Homeಕರ್ನಾಟಕಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ: ರಾಜ್ಯ ಸರ್ಕಾರಕ್ಕೆ ಶುಶ್ರೂಷಾಧಿಕಾರಿಗಳ ಎಚ್ಚರಿಕೆ

ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ: ರಾಜ್ಯ ಸರ್ಕಾರಕ್ಕೆ ಶುಶ್ರೂಷಾಧಿಕಾರಿಗಳ ಎಚ್ಚರಿಕೆ

- Advertisement -
- Advertisement -

ಶುಶ್ರೂಷಾಧಿಕಾರಿಗಳಿಗೆ ಮೂಲವೇತನ ನೀಡಿದಿದ್ದರೆ, ಗಾಂಧಿ ದಂಡಿನ ಸತ್ಯಾಗ್ರಹ ದಿನದಂದೇ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷೆ ರಾಧಾಸುರೇಶ್ ಪಿ.ಎನ್ ಬೆಂಗಳೂರಿನಲ್ಲಿ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ

ಸಂಘದ ವತಿಯಿಂದ ನಗರದ ಫ್ರೀಡಂಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಶುಶ್ರೂಷಾಧಿಕಾರಿಗಳ ಬೇಡಿಕೆಗಳನ್ನು ಇತ್ಯರ್ಥಗೊಳಿಸಲು ಮಾರ್ಚ್‌ 10ರಂದು ಸಭೆ ಮಾಡಲಾಗುವುದು ಎಂದು ತಿಳಿಸಿದ್ದರು. ಸಚಿವರ ಆಶ್ವಾಸನೆಯಂತೆ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂಪಡೆದಿರುತ್ತೇವೆ ಎಂದು ಮಾಹಿತಿ ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ

ಗುತ್ತಿಗೆ ಶುಶ್ರೂಷಾಧಿಕಾರಿಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನಿಗಧಿಪಡಿಸಬೇಕು. ಕನಿಷ್ಠ ಪಕ್ಷ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ವೈದ್ಯಾಧಿಕಾರಿಗಳಿರುವ ಮೂಲ ವೇತನ ಮಾದರಿಯಂತೆ ವೇತನ ನಿಗದಿ ಪಡಿಸಬೇಕು. ಮುಂಬರುವ ವಿಶೇಷ ನೇರ ನೇಮಕಾತಿಯಲ್ಲಿ ಜೇಷ್ಠತೆಯ ಆಧಾರದ ಮೇಲೆ ಕೃಪಾಂಕ ಮತ್ತು ವಯೋಮಿತಿ ಸಡಲಿಕೆಯನ್ನು ನೀಡಬೇಕು ಹಾಗು ಸೇವೆಯನ್ನು ಖಾಯಂ ಮಾಡಿ ಉದ್ಯೋಗ ಭದ್ರತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಗುತ್ತಿಗೆ ವೈದ್ಯಾಧಿಕಾರಿಗಳಿಗೆ 30 ಕೃಪಾಂಕ ನೀಡಿದಂತೆ, ಗುತ್ತಿಗೆ ಶುಶ್ರೂಷಾಧಿಕಾರಿಗಳಿಗೆ ವರ್ಷಕ್ಕೆ 3 ಕೃಪಾಂಕಗಳಂತೆ ಗರಿಷ್ಠ 30 ಕೃಪಾಂಕ ನೀಡಬೇಕು. ಎರಡು ವರ್ಷಗಳಿಂದ ಹಲವು ಸಭೆಗಳೆನ್ನೂ ನಡೆಸುತ್ತಿದ್ದರೂ ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಕುರಿತಂತೆ ಯಾವುದೇ ನೀತಿ ರೂಪಿಸಿಲ್ಲ. ತಕ್ಷಣ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕು. ಗುತ್ತಿಗೆ ಶುಶ್ರೂಷಾಧಿಕಾರಿಗಳ ಸೇವೆಯನ್ನು ನೇಮಕಾತಿಯಲ್ಲಿ ಪರಿಗಣಿಸಲು ಆದೇಶ ಹೊರಡಿಸಿದರೂ ಜಾರಿಗೆ ಬರಲಿಲ್ಲ. ತಕ್ಷಣ ಆದೇಶವನ್ನು ಜಾರಿಗೆ ತರಬೇಕು ಎಂದು ಅವರು ಹೇಳಿದ್ದಾರೆ.

ಮಾರ್ಚ್‌ 10ರಂದು ನಡೆಯುವ ಮಹತ್ವದ ಸಭೆಯಲ್ಲಿ ಶುಶ್ರೂಷಾಧಿಕಾರಿಗಳ ‘ಮೂಲ ವೇತನ’ ಸೇರಿದಂತೆ ಇತರೇ ಬೇಡಿಕೆಗಳನ್ನು ಈಡೇರಿಸದಿದ್ದರೆ, ಗಾಂಧಿ ದಂಡಿನ ಸತ್ಯಾಗ್ರಹದ ದಿನವಾದ ಮಾರ್ಚ್‌ 12ರಂದೇ ಮುಖ್ಯಮಂತ್ರಿಗಳಿಗೆ ಪತ್ರ ಚಳವಳಿ ಮಾಡಿ, ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತೇವೆ ಎಂದು ರಾಧಾ ಎಚ್ಚರಿಕೆ ನೀಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯ ಬಜೆಟ್ | ‘ಫಾಕ್ಸ್‌ಕಾನ್’ ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

ರಾಜ್ಯ ಬಜೆಟ್ | ‘ಫಾಕ್ಸ್‌ಕಾನ್’ ಕಂಪನಿಗೆ ₹6,900 ಕೋಟಿ ಪ್ರೋತ್ಸಾಹಕ ಘೋಷಿಸಿದ ಸಿದ್ದರಾಮಯ್ಯ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...