Homeಮುಖಪುಟಕ್ಷೇತ್ರ ಪುನರ್ವಿಂಗಡನೆಗೆ 1971ರ ಜನಗಣತಿ ಬಳಸುವಂತೆ ಸ್ಟಾಲಿನ್ ಒತ್ತಾಯ; ಆಂಧ್ರದ ಟಿಡಿಪಿ ವಿರೋಧ!

ಕ್ಷೇತ್ರ ಪುನರ್ವಿಂಗಡನೆಗೆ 1971ರ ಜನಗಣತಿ ಬಳಸುವಂತೆ ಸ್ಟಾಲಿನ್ ಒತ್ತಾಯ; ಆಂಧ್ರದ ಟಿಡಿಪಿ ವಿರೋಧ!

- Advertisement -
- Advertisement -

ಮುಂದಿನ 30 ವರ್ಷಗಳ ಕಾಲ ನಡೆಸುವ ಯಾವುದೇ ಕ್ಷೇತ್ರ ಪುನರ್ವಿಂಗಡಣೆಯನ್ನು 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ನಡೆಸಬೇಕು ಎಂದು ತಮಿಳುನಾಡು ಸರ್ಕಾರವು ಬಯಸುತ್ತಿದೆ. ಆದರೆ ಎನ್‌ಡಿಎ ಸರ್ಕಾರದ ಪ್ರಮುಖ ಮಿತ್ರ ಪಕ್ಷವಾದ ಆಂಧ್ರಪ್ರದೇಶದ ಆಡಳಿತಾರೂಢ ತೆಲುಗು ದೇಶಂ ಪಕ್ಷ (ಟಿಡಿಪಿ)ವು ಇದಕ್ಕೆ ವ್ಯತಿರಿಕ್ತವಾಗಿದ್ದು, ತಮಿಳುನಾಡು ಸರ್ಕಾರದ ವಾದದಂತೆ ಮಾಡಿದರೆ ತನ್ನ ರಾಜ್ಯವನ್ನು ಅನಾನುಕೂಲಕ್ಕೆ ಸಿಲುಕಿಸುತ್ತದೆ ಎಂದು ವಾದಿಸುತ್ತಿದೆ. ಕ್ಷೇತ್ರ ಪುನರ್ವಿಂಗಡನೆಗೆ

ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಸಂಸತ್ತಿನಲ್ಲಿ ಸ್ಥಾನಗಳ ಸಂಖ್ಯೆಯಲ್ಲಿ ಹೆಚ್ಚಳವಾದರೆ, 1971 ರ ಜನಗಣತಿಯ ಆಧಾರವಾಗಿ ಮಾಡಬೇಕು. ಅದಕ್ಕಾಗಿ ಸೂಕ್ತವಾದ ಸಾಂವಿಧಾನಿಕ ತಿದ್ದುಪಡಿ ಮಾಡಬೇಕು ಎಂದು ಹೇಳುವ ನಿರ್ಣಯವನ್ನು ಮಂಡಿಸಿದ್ದಾರೆ.

ಅಲ್ಲದೆ, 2026 ರಿಂದ 30 ವರ್ಷಗಳ ಕಾಲ ಲೋಕಸಭಾ ಸ್ಥಾನಗಳ ಪುನರ್ವಿಂಗಡಣೆಗೆ 1971 ರ ಜನಗಣತಿಯನ್ನು ಆಧಾರವಾಗಿಟ್ಟುಕೊಳ್ಳಬೇಕು ಮತ್ತು ಪ್ರಧಾನಿ ಈ ಬಗ್ಗೆ ಸಂಸತ್ತಿಗೆ ಭರವಸೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಸೀಟು ಕಡಿತವನ್ನು ತಡೆಯಲು ದಕ್ಷಿಣದ ಎಲ್ಲಾ ರಾಜ್ಯಗಳ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಕ್ರಿಯಾ ಸಮಿತಿಯನ್ನು ಸ್ಟಾಲಿನ್ ಇದೇ ವೇಳೆ ಪ್ರಸ್ತಾಪಿಸಿದ್ದಾರೆ.

ಆದರೆ ಸ್ಟಾಲಿನ್ ಅವರ ವಾದವನ್ನು ನಿರಾಕರಿಸಿರುವ ಟಿಡಿಪಿ ಸಂಸದ ಮತ್ತು ಸಂಸದೀಯ ಪಕ್ಷದ ನಾಯಕ ಲಾವು ಶ್ರೀ ಕೃಷ್ಣ ದೇವರಾಯಲು, 2014 ರಲ್ಲಿ ತೆಲಂಗಾಣ ಮತ್ತು ಆಂಧ್ರಪ್ರದೇಶವಾಗಿ ವಿಭಜನೆಯಾಗುವುದರಿಂದ ಆಂಧ್ರಪ್ರದೇಶವು ಈ ವಿಚಾರದಲ್ಲಿ ಹಲವು ಅಂಶಗಳಲ್ಲಿ ಸೋಲುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಕ್ಷೇತ್ರ ಪುನರ್ವಿಂಗಡನೆಗೆ

ದಕ್ಷಿಣ ರಾಜ್ಯಗಳ ಆತಂಕಗಳನ್ನು ಪರಿಹರಿಸಲು ಪ್ರಸ್ತುತ ಕ್ಷೇತ್ರ ಪುನರ್ವಿಂಗಡಣೆಯ ಸೂತ್ರವನ್ನು ಪುನರ್ರಚಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದರೂ, ಅದು ಇತ್ತೀಚಿನ ಜನಸಂಖ್ಯಾ ಅಂಕಿಅಂಶಗಳನ್ನು ಆಧರಿಸಿರಬೇಕು ಎಂದು ಹೇಳಿದ್ದಾರೆ.

“ಕ್ಷೇತ್ರ ಪುನರ್ವಿಂಗಡನೆಯು ಹೊಸ ಜನಗಣತಿಯನ್ನು ಆಧರಿಸಿರಬೇಕು. ಯಾಕೆಂದರೆ ನಮ್ಮ ಎಲ್ಲಾ ಕಲ್ಯಾಣ ಯೋಜನೆಗಳು ಹಳೆಯ ಜನಗಣತಿ ಮತ್ತು ಪರಸ್ಪರ ಸಂಬಂಧವಿಲ್ಲದ ಡೇಟಾವನ್ನು ಆಧರಿಸಿವೆ” ಎಂದು ಅವರು ಹೇಳಿದ್ದಾರೆ.

ಕ್ಷೇತ್ರ ಪುನರ್ವಿಂಗಡನೆಯಲ್ಲಿ ದಕ್ಷಿಣ ರಾಜ್ಯಗಳು ಸೀಟುಗಳನ್ನು ಕಳೆದುಕೊಳ್ಳುವುದಿಲ್ಲ ಎಂಬ ಗೃಹ ಸಚಿವ ಅಮಿತ್ ಶಾ ಅವರ ಭರವಸೆಯನ್ನು ಸ್ವಾಗತಿಸಿದ ದೇವರಾಯಲು, ಜನಸಂಖ್ಯಾ ನಿಯಂತ್ರಣಕ್ಕೆ ಸ್ವಲ್ಪ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಜನಸಂಖ್ಯೆ ನಿಯಂತ್ರಣ ಮಾಡಿದ ರಾಜ್ಯಗಳು ನಿರಾಶೆಗೊಂಡಿವೆ ತಾನು ಎಂದು ಭಾವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...