Homeಮುಖಪುಟಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅನಾನುಕೂಲ: ಸುಪ್ರೀಂ ಕೋರ್ಟ್

ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅನಾನುಕೂಲ: ಸುಪ್ರೀಂ ಕೋರ್ಟ್

- Advertisement -
- Advertisement -

ಜನಸಂಖ್ಯೆ ಆಧಾರದ ಮೇಲೆ ಚುನಾವಣಾ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡಿದರೆ, ಜನಸಂಖ್ಯೆ ಬೆಳವಣಿಗೆಯನ್ನು ನಿಯಂತ್ರಿಸಿರುವ ದಕ್ಷಿಣ ಭಾರತಕ್ಕೆ ಸಂಸತ್ತಿನಲ್ಲಿ ಸೋಲಾಗಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಮೇ.9) ಹೇಳಿರುವುದಾಗಿ barandbench.com ವರದಿ ಮಾಡಿದೆ.

ದಕ್ಷಿಣ ಭಾರತದ ಜನಸಂಖ್ಯೆ ಕಡಿಮೆಯಾಗುತ್ತಿದ್ದರೆ, ಉತ್ತರ ಭಾರತದಲ್ಲಿ ಕುಟುಂಬಗಳು ದೊಡ್ಡದಾಗುತ್ತಿವೆ ಎಂದು ಕೋರ್ಟ್ ಹೇಳಿದೆ.

ಸಂತಾನೋತ್ಪತ್ತಿ ಚಿಕಿತ್ಸೆ ವಿಫಲಗೊಂಡ ಬಳಿಕ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯುವ ಹಕ್ಕನ್ನು ಕೋರಿ ಕೆಲವು ಪೋಷಕರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ.

ಒಂದು ಪ್ರಕರಣದಲ್ಲಿ ಈಗಾಗಲೇ ಸಹಜ ಹೆರಿಗೆಯ ಮೂಲಕ ಮಗುವನ್ನು ಹೊಂದಿರುವ ಪೋಷಕರು ಎರಡನೇ ಮಗುವನ್ನು ಪಡೆಯಲು ಪರ್ಯಾಯ ಮಾರ್ಗವನ್ನು ಅನ್ವೇಷಿಸುತ್ತಿರುವುದನ್ನು ಗಮನಿಸಿದ ನ್ಯಾ.ನಾಗರತ್ನ ಅವರು, “ಒಂದು ಮಗುವನ್ನು ನಾವು ಅರ್ಥ ಮಾಡಿಕೊಳ್ಳಬಲ್ಲೆವು. ಆದರೆ, ಮೊದಲ ಮಗು ಸಾಮಾನ್ಯವಾಗಿ ಜನಿಸಿದೆ ಮತ್ತು ಈಗ ಇನ್ ವಿಟ್ರೋ ಫರ್ಟಿಲೈಸೇಷನ್ (ಐವಿಎಫ್) ಮೂಲಕ ಎರಡನೇ ಮಗು? ದಕ್ಷಿಣ ಭಾರತವನ್ನು ನೋಡಿ, ಅಲ್ಲಿ ಕುಟುಂಬಗಳ ಗಾತ್ರ ಕಡಿಮೆಯಾಗುತ್ತಿದೆ. ಕ್ಷೇತ್ರ ಪುನರ್‌ವಿಂಗಡಣೆ ವಿಷಯದಲ್ಲಿ ಇದೇ ಸಮಸ್ಯೆಯಾಗಿರುವುದು. ದಕ್ಷಿಣ ಭಾರತದ ಜನಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಉತ್ತರ ಭಾರತದಲ್ಲಿ ಕುಟುಂಬಗಳು ದೊಡ್ಡದಾಗಿ ಬೆಳೆಯುತ್ತಿವೆ” ಎಂದು ಹೇಳಿದ್ದಾರೆ.

ಈ ನಡುವೆ, ಅರ್ಜಿದಾರರ ಪರ ವಕೀಲರು, ಐವಿಎಫ್ ಮೇಲೆ ಯಾವುದೇ ನಿರ್ಬಂಧವಿಲ್ಲದಿದ್ದರೂ, ಬಾಡಿಗೆ ತಾಯತ್ತನದ ಮೇಲೆ ನಿರ್ಬಂಧವಿದೆ ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, “ಚಿತ್ರರಂಗದ ಜನರಿಂದಾಗಿ ಬಾಡಿಗೆ ತಾಯ್ತನವು ಫ್ಯಾಷನ್ ಆಗಿಬಿಟ್ಟಿದೆ. ಸಂವಿಧಾನದ ವಿಧಿ 21 ಕೂಡ ಸಮಂಜಸ ನಿರ್ಬಂಧಗಳಿಗೆ ಒಳಪಟ್ಟಿದೆ. ಈ ಚಿತ್ರರಂಗದ ಜನರಿಂದಾಗಿ ಇದು ( ಬಾಡಿಗೆ ತಾಯ್ತನ) ಫ್ಯಾಷನ್ ಆಗಿದೆ ಎಂದು ನ್ಯಾ.ನಾಗರತ್ನ ಹೇಳಿದ್ದಾರೆ.

ಅಂತಿಮವಾಗಿ, ನ್ಯಾಯಪೀಠವು ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ನಿಗದಿಪಡಿಸಿದೆ.

ಎನ್‌ಇಪಿ ಜಾರಿಗೊಳಿಸುವಂತೆ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...