Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

- Advertisement -
- Advertisement -

ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ 6 ವರ್ಷ ಕಳೆದಿವೆ. ಗೌರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ, 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ ಶೀಟ್ ಸಲ್ಲಿಸಲಾಗಿದೆ. ಆದರೂ ತಪ್ಪಿತಸ್ಥರಿಗೆ ಇನ್ನೂ ಶಿಕ್ಷೆಯಾಗಿಲ್ಲ, ಇದಕ್ಕೆ ನಿಧಾನಗತಿಯ ವಿಚಾರಣೆಯೇ ಕಾರಣವಾಗಿದೆ. ಹಾಗಾಗಿ ಗೌರಿ ಲಂಕೇಶ್ ಹಾಗೂ ಸಾಹಿತಿ ಎಂಎಂ ಕಲುಬುರ್ಗಿ ಅವರ ಹತ್ಯೆ ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಲಯಕ್ಕೆ ನೀಡಬೇಕು ಎಂದು ಸಾಹಿತಿಗಳು, ಚಿಂತಕರು, ಪತ್ರಕರ್ತ ಹಾಗೂ ಹೋರಾಟಗಾರರು ಒತ್ತಾಯಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಒಟ್ಟು 18 ಆರೋಪಿಗಳ ಪೈಕಿ 17 ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ವಿಕಾಸ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣದ ಕುರಿತು ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 1ನೇ ಸೆಷನ್ಸ್ ಕೋರ್ಟ್‌ಗೆ ಒಂದು ವರ್ಷದ ಬಳಿಕ 500ಕ್ಕೂ ಹೆಚ್ಚು ಸಾಕ್ಷಿಗಳು ಹಾಗೂ 1 ಸಾವಿರಕ್ಕೂ ಹೆಚ್ಚು ಪುರಾವೆಗಳನ್ನು ದಾಖಲಿಸಿರುವ ಸುಮಾರು 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದಾರೆ.

ಈ ಮಧ್ಯೆ ಪ್ರಗತಿಪರ ಚಿಂತಕರುಗಳು ‘ಗೌರಿ ಪ್ರಕರಣದ ವಿಚಾರಣೆ ಎಲ್ಲಿಗೆ ಬಂತು?’ ಎಂಬ ಪ್ರಶ್ನೆ ಮಾಡಲು ಪ್ರಾರಂಭ ಮಾಡಿದ್ದರಿಂದ ಕೋರ್ಟ್‌ನಲ್ಲಿ ಐದು ವರ್ಷಗಳ ನಂತರದಲ್ಲಿ ಪ್ರಕರಣದ ಕುರಿತು ವಿಚಾರಣೆ ಪ್ರಾರಂಭವಾಗಿದೆ.

ವಿಚಾರಣೆಯು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಾಹಿತಿಗಳು, ಚಿಂತಕರು, ಪತ್ರಕರ್ತ ಹಾಗೂ ಹೋರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಚಿಂತಕ, ವಿಚಾರಾವಾದಿ, ಹಿರಿಯ ಪತ್ರಕರ್ತ ಶಿವಸುಂದರ್ ಅವರು, ”ಸಧ್ಯ ವಿಚಾರಣೆ ನಡೆಯುತ್ತಿರುವ ನ್ಯಾಯಾಲಯದಲ್ಲಿ ನ್ಯಾಯ ಸಿಗುವುದು ತುಂಬಾ ವಿಳಂಬವಾಗುತ್ತದೆ. ಏಕೆಂದರೆ, 2022ರ ಜುಲೈನಲ್ಲಿ ವಿಚಾರಣೆ ಆರಂಭವಾಗಿದ್ದು, 2023ರ ಅಗಷ್ಟ್ ವರೆಗೆ ಅಂದರೆ ಒಂದು ವರ್ಷದ ಅವಧಿಯಲ್ಲಿ ಕೇವಲ 83 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಆದರೆ, ಚಾರ್ಜ್‌ಶೀಟ್‌ನಲ್ಲಿ 500 ಸಾಕ್ಷಿ ಹಾಗೂ ಪುರಾವೆಗಳಿದ್ದು, ಅವುಗಳಲ್ಲಿ 200 ಸಾಕ್ಷಿಗಳನ್ನು ಕೈಬಿಡಲಾಗಿದೆ. ಉಳಿದ 300 ಸಾಕ್ಷಿ ವಿಚಾರಣೆ ಪೂರ್ಣಗೊಳ್ಳಬೇಕಾದರೆ ಸುಮಾರು 3-4 ವರ್ಷ ಸಮಯ ತಗೆದುಕೊಳ್ಳುತ್ತದೆ. ಈಗಾಗಲೇ 6 ವರ್ಷ ಕಳೆದುಹೋಗಿದೆ” ಎಂದರು.

”ಒಂದು ಪ್ರಕರಣಕ್ಕೆ ನ್ಯಾಯ ಸಿಗಲು 10 ವರ್ಷಗಳು ಬೇಕಾ? ಎನ್ನುವ ಪ್ರಶ್ನೆ ಮೂಡುತ್ತದೆ. ಸಾಕ್ಷಿಗಳ ವಿಚಾರಣೆ ಇಷ್ಟೊಂದು ನಿಧಾನಗತಿಯಲ್ಲಿ ಸಾಗಿದರೆ ಅದರಿಂದ ನ್ಯಾಯಕ್ಕೂ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಆರೋಪಿಗಳಿಗೂ ತೊಂದರೆ ಉಂಟಾಗುತ್ತದೆ. ಮಹಜರು ಮಾಡಿದ ಸಾಕ್ಷ್ಯದ ಗುಣಮಟ್ಟ ಕಳೆದುಹೋಗುತ್ತದೆ. ನ್ಯಾಯಬದ್ಧ ವಿಚಾರಣೆಯೂ ಸಾಧ್ಯವಾಗುವುದಿಲ್ಲ. ವಿಚಾರಣೆಯೇ ನಡೆಯದೆ ಆರೋಪಿಗಳು ಜೈಲಿನಲ್ಲಿ ಇರುವುದು ಸರಿಯಲ್ಲ. ಆರೋಪಿಗಳ ವಿಚಾರಣೆ ಬೇಗ ನಡೆದರೆ ಅಪರಾಧಿಗಳಿಗೆ ಶಿಕ್ಷೆಯಾಗಿ ನಿರಪರಾಧಿಗಳು ಹೊರಬರುತ್ತಾರೆ. ಹಾಗಾಗಿ ಎರಡೂ ದೃಷ್ಟಿಕೋನದಿಂದ ಗೌರಿ ಲಂಕೇಶ್ ಹಾಗೂ ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಲಯದ ಅಗತ್ಯವಿದೆ” ಎಂದು ಶಿವಸುಂದರ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ನೆನಪು: ಗೌರವ ನಮನ, ಸಂವಾದ ಕಾರ್ಯಕ್ರಮ – ಸಿಎಂ ಸಿದ್ದರಾಮಯ್ಯ ಭಾಗಿ

ಪ್ರಕರಣದ ವಿಚಾರಣೆ:

ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯು ಪ್ರತೀ ತಿಂಗಳಲ್ಲಿ ಮೊದಲ ಅಥವಾ ಎರಡನೇ ವಾರದ ಐದು ದಿನಗಳಲ್ಲಿ ನಡೆಯುತ್ತದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಬಾಲನ್ ಅವರನ್ನು ಸರಕಾರ ನೇಮಿಸಿದ್ದು, ಅವರೇ 2018ರಿಂದಲೂ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸುತ್ತಿದ್ದಾರೆ. ಇದರ ಜೊತೆಗೆ ವಿಚಾರಣೆ ಸಾಗುತ್ತಿರುವಾಗಲೇ ಕೋರ್ಟ್‌ನ ನ್ಯಾಯಪೀಠದಿಂದ ನಾಲ್ವರು ನ್ಯಾಯಾಧೀಶರು ಬದಲಾಗಿದ್ದಾರೆ.

ಆರೋಪಿಗಳ ಪರವಾಗಿ ವಾದ ಮಂಡಿಸುತ್ತಿರುವ ಏಳೆಂಟು ಹಿರಿಯ ಮತ್ತು ಕಿರಿಯ ವಕೀಲರುಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪ ಮಾಡಿದೆ. ಈ ಎಲ್ಲ ಕಾರಣಗಳಿಂದಾಗಿ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದೆ ಎನ್ನಲಾಗಿದೆ. ಒಟ್ಟು 18 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯ್ದೆಯ ಸೆಕ್ಷನ್ಗಳಾದ 25(1), 25(1ಃ), 27(1) ಮತ್ತು ಕೋಕಾ ಕಾಯ್ದೆಯ ಸೆಕ್ಷನ್ಗಳಾದ 3(1), 3(2), 3(3), 3(4) ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ, ಪರಶುರಾಮ್ ವಾಗ್ಮೊರೆ, ಗಣೇಶ್ ಮಿಸ್ಕಿನ್, ಅಮಿತ್ ಬಡ್ಡಿ, ಅಮಿತ್ ದೆಗ್ವೇಕರ್, ‘ರತ್ ಕುರ್ಣೇ, ಸುರೇಶ್ ಎಚ್.ಎಲ್., ರಾಜೇಶ್ ಬಂಗೇರ, ಸು‘ನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ್ ಎಡವೆ, ಶ್ರೀಕಾಂತ್ ಪಂಗರ್ಕರ್, ಕೆ.ಟಿ.ನವೀನ್ಕುಮಾರ್ ಹಾಗೂ ಹೃಷಿಕೇಶ್ ದೇವಡೇಕರ್ ಈ ಎಲ್ಲ ಆರೋಪಿಗಳೂ ನಾಲ್ಕೆ‘ದು ವರ್ಷಗಳಿಂದ ನ್ಯಾಯಾಂಗ ಬಂ‘ನದಲ್ಲಿದ್ದಾರೆ. ಅಮೋಲ್ ಕಾಳೆಯನ್ನೂ ಒಳಗೊಂಡಂತೆ 7 ಆರೋಪಿಗಳು ಮಹಾರಾಷ್ಟ್ರದವರು, ಉಳಿದವರು ಕರ್ನಾಟಕ ರಾಜ್ಯದವರು ಆಗಿದ್ದಾರೆ.

ಈ ಎಲ್ಲ ಆರೋಪಿಗಳಿಗೂ ಸನಾತನ ಸಂಸ್ಥೆ ಮತ್ತು ‘ಹಿಂದೂ ಜನ ಜಾಗೃತಿ ಸಂಸ್ಥೆ’ಗಳೊಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಸಂಬಂ‘ಗಳಿವೆ ಎಂಬುದು ಪ್ರಾಸಿಕ್ಯೂಷನ್ ಪತ್ತೆ ಹಚ್ಚಿರುವ ಸಂಗತಿಯಾಗಿದ್ದು, ಸನಾತನ ಸಂಸ್ಥೆಯ ಸಿದ್ಧಾಂತ ಮತ್ತು ಗುರಿಗಳು ಈ ಆರೋಪಿಗಳನ್ನು ಹತ್ಯೆ ಮಾಡಲು ಪ್ರೇರೇಪಿಸಿದೆ ಎಂದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಸನಾತನ ಸಂಸ್ಥೆಯ ಮಾರ್ಗ ದರ್ಶಕ ಗ್ರಂಥವಾಗಿರುವ ‘ಕ್ಷಾತ್ರ ‘ರ್ಮ ಸಾ‘ನ’ದ ಪ್ರಕಾರ ಹಿಂದೂ/ ಸನಾತನ ‘ರ್ಮಕ್ಕೆ ಕಂಟಕಪ್ರಾಯವಾಗಿರುವ ಜನರನ್ನು ಹತ್ಯೆ ಮಾಡುವ ಮೂಲಕ ಸನಾತನಕ್ಕೆ ಇರುವ ಅಡ್ಡಿಯನ್ನು ನಿವಾರಿಸಬೇಕು. ಅದರಲ್ಲೂ ಸ್ವಧರ್ಮೀಯರಲ್ಲೇ ಇರುವ ದ್ರೋಹಿಗಳನ್ನು ಶಿಕ್ಷಿಸಬೇಕು. ಈ ಸಿದ್ಧಾಂತವೇ ಆರೋಪಿಗಳಿಗೆ ಗೌರಿ ಹತ್ಯೆ ಕೊಲೆಗೆ ಪ್ರೇರಣೆ ನೀಡಿತು. ಈ ಅಪರಾ‘ದಲ್ಲಿ ಒಬ್ಬೊಬ್ಬರದ್ದು ಒಂದೊಂದು ನಿರ್ದಿಷ್ಟ ಪಾತ್ರವಿದೆ ಎಂಬುದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ತಂಡದವರೇ ಮಹಾರಾಷ್ಟ್ರದ ದಾಬೋಲ್ಕರ್, ಪನ್ಸಾರೆ ಹಾಗೂ ಕರ್ನಾಟಕದ ಸಂಶೋ‘ನ ಪ್ರೊ.ಎಂ.ಎಂ.ಕಲಬುರ್ಗಿಯವರ ಹತ್ಯೆಯಲ್ಲೂ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಇವರಲ್ಲಿ ಕೆಲವರು ಮಹಾರಾಷ್ಟ್ರದ ಜೈಲಿನಲ್ಲಿದ್ದಾರೆ. ಉಳಿದವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಆರೋಪಿಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಗುತ್ತಿದೆ.

ಈ ಮಧ್ಯೆ ಕೆಲ ಆರೋಪಿಗಳು ಜಾಮೀನು ಪಡೆಯಲು ಸೆಷನ್ಸ್ ಕೋರ್ಟ್‌ನಿಂದ ಹಿಡಿದು ಹೈಕೋರ್ಟ್, ಸುಪ್ರೀಂ ಕೋರ್ಟ್ ವರೆಗೂ ಪ್ರಯತ್ನಿಸಿದರೂ ಎಲ್ಲ ನ್ಯಾಯಾಲಯಗಳಲ್ಲೂ ಆರೋಪಿಗಳಿಗೆ ಜಾಮೀನು ನಿರಾಕರಣೆಯಾಗಿದೆ ಎಂಬುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...