Homeಕರೋನಾ ತಲ್ಲಣಕೊರೊನಾ ಜೊತೆಗೆ ದೇಶದಲ್ಲಿ ಆತಂಕಕ್ಕೆ ಕಾರಣವಾದ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು

ಕೊರೊನಾ ಜೊತೆಗೆ ದೇಶದಲ್ಲಿ ಆತಂಕಕ್ಕೆ ಕಾರಣವಾದ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು

- Advertisement -
- Advertisement -

ಇಡೀ ದೇಶವೇ ಕೊರೊನಾ 2ನೇ ಅಲೆ ವಿರುದ್ಧ ಹೋರಾಡುತ್ತಿರುವಾಗಲೇ, ಡೆಲ್ಟಾ ಪ್ಲಸ್‌ ರೂಪಾಂತರಿ ಪ್ರಕರಣಗಳು ಆತಂಕಕ್ಕೆ ಕಾರಣವಾಗಿವೆ. ದೇಶದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿವೆ.

ಕೋವಿಡ್ ಸಾಂಕ್ರಾಮಿಕ ಡೆಲ್ಟಾ ರೂಪಾಂತರವು ‘ಡೆಲ್ಟಾ ಪ್ಲಸ್ ಅಥವಾ ಎವೈ.1(AY.1) ರೂಪಾಂತರವಾಗಿ ಪರಿವರ್ತನೆಗೊಂಡಿದೆ. ಇದು ಬಹಳ ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಹೊಸ ರೂಪಾಂತರದಿಂದಾಗಿ ಕೊರೊನಾ ರೋಗದ ತೀವ್ರತೆಯ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಈವರೆಗೆ 21 ಡೆಲ್ಟಾ ಪ್ಲಸ್ ರೂಪಾಂತರಿ ಕೇಸ್​ಗಳು ಕಾಣಿಸಿಕೊಂಡಿವೆ ಎಂದು ರಾಜ್ಯದ ಆರೋಗ್ಯ ಸಚಿವ ರಾಜೇಶ್​ ಟೋಪೆ ಹೇಳಿದ್ದಾರೆ. ಇವುಗಳಲ್ಲಿ 9 ಪ್ರಕರಣಗಳು ರತ್ನಗಿರಿಯಲ್ಲಿ, 7 ಪ್ರಕರಣಗಳು ಜಲ್ಗೋನ್‌ನಲ್ಲಿ, 2 ಪ್ರಕರಣಗಳು ಮುಂಬೈನಲ್ಲಿ ಮತ್ತು ಸಿಂದುದರ್ಗ್​​, ಥಾಣೆ ಮತ್ತು ಪಾಲ್ಗಾರ್​ ಜಿಲ್ಲೆಗಳಲ್ಲಿ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ ಎಂದು ಟೋಪೆ  ತಿಳಿಸಿದ್ದಾರೆ.

21 ಡೆಲ್ಟಾ ಪ್ಲಸ್ ರೂಪಾಂತರಿ ಕೇಸ್​ಗಳು ಪತ್ತೆಯಾಗಿರುವ ಹಿನ್ನೆಲ್ಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ 100 ಸ್ಯಾಂಪಲ್‌ಗಳನ್ನು ಪಡೆದು ಪರೀಕ್ಷೆಗೆ ಕಳುಹಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಕಳೆದ ಮೇ 15 ರಿಂದ 7,500 ಸ್ಯಾಂಪಲ್​ಗಳನ್ನು ಸಂಗ್ರಹಿಸಲಾಗಿದ್ದು, ಅವುಗಳಲ್ಲಿ 21 ಕೇಸ್​​ಗಳಲ್ಲಿ ಡೆಲ್ಟಾ ಪ್ಲಸ್​ ವೈರಸ್​​ ಕಂಡು ಬಂದಿದೆ. ಸೋಂಕಿತರ ವ್ಯಾಕ್ಸಿನೇಷನ್​ ಸ್ಥಿತಿ ಮತ್ತು ಅವರ ಟ್ರಾವೆಲ್​ ಹಿಸ್ಟರಿಯನ್ನು ಕಲೆ ಹಾಕಲಾಗಿದೆ ಎಂದು ರಾಜೇಶ್​ ಟೋಪೆ ತಿಳಿಸಿದ್ದಾರೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ಕೇರಳದ ಪಲಕ್ಕಾಡ್​​​​ ಮತ್ತು ಪತನಮಿತ್ತ ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇರಳ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಈ ಜಿಲ್ಲೆಗಳಲ್ಲಿ ಸೋಂಕನ್ನು ನಿಯಂತ್ರಿಸಲು ಸರ್ಕಾರ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪತನಮಿತ್ತ ಜಿಲ್ಲೆಯ ಕಡಪರಾ ಪಂಚಾಯತ್ ಮೂಲದ 4 ವರ್ಷದ ಬಾಲಕನಲ್ಲಿ, ಪಲಕ್ಕಾಡ್​ನಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಮಧ್ಯಪ್ರದೇಶದ ಭೂಪಾಲ್​ನ 65 ವರ್ಷದ ಮಹಿಳೆಯಲ್ಲಿ ಮೊದಲ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್ ಪ್ರಕರಣ ಪತ್ತೆಯಾಗಿತ್ತು. ಕೊರೊನಾ ಸೋಂಕಿನಿಂದ ಗುಣಮುಖರಾಗಿ ಹೋಂ ಐಸೋಲೇಷನ್‌ನಲ್ಲಿದ್ದ, ಎರಡು ಡೋಸ್ ವ್ಯಾಕ್ಸಿನ್​ ಪಡೆದಿದ್ದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಜೂನ್​ 17ರಂದು ಮಹಿಳೆಗೆ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್​ ಇರುವುದು ದೃಢಪಟ್ಟಿತ್ತು. ಆದರೆ ಆ ಸೋಂಕಿತೆ ಮಾಹಿತಿ ನೀಡಲು ನಿರಾಕರಿಸಿದರು ಎಂದು ಮಧ್ಯಪ್ರದೇಶದ ವೈದ್ಯಕೀಯ ಶೈಕ್ಷಣಿಕ ಸಚಿವ ವಿಶ್ವಾಸ್ ಸಾರಂಗ್​​ ತಿಳಿಸಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...