ ಮನವಿಯನ್ನು ಗಮನಿಸಿದ ಸುಪ್ರೀಂಕೋರ್ಟ್, ಅತಿಕ್ರಮಣ ವಿರೋಧಿ ಅಭಿಯಾನವನ್ನು ಸ್ಥಗಿತಗೊಳಿಸಿತ್ತು.

ಸುಪ್ರೀಂಕೋರ್ಟ್ ಆದೇಶ ಇದ್ದರೂ ಬುಲ್ಡೋಜರ್‌ಗಳು ಮಸೀದಿ ಹೊರಗಿನ ಅಂಗಡಿಗಳು, ಕಟ್ಟಡಗಳನ್ನು ಸುಪ್ರೀಂಕೋರ್ಟ್‌ ಎರಡನೇ ಬಾರಿಗೆ ಹಸ್ತಕ್ಷೇಪ ಮಾಡುವವರೆಗೂ ಧ್ವಂಸಗೊಳಿಸಲಾಯಿತು. ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರು ಅಂತಿಮವಾಗಿ ಕಾರ್ಯಚರಣೆಯನ್ನು ನಿಲ್ಲಿಸುವಂತೆ ಆದೇಶ ನೀಡಿದ್ದರು.

ಬುಲ್ಡೋಝರ್‌ಗಳು ಧ್ವಂಸಗೊಳಿಸುತ್ತಿರುವ ಪ್ರದೇಶಕ್ಕೆ ತೆರಳಿದ್ದ ಸಿಪಿಐಎಂ ನಾಯಕಿ ಬೃಂದಾ ಕಾರಟ್‌ ಹಾಗೂ ಅವರ ತಂಡ ಬುಲ್ಡೋಝರ್‌ ಮುಂದೆ ನಿಂತು ಪ್ರತಿಭಟಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರು ಕಾನೂನನ್ನು ಕೈಗೆ ತಗೋತಾರೋ ಅವರಿಗೆ ಶಿಕ್ಷೇ ಆದರೆ ಈ ಎಎಪಿಗೆ ಏನು ತೊಂದರೆ,ಹಾಗಾದರೆ ಎಎಪಿ ಕಾನೂನನ್ನು ಕೈಗೆ ತಗೋಳ್ಳೋರ ಪರವೋ ಅಥವಾ ಸಂವಿಧಾನದ ಪರವೋ ಸ್ಪಷ್ಟ ಪಡಿಸಬೇಕಿದೆ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...