Homeಕರೋನಾ ತಲ್ಲಣದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

ದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

’ಸುಮಾರು 2-3 ತಿಂಗಳ ಹಿಂದೆಯೇ, ದೆಹಲಿಯ ಆಸ್ಪತ್ರೆಗಳಲ್ಲಿ ಸುಮಾರು 1,000 ಹಾಸಿಗೆಗಳು ಮತ್ತು 300 ಐಸಿಯು ಹಾಸಿಗೆಗಳನ್ನು ಹೆಚ್ಚಿಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ’

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಮೂರನೇ ಅಲೆ ಈ ಬಾರಿ ಅತಿ ಹೆಚ್ಚು ವ್ಯಾಪಕವಾಗಿ ಹಬ್ಬುತ್ತಿದೆ. ಆದರೆ ಮುಂದಿನ ಕೆಲ ದಿನಗಳಲ್ಲಿ ಇದು ಕಡಿಮೆಯಾಗಬಹುದು ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್‌ ಜೈನ್ ಬುಧವಾರ ಹೇಳಿದ್ದಾರೆ.

ಸೆಪ್ಟೆಂಬರ್ 16 ರ ಸುಮಾರಿಗೆ ಎರಡನೇ ಅಲೆಯಲ್ಲಿ ಪ್ರತಿದಿನ 4,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಆಗ ನಡೆಸಿದ ಕೊರೊನಾ ಪರೀಕ್ಷೆಗಳ ಸಂಖ್ಯೆಗೆ ಹೋಲಿಸಿದರೆ ಈ ಬಾರಿ ಸರ್ಕಾರವು ದಿನಕ್ಕೆ ಶೇಕಡಾ ಮೂರರಷ್ಟು ಪರೀಕ್ಷೆಯನ್ನು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.

“ಖಾಸಗಿ ಆಸ್ಪತ್ರೆಗಳಲ್ಲಿ 80% ಐಸಿಯು ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಕಾಯ್ದಿರಿಸಬೇಕೆಂಬ ನಮ್ಮ ನಿಯಮಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ಹೀಗಾಗಿ ನಾವು ತಡೆಯಾಜ್ಞೆಯನ್ನು ತೆರವುಗೊಳಿಸಲು ಕೋರಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ರಜೆ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸಿದೆವು, ಉನ್ನತ ನ್ಯಾಯಾಲಯ ಹೈಕೋರ್ಟ್‌ನ ವಿಭಾಗೀಯ ಪೀಠವನ್ನು ಸಂಪರ್ಕಿಸುವಂತೆ ಸರ್ಕಾರವನ್ನು ಕೇಳಿದೆ ಎಂದು ತಿಳಿಸಿದರು.

“ಸುಮಾರು ಎರಡು ಮೂರು ತಿಂಗಳ ಹಿಂದೆಯೇ, ದೆಹಲಿಯಲ್ಲಿರುವ ಕೇಂದ್ರೀಯ ಆಸ್ಪತ್ರೆಗಳಲ್ಲಿ ಸುಮಾರು 1,000 ಹಾಸಿಗೆಗಳು ಮತ್ತು 300 ಐಸಿಯು ಹಾಸಿಗೆಗಳನ್ನು ಹೆಚ್ಚಿಸಲು ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ” ಎಂದು ಜೈನ್ ಮಾಹಿತಿ ನೀಡಿದರು.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಭಯ ಬೇಡ, ಸರ್ಕಾರ ಸಿದ್ಧತೆ ನಡೆಸುತ್ತಿದೆ- ಕೇಜ್ರಿವಾಲ್

ದೆಹಲಿಯಲ್ಲಿ ಮಂಗಳವಾರ ಮೊದಲ ಬಾರಿಗೆ 7,800 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ರಾಷ್ಟ್ರದ ರಾಜಧಾನಿಯಲ್ಲಿ ಸೋಂಕಿನ ಪ್ರಮಾಣ 4.5 ಲಕ್ಷಕ್ಕೂ ಅಧಿಕವಾಗಿದೆ.

ದೆಹಲಿಯಲ್ಲಿ ಕೊರೊನಾ ಸಂಬಂಧಿತ ಸಾವುಗಳನ್ನು ಕಡಿಮೆ ಮಾಡಲು ದೆಹಲಿ ಸರ್ಕಾರವು ಕೊರೊನಾ ಪರೀಕ್ಷಾ ಕೇಂದ್ರಗಳಲ್ಲಿ, ಜನರ ಆಮ್ಲಜನಕ ಶುದ್ಧತ್ವದ ಮಟ್ಟವನ್ನು ಕಡ್ಡಾಯವಾಗಿ ಪರೀಕ್ಷಿಸಲು ಆದೇಶಿಸಿದೆ. ಜೊತೆಗೆ ಆಮ್ಲಜನಕ ಶುದ್ಧತ್ವದ ಮಟ್ಟ ಶೇಕಡಾ 94 ಕ್ಕಿಂತ ಕಡಿಮೆ ಇರುವ ವ್ಯಕ್ತಿಗಳು ಕಡ್ಡಾಯ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಆದೇಶಿಸಿದೆ.

“ನಾವು ಹೆಚ್ಚಿನ ಸಂಖ್ಯೆಯಲ್ಲಿ RT-PCR ಪರೀಕ್ಷೆಗಳನ್ನು ಸಹ ಮಾಡುತ್ತಿದ್ದೇವೆ” ಎಂದು ಆರೋಗ್ಯ ಸಚಿವ ಸತ್ಯೇಂದರ್‌ ಜೈನ್ ಹೇಳಿದರು.

ದೆಹಲಿಯಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ. ಆದರೆ ಭಯ ಬೇಡ ಸರ್ಕಾರ ಎಲ್ಲಾ ಸಿದ್ಧತೆ ನಡೆಸುತ್ತಿದೆ .ಸೋಂಕಿನಿಂದ ಜೀವಹಾನಿಯನ್ನು ತಪ್ಪಿಸಲು ಮತ್ತು ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲು ಸರ್ಕಾರ ಸಿದ್ಧವಿದೆ. ಯಾವುದೇ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಯ ಹಾಸಿಗೆಗಳ ಕೊರತೆಯಿಲ್ಲ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದರು.

ಇತ್ತ ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ನವೆಂಬರ್ 30ರ ವರೆಗೆ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸಂಪೂರ್ಣ ನಿಷೇಧ ಹೇರಿದೆ.


ಇದನ್ನೂ ಓದಿ: ದೆಹಲಿ: ಇಂದಿನಿಂದ ನ. 30ರವರೆಗೆ ಪಟಾಕಿ ಸಂಪೂರ್ಣ ನಿಷೇಧ ಹೇರಿದ ಎನ್‌ಜಿಟಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...