Homeಮುಖಪುಟನಿರುದ್ಯೋಗ ದಿನ ಆಚರಣೆ ಜತೆಗೆ ಪದವಿ ಸರ್ಟಿಫಿಕೇಟ್‌ ಪಿಎಂಗೆ ರವಾನಿಸಿ: ಡಿ.ಕೆ.ಶಿವಕುಮಾರ್‌

ನಿರುದ್ಯೋಗ ದಿನ ಆಚರಣೆ ಜತೆಗೆ ಪದವಿ ಸರ್ಟಿಫಿಕೇಟ್‌ ಪಿಎಂಗೆ ರವಾನಿಸಿ: ಡಿ.ಕೆ.ಶಿವಕುಮಾರ್‌

- Advertisement -
- Advertisement -

‘ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ನುಡಿದಂತೆ ನಡೆದುಕೊಳ್ಳಲು ವಿಫಲರಾಗಿದ್ದಾರೆ. ಹೀಗಾಗಿ ನಿರುದ್ಯೋಗ ದಿನ ಆಚರಣೆ ಜತೆಗೆ ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣ ಪತ್ರವನ್ನು ಮೋದಿ ಅವರಿಗೆ ಹಿಂದಿರುಗಿಸಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರೆಕೊಟ್ಟಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ನುಡಿದಂತೆ ನಡೆಯಬೇಕು. ಅದೇ ನಮ್ಮ ನೀತಿ ಹಾಗೂ ಧರ್ಮ. ನಾವು ಜನರ ಸೇವೆ ಮಾಡಲು ಬಂದಿದ್ದು, ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಇದನ್ನು ನಮ್ಮ ದೇಶ ಹಾಗೂ ನಾಡಿನ ಎಲ್ಲ ಧರ್ಮದಲ್ಲೂ ಬಸವಣ್ಣನವರ ಕಾಲದಿಂದಲೂ ನಾಯಕರು ಪ್ರತಿಪಾದಿಸಿಕೊಂಡು ಬಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದರು. 2 ಕೋಟಿ ಸರ್ಕಾರಿ ಉದ್ಯೋಗ ನೀಡಲು ಸಾಧ್ಯವಾಗದಿದ್ದರೂ ಕನಿಷ್ಟ ಖಾಸಗಿ ಉದ್ಯೋಗಗಳಾದರೂ ಸೃಷ್ಟಿಯಾಗುವಂತೆ ಮಾಡಬೇಕಿತ್ತು. ಉದ್ಯೋಗ ಸೃಷ್ಟಿಗೆ ಅಗತ್ಯ ನೀತಿ ರೂಪಿಸಬೇಕಾಗಿತ್ತು ಎಂದರು.

ಕೋವಿಡ್ ಸಂದರ್ಭದಲ್ಲಿ ದೇಶದಲ್ಲಿ 2 ಕೋಟಿ ಉದ್ಯೋಗ ನಷ್ಟವಾಗಿದೆ. ಸರ್ಕಾರ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನವನ್ನು ನಮ್ಮ ಯೂಥ್ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ? ಕೇವಲ ನಿರುದ್ಯೋಗ ದಿನ ಆಚರಣೆ ಮಾಡುವುದಷ್ಟೇ ಅಲ್ಲ, ಎಲ್ಲ ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದಿರುಗಿಸಬೇಕು ಎಂದು ಅವರು ಹೇಳಿದರು.


ಇದನ್ನೂ ಓದಿ: ಪ್ರಧಾನಿ ಮೋದಿಯವರ ಜನ್ಮದಿನ: “ರಾಷ್ಟ್ರೀಯ ನಿರುದ್ಯೋಗ ದಿನ” ಎಂದು ಟ್ವಿಟರ್‌ನಲ್ಲಿ ಟ್ರೆಂಡಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...