Homeಕೊರೊನಾದೆಹಲಿಯಲ್ಲಿ ಕೊರೊನಾ ಏರಿಕೆ: ಯೆಲ್ಲೋ ಅಲರ್ಟ್ ಘೋಷಿಸಿದ ಸಿಎಂ ಕೇಜ್ರಿವಾಲ್

ದೆಹಲಿಯಲ್ಲಿ ಕೊರೊನಾ ಏರಿಕೆ: ಯೆಲ್ಲೋ ಅಲರ್ಟ್ ಘೋಷಿಸಿದ ಸಿಎಂ ಕೇಜ್ರಿವಾಲ್

- Advertisement -
- Advertisement -

ದೆಹಲಿಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆದರೆ, ನಗರದ ಜನರು ಭಯಪಡಬೇಕಿಲ್ಲ, ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಈ ಯೆಲ್ಲೋ ಅರ್ಲಟ್ ಅಡಿಯಲ್ಲಿ ಖಾಸಗಿ ಕಚೇರಿಗಳು ಶೇಕಡಾ 50 ರಷ್ಟು ಕಾರ್ಯನಿರ್ವಹಿಸುತ್ತವೆ, ಮಾಲ್‌ಗಳು ಮತ್ತು ಅಂಗಡಿಗಳು ಬೆಸ-ಸಮ ಆಧಾರದ ಮೇಲೆ ತೆರೆಯಲ್ಪಡುತ್ತವೆ. ಮದುವೆಗೆ 20 ಮಂದಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂದು ಸರ್ಕಾರ ತಿಳಿಸಿದೆ.

ಹೊಸ ನಿಯಮಗಳು ಹೀಗಿವೆ.

೧. ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರುತ್ತದೆ.

೨. ಆಸ್ಪತ್ರೆಗಳು, ಮಾಧ್ಯಮಗಳು, ಬ್ಯಾಂಕ್‌ಗಳು, ವಿಮಾ ಕಂಪನಿಗಳು ಮತ್ತು ಟೆಲಿಕಾಂ ಸೇವೆಗಳನ್ನು ಒಳಗೊಂಡಿರುವ ಗೊತ್ತುಪಡಿಸಿದ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಖಾಸಗಿ ಕಚೇರಿಗಳು 50% ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸುತ್ತವೆ.

ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘನೆ: 48 ಗಂಟೆಗಳಲ್ಲಿ 1.54 ಕೋಟಿ ರೂ. ದಂಡ ಸಂಗ್ರಹಿಸಿದ ದೆಹಲಿ ಸರ್ಕಾರ!

೩. ಮದುವೆಗೆ 20 ಜನರಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಮನೆಯಲ್ಲಿ ಅಥವಾ ನ್ಯಾಯಾಲಯದಲ್ಲಿ ಮಾತ್ರ ನಡೆಯಬಹುದಾಗಿದೆ. ಅಂತ್ಯಕ್ರಿಯೆಗೂ 20 ವ್ಯಕ್ತಿಗಳ ಮಿತಿ ಅನ್ವಯಿಸುತ್ತದೆ.

೪. ಮಾಲ್‌ಗಳು ಮತ್ತು ಅಂಗಡಿಗಳು ಬೆಸ-ಸಮ ಆಧಾರದ ಮೇಲೆ ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ತೆರೆದಿರುತ್ತವೆ. ಆನ್‌ಲೈನ್ ಡೆಲಿವರಿ ಮುಂದುವರಿಯಬಹುದು. ವಸತಿ ಪ್ರದೇಶಗಳಲ್ಲಿನ ಸ್ವಂತ ಅಂಗಡಿಗಳು ಅಥವಾ ಮಾರುಕಟ್ಟೆಗಳು ಬೆಸ-ಸಮ ನಿಯಮ ಅನುಸರಿಸಬೇಕಿಲ್ಲ.

೫. ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್‌ಗಳು ಮತ್ತು ಜಿಮ್‌ಗಳು ಮತ್ತೆ ಮುಚ್ಚಲ್ಪಡುತ್ತವೆ. ಶಾಲಾ-ಕಾಲೇಜುಗಳು ಬಂದ್ ಆಗಲಿವೆ.

೬. ರಾತ್ರಿ 10 ಗಂಟೆಗೆ ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳನ್ನು ಮುಚ್ಚಲಾಗುತ್ತದೆ. ಇವುಗಳು ತಮ್ಮ ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತವೆ.

೭. ದೆಹಲಿ ಮೆಟ್ರೋ ಕೂಡ ಅರ್ಧದಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತದೆ.

೮. ಸಲೂನ್‌ಗಳು, ಕ್ಷೌರಿಕ ಅಂಗಡಿಗಳು ಮತ್ತು ಪಾರ್ಲರ್‌ಗಳು ತೆರೆಯಲು ಅನುಮತಿಯಿದೆ. ಸ್ಪಾಗಳು ಮತ್ತು wellness clinics ಮುಚ್ಚಲಾಗುವುದು.

೯. ರಾಜಕೀಯ, ಧಾರ್ಮಿಕ, ಹಬ್ಬ-ಸಂಬಂಧಿತ ಕಾರ್ಯಕ್ರಮಗಳಿಗೆ ಅನುಮತಿಯಿಲ್ಲ. ಧಾರ್ಮಿಕ ಸ್ಥಳಗಳು ತೆರೆದಿರಬಹುದು ಆದರೆ ಹೊರಗಿನಿಂದ ಜನ ಹೋಗುವಂತಿಲ್ಲ.

ಕಳೆದ ಎರಡು ದಿನಗಳಿಂದ ಕೊರೊನಾ ಪಾಸಿಟಿವ್ ರೇಟ್ 0.5 ಶೇಕಡಾಕ್ಕಿಂತ ಹೆಚ್ಚಿತ್ತು, ಹೀಗಾಗಿ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ (GRAP) ಪ್ರಕಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.


ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿಯವರ ಹೊಸ ಕಾರು: ವಿಶೇಷತೆಗಳು ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...