Homeಮುಖಪುಟಪ್ರತ್ಯೇಕ ರಾಜ್ಯದ ಬೇಡಿಕೆ ತಾರತಮ್ಯ ನಿವಾರಣೆಗೆ ಪರಿಹಾರ ಅಲ್ಲ: ಸಿಎಂ ಸಿದ್ದರಾಮಯ್ಯ

ಪ್ರತ್ಯೇಕ ರಾಜ್ಯದ ಬೇಡಿಕೆ ತಾರತಮ್ಯ ನಿವಾರಣೆಗೆ ಪರಿಹಾರ ಅಲ್ಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು. ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಅಧಿವೇಶನದ ಕೊನೆಯ ದಿನವಾದ ಇಂದು ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ ಈ ಮಾತುಗಳನ್ನಾಡಿದರು.

ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನವಾಗಿದೆ. ಕರ್ನಾಟಕದ ಏಕೀಕರಣಕ್ಕಾಗಿ ಬಹಳಷ್ಟು ಜನರು ಹೋರಾಡಿದ್ದಾರೆ. ಭಾಷಾವಾರು ಪ್ರಾಂತ್ರ್ಯ ರಚನೆಯಾಗಲು ಹೋರಾಟ ಮಾಡಿದವರಿದ್ದಾರೆ. ಹೈದರಾಬಾದ್ ಕರ್ನಾಟಕದ 371ಗೆ ತಿದ್ದುಪಡಿ ಆಗಿ 371 ಜೆ ಪರಿಚ್ಛೇದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್, ವೈಜನಾಥ್ ಪಾಟೀಲ್ ಮುಂತಾದವರು ಹೋರಾಡಿದ್ದಾರೆ. ನಾನು ಈ ಹಿಂದೆ 2014 ಮತ್ತು 2017 ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಿತ್ತು. ಒಮ್ಮೆ ಈ ಬಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಉತ್ತರ ನೀಡಿದ್ದೆ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ಖರ್ಚಾಗಿ ಅಭಿವೃದ್ಧಿಯಾಗಬೇಕು. ಕಿತ್ತೂರು ಕರ್ನಾಟದ 5 ತಾಲ್ಲೂಕುಗಳು ಸೇರಿದಂತೆ ಅತ್ಯಂತ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ಕೊಡಲಾಗುವುದು. ಕಲ್ಯಾಣ ಕರ್ನಾಟಕಕ್ಕೆ 2013-14 ರಿಂದ ಈವರೆಗೆ 14,877.36 ಕೋಟಿ ರೂ.ಗಳು ಮೀಸಲಿಡಲಾಗಿದೆ. ಬಿಡುಗಡೆಯಾಗಿದ್ದು 10,280 ಕೋಟಿ ರೂ. ಹಾಗೂ 8,330 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ವರ್ಷದಿಂದ 5,000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು. ಮುಂಬೈ ಕರ್ನಾಟಕದ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ನೀಡಲಾಗುವುದು ಎಂದರು.

ಇದನ್ನೂ ಓದಿ: ಸಹಕಾರಿ ಬ್ಯಾಂಕ್‌ಗಳಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ: ಸಿಎಂ ಸಿದ್ದರಾಮಯ್ಯ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...