Homeಚಳವಳಿದಲಿತ ಯುವಕನ ಸಾವಿಗೆ ನ್ಯಾಯಕ್ಕೆ ಆಗ್ರಹ: ಡಿ.12ರಂದು ಕೋಲಾರ ಚಲೋ ಹೋರಾಟ

ದಲಿತ ಯುವಕನ ಸಾವಿಗೆ ನ್ಯಾಯಕ್ಕೆ ಆಗ್ರಹ: ಡಿ.12ರಂದು ಕೋಲಾರ ಚಲೋ ಹೋರಾಟ

- Advertisement -
- Advertisement -

ದಲಿತ ಯುವಕ ಉದಯ್ ಕಿರಣ್ ಮೇಲೆ ಹಲ್ಲೆ ನಡೆಸಿ ಆತನ ಸಾವಿಗೆ ಕಾರಣವಾದ ಘಟನೆ ಖಂಡಿಸಿ, ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯುವಂತೆ ಒತ್ತಾಯಿಸಿ ಡಿಸೆಂಬರ್ 12ರಂದು ಕೋಲಾರ ಚಲೋ ಹೋರಾಟಕ್ಕೆ ಕರೆ ನೀಡಲಾಗಿದೆ.

ಕೋಲಾರ ಜಿಲ್ಲೆಯ ಪೆತ್ತಾಂಡ್ಲಹಳ್ಳಿಯಲ್ಲಿ ಬೈಕ್‌ನಲ್ಲಿ ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಉದಯ್ ಕಿರಣ್ ಮೇಲೆ ಪೆತ್ತಾಂಡ್ಲಹಳ್ಳಿಯ ನಾಲ್ವರು ಸವರ್ಣೀಯರು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಅದು ಉದಯ್ ಕಿರಣ್ ಸಾವಿಗೆ ಕಾರಣವಾಗಿತ್ತು. ಈಗ ಅದೇ ಸ್ಥಳದಿಂದ ಬೈಕ್ ರ್ಯಾಲಿ ಹೊರಟು ಕೋಲಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ದಲಿತ, ಪ್ರಗತಿಪರ ಸಂಘಟನೆಗಳು ನಿರ್ಧರಿಸಿವೆ.

ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಈ ರೀತಿಯ ಘಟನೆಗಳು ಮುಂದೆ ನಡೆಯದಂತೆ ತಡೆಯಬೇಕು. ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ಪರಿಹಾರ, ಮನೆ ಮತ್ತು ಸರ್ಕಾರಿ ಉದ್ಯೋಗ ನೀಡಬೇಕು. ಈ ಬೇಡಿಕೆಗಳ ಈಡೇರಿಕೆಗಾಗಿ ಮುಳಬಾಗಿಲು ತಾಲ್ಲೂಕಿನ ಪೆತ್ತಾಂಡ್ಲಹಳ್ಳಿಯಿಂದ ಕೋಲಾರದವರೆಗೆ ಬೈಕ್ ಜಾಥ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಂಬಾಲಪಲ್ಲಿ ಘಟನೆಯಿಂದ ಹಿಡಿದು ಉಳ್ಳೇರಹಳ್ಳಿ ಜಾತಿದೌರ್ಜನ್ಯದವರೆಗೂ, ಇಂದಿನ ಪೆತ್ತಾಂಡ್ಲಹಳ್ಳಿ ಕೊಲೆವರೆಗೂ ದಲಿತರ ಮೇಲಿನ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿವೆ. ಉತ್ತರ ಪ್ರದೇಶದಲ್ಲಿ ವರದಿಯಾಗುವ ಭೀಕರ ಘಟನೆಗಳು ನಮ್ಮಲ್ಲಿಯೂ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿದೆ. ಇದನ್ನು ತಡೆಯಲು ಹೋರಾಟ ಅನಿವಾರ್ಯ ಎಂದು ದಲಿತ ಹೋರಾಟಗಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರದ ದಲಿತ ಯುವಕನ ಮೇಲಿನ ಹಲ್ಲೆ ಖಂಡಿಸಿ ಪೆತ್ತಾಂಡ್ಲಹಳ್ಳಿ ಚಲೋಗೆ ನಿರ್ಧಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...