Homeಚಳವಳಿಸಂಪೂರ್ಣ ಪ್ಯಾಕೇಜ್‌ಗಾಗಿ ಸಿಎಂ ಮನೆ ಮುತ್ತಿಗೆ ಯತ್ನ: ಹೋರಾಟಗಾರರ ಬಂಧನ

ಸಂಪೂರ್ಣ ಪ್ಯಾಕೇಜ್‌ಗಾಗಿ ಸಿಎಂ ಮನೆ ಮುತ್ತಿಗೆ ಯತ್ನ: ಹೋರಾಟಗಾರರ ಬಂಧನ

ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಬಾಲನ್ ಎಸ್, ಯೂಸೂಫ್ ಕನ್ನಿ, ವಿ. ನಾಗರಾಜ್, ಹಬೀಬುಲ್ಲಾ, ಕುಮಾರ್ ಸಮತಳ, ಗೌರಿ, ವರದರಾಜೇಂದ್ರ ಸೇರಿದಂತೆ ಒಟ್ಟು 40 ಮಂದಿಯನ್ನು ಬಂಧಿಸಿ ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ಯಲಾಗಿದೆ.

- Advertisement -
- Advertisement -

ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ 70 ಲಕ್ಷ ಕುಟುಂಬಗಳಿಗೆ ಸಮಗ್ರ ಪಡಿತರ ನೀಡಬೇಕು ಮತ್ತು 10 ಸಾವಿರ ನೆರವು ಧನ ನೀಡಬೇಕು. ದುಡಿವವರನ್ನು ಕಳೆದುಕೊಂಡ ಅನಾಥಗೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ಧನ ನೀಡಬೇಕು. ರೈತರ ಬಿತ್ತನೆ ಬೀಜ – ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು ಎಂಬ ಸಮಗ್ರ ಪ್ಯಾಕೇಜ್‌ಗೆ ಆಗ್ರಹಿಸಿ ಸಿಎಂ ಮನೆಯೆಡೆಗೆ ಜನಾಗ್ರಹ ನಡಿಗೆ ಆರಂಭಿಸಿದ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಬಾಲನ್ ಎಸ್, ಯೂಸೂಫ್ ಕನ್ನಿ, ವಿ. ನಾಗರಾಜ್, ಹಬೀಬುಲ್ಲಾ, ಅಫ್ಸರ್ ಕೊಡ್ಲಿಪೇಟೆ, ಕುಮಾರ್ ಸಮತಳ, ಗೌರಿ, ವರದರಾಜೇಂದ್ರ ಸೇರಿದಂತೆ ಒಟ್ಟು 40 ಮಂದಿಯನ್ನು ಬಂಧಿಸಿ ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ಯಲಾಗಿದೆ.

ಕೋವಿಡ್ ಚಿಕಿತ್ಸೆಯನ್ನು ಉಚಿತಗೊಳಿಸಬೇಕು, ವ್ಯವಸ್ಥಿತಗೊಳಿಸಬೇಕು, ಗ್ರಾಮಗಳಿಗೂ ವಿಸ್ತರಿಸಬೇಕು. ಎಲ್ಲರಿಗೂ ಸರ್ಕಾರದಿಂದಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆಯನ್ನು ಕೂಡಲೇ ಮಾಡಬೇಕು. ಸೆಪ್ಟೆಂಬರ್ ಒಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂಬ ಸಮಗ್ರ ಪ್ಯಾಕೇಜ್‌ಗಾಗಿ ಕಳೆದ 2 ತಿಂಗಳಿಂದ ಜನಾಗ್ರಹ ಆಂದೋಲನ ನಿರಂತರವಾಗಿ ಹೋರಾಡುತ್ತಿದೆ. ಈಗಾಗಲೇ ಮುಖ್ಯಮಂತ್ರಿಗಳಿಗೆ 2 ಬಾರಿ ಪತ್ರ ಬರೆದರೂ ಸ್ಪಂದಿಸಿಲ್ಲ ಎಂದು ಮುಖಂಡರು ದೂರಿದ್ದಾರೆ.

ಜನಾಗ್ರಹ, ಜನರಪರ ಸಂಘಟನೆಗಳು ಹಾಗೂ ಮಾಧ್ಯಮಗಳ ಒತ್ತಡದಿಂದಾಗಿ ಸರ್ಕಾರ ಎರಡು ಅರೆಮನಸ್ಸಿನ ಪ್ಯಾಕೇಜುಗಳನ್ನು ಘೋಷಿಸಿದೆ. ಆದರೆ ಅವು ಏತಕ್ಕೂ ಸಾಲದ ಪ್ಯಾಕೇಜುಗಳು. ಕೆಲಸವಿಲ್ಲದೆ ದುಡಿಯುವ ಜನರ ಜೇಬು ಮತ್ತು ಮನೆ ಪಾತ್ರೆ ಎರಡೂ ಖಾಲಿಯಾಗಿವೆ. ಹಸಿವಿನ ಹಾಗೂ ಹಣ ಅಭಾವದ ಹಾಹಾಕಾರ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಅಪಾಯದಲ್ಲಿರುವ ಜನಸಾಮಾನ್ಯರೆಲ್ಲರ ಜೀವ ಉಳಿಸಿಕೊಳ್ಳಲು, ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಅಗತ್ಯವಾಗಿದೆ ಎಂದು ಮಾವಳ್ಳಿ ಶಂಕರ್ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳನ್ನು ಭೇಟಿಯಾಗಲೇಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದು, ಸದ್ಯಕ್ಕೆ ಪೊಲೀಸ್ ಠಾಣೆಯಲ್ಲಿಯೇ ಧರಣಿ ಆರಂಭಿಸಿದ್ದಾರೆ. ನಾಲ್ಕು ಜನರ ನಿಯೋಗಕ್ಕೆ ಸಿಎಂ ಭೇಟಿಗೆ ಅವಕಾಶ ನೀಡಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...