Homeಕರ್ನಾಟಕಸಂಸತ್ತಿನ ಭದ್ರತಾ ಲೋಪ ಪ್ರಕರಣ: ದೆಹಲಿ ಪೊಲೀಸರಿಂದ ಮೈಸೂರಿನಲ್ಲಿ ತನಿಖೆ

ಸಂಸತ್ತಿನ ಭದ್ರತಾ ಲೋಪ ಪ್ರಕರಣ: ದೆಹಲಿ ಪೊಲೀಸರಿಂದ ಮೈಸೂರಿನಲ್ಲಿ ತನಿಖೆ

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಮೈಸೂರಿಗೆ ಆಗಮಿಸಿದ್ದು, ಪ್ರಕರಣದ ಆರೋಪಿ ಮೈಸೂರು ನಿವಾಸಿ ಮನೋರಂಜನ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೋರಂಜನ್ ತಂದೆ ಮತ್ತು ತಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಮೈಸೂರಿನ ವಿಜಯನಗರದ 2ನೇ ಹಂತದಲ್ಲಿರುವ ಮನೋರಂಜನ್ ಮನೆಗೆ ದೆಹಲಿ ಪೊಲೀಸರ ತಂಡ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಪೊಲೀಸರ ತಂಡದಲ್ಲಿ ಮಹಿಳಾ ಪೊಲೀಸರು ಕೂಡ ಇದ್ದರು. ಮನೋರಂಜನ್ ಕೊಠಡಿಯಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು, ಪುಸ್ತಕ ಸೇರಿದಂತೆ ಮನೋರಂಜನ್ ಬಳಸುತ್ತಿದ್ದ ವಸ್ತುಗಳನ್ನು ಪರಿಶೀಲಿಸಿದ್ದಾರೆ.

ಮನೋರಂಜನ್ ತಾಯಿ ಶೈಲಜಾ ಮತ್ತು ತಂದೆ ದೇವರಾಜೇಗೌಡ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದಲ್ಲದೆ ಗುಪ್ತಚರ ಇಲಾಖೆಯ ಅಧಿಕಾರಿಗಳು, ಮನೋರಂಜನ್ ಬ್ಯಾಂಕ್ ಖಾತೆ, ಆತನ ಫೋನ್‍ ಕರೆ ಡಿಟೇಲ್ಸ್ ಮತ್ತು ಆತನ ಕುಟುಂಬದ ಹಿನ್ನೆಲೆ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇದಲ್ಲದೆ ಮನೋರಂಜನ್ ಹಾಗೂ ಸಾಗರ್ ಶರ್ಮಾರ ಚಲನವಲನಗಳ ಬಗ್ಗೆ ತನಿಖೆ ನಡೆಯುತ್ತಿದೆ. ಲಕ್ನೋ ಮೂಲದ  ಸಾಗರ್ ಶರ್ಮಾ ಮೈಸೂರಿನಲ್ಲಿ ಎಲ್ಲಿ ವಾಸವಾಗಿದ್ದ? ಯಾಕೆ ಆತ ಮೈಸೂರಿಗೆ ಬಂದಿದ್ದ ಎಂಬ ಕುರಿತು ತನಿಖೆ ನಡೆಯುತ್ತಿದೆ.

 

ಡಿ.13ರಂದು ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಹರಡಿದ್ದರು. 2001ರ ಸಂಸತ್ ದಾಳಿಯ 22ನೇ ವಾರ್ಷಿಕದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿದೆ.

ಹೊಗೆ ಡಬ್ಬಿಗಳನ್ನು ಹಿಡಿದುಕೊಂಡು ಸಂಸತ್ತಿನ ಕಟ್ಟಡದ ಹೊರಗೆ ಸರ್ವಾಧಿಕಾರ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿದ ನೀಲಂ ಆಜಾದ್, ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡಲು ಪ್ರಯತ್ನಿಸಿದಾಗಲೆಲ್ಲಾ ಲಾಠಿ ಚಾರ್ಜ್ ಮಾಡಿ ಬಂಧಿಸಲಾಗುತ್ತದೆ. ನಮಗೆ ಬೇರೆ ದಾರಿ ಇರಲಿಲ್ಲ. ನಾವು ಯಾವುದೇ ಸಂಘಟನೆಯಿಂದ ಬಂದವರಲ್ಲ, ನಾವು ಸಾಮಾನ್ಯ ಜನರು, ವಿದ್ಯಾರ್ಥಿಗಳು, ನಿರುದ್ಯೋಗಿ ಯುವಕರು. ನಮ್ಮ ಪೋಷಕರು ಕಷ್ಟಪಟ್ಟು ದುಡಿಯುವ ಕಾರ್ಮಿಕರು, ರೈತರು.  ನಮ್ಮ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ಹೇಳಿದ್ದರು.

ಘಟನೆಗೆ ಸಂಬಂಧಿಸಿ ಲೋಕಸಭೆಯೊಳಗೆ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಲಲಿತ್ ಝಾನನ್ನು ಬಂಧಿಸಲಾಗಿತ್ತು. ಇದಲ್ಲದೆ ಲಲಿತ್‌ ಝಾಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಮಹೇಶ್ ಕುಮ್ವತ್ ಮತ್ತು ಕೈಲಾಶ್ ಅವರ ವಿಚಾರಣೆ ಕೂಡ ನಡೆಯುತ್ತಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವೇಳೆ ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಗಳಿಗೆ ಸದನದೊಳಗೆ ಪ್ರವೇಶಿಸಲು ಸಂದರ್ಶಕರ ಪಾಸ್‌ಗಳನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ನೀಡಿದ್ದರು ಎನ್ನುವುದು  ಬಯಲಾಗಿದೆ. ಈ ಕುರಿತು ಸಂಸದ ಪ್ರತಾಪ್‌ ಸಿಂಹ ಹೇಳಿಕೆಯನ್ನು ಕೂಡ ತನಿಖಾಧಿಕಾರಿಗಳು ದಾಖಲಿಸಿಕೊಳ್ಳಲಿದ್ದಾರೆ.

ಸಂಸತ್ತಿನಲ್ಲಿ ಭದ್ರತಾಲೋಪ ಪ್ರಕರಣದ ಕುರಿತು ಗೃಹ ಸಚಿವರಾದ ಅಮಿತ್‌ ಶಾ ಅವರು ಹೇಳಿಕೆಯನ್ನು ನೀಡಬೇಕೆಂದು ಒತ್ತಾಯಿಸಿ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನಿನ್ನೆ ಸಂಸದರು ಪಟ್ಟು ಹಿಡಿದಿದ್ದರು. ಈ ವೇಳೆ ಉಭಯ ಸದನಗಳ 92ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಲಾಗಿದೆ.

ಇದನ್ನು ಓದಿ; ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...