Homeಮುಖಪುಟರಾಜ್ಯದ ಕೃಷಿ ಕಾಯ್ದೆಗಳ ವಾಪಸ್‌ಗೆ ಆಗ್ರಹ: ನಾಳೆ ಬೆಳಗಾವಿಯಲ್ಲಿ ರೈತ ಅಧಿವೇಶನ

ರಾಜ್ಯದ ಕೃಷಿ ಕಾಯ್ದೆಗಳ ವಾಪಸ್‌ಗೆ ಆಗ್ರಹ: ನಾಳೆ ಬೆಳಗಾವಿಯಲ್ಲಿ ರೈತ ಅಧಿವೇಶನ

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದಲ್ಲಿ ಡಿಸೆಂಬರ್ 13 ರಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ನಾಳೆ ಬೆಳಗಾವಿಯಲ್ಲಿ ರೈತ ಅಧಿವೇಶನ ನಡೆಯಲಿದೆ.

ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಡಿಸೆಂಬರ್‌ 12ರಂದು ಬೆಳಿಗ್ಗೆ 11ಕ್ಕೆ ಬೆಳಗಾವಿಯ ಸಂಕಲ್ಪ ಗಾರ್ಡನ್‌ನಲ್ಲಿ ನಡೆಯಲಿರುವ ಈ ರೈತಾಧಿವೇಶನದಲ್ಲಿ ರಾಜ್ಯದ ವಿವಿಧ ಸಂಘಟನೆಗಳ 800ಕ್ಕೂ ಹೆಚ್ಚು ಮುಖಂಡರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಅವರು, “ಐತಿಹಾಸಿಕ ರೈತ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಈ ಹಿಂದೆ ಜಾರಿಗೊಳಿಸಿದ್ದ ಭೂ ಸುಧಾರಣಾ, ಎಂಪಿಎಂಸಿ, ಜಾನುವಾರು ಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸಿಲ್ಲ. ಈ ಹಿನ್ನೆಲೆ ರೈತ ಹಾಗೂ ಜನಪರ ಸಂಘಟನೆಗಳು ಒಟ್ಟುಗೂಡಿ ರೈತ ಅಧಿವೇಶನ ನಡೆಸುತ್ತಿದ್ದೇವೆ. ರೈತರ ಪರ್ಯಾಯ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ರೈತ ವಿರೋಧಿ ನಡೆಯ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

“ಈ ಬಾರಿಯ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಜನವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವ ನಿರ್ಣಯ ಕೈಗೊಳ್ಳಬೇಕು. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುವವರೆಗೂ ಹೋರಾಟ ಕೈ ಬಿಡುವುದಿಲ್ಲ. ನಿರಂತರ ಮಳೆಯಿಂದ ರಾಜ್ಯದಲ್ಲಿ ಬೆಳೆ ಹಾನಿ ಸಂಭವಿಸಿದೆ. ರೈತರಿಗೆ ₹ 2,500 ಕೋಟಿ ನಷ್ಟವಾಗಿದೆ. ಆದರೆ, ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವುದು ₹182 ಕೋಟಿ ಮಾತ್ರ. ಸಮೀಕ್ಷೆಯನ್ನೂ ವೈಜ್ಞಾನಿಕವಾಗಿ ನಡೆಸಿಲ್ಲ. ಸರ್ಕಾರ ನಿಗದಿ ಮಾಡಿರುವ ಪರಿಹಾರ ರೈತರಿಗೆ ಯಾವ ರೀತಿಯಲ್ಲೂ ನೆರವಾಗುವುದಿಲ್ಲ. ಹೀಗಾಗಿ ಸರ್ಕಾರ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು” ಎಂದು ಒತ್ತಾಯಿಸಿದರು.

ರೈತರ ಅಧಿವೇಶನವನ್ನು ಸಂಯುಕ್ತ ಕಿಸಾನ್‌ ಮೋರ್ಚಾದ ರಾಷ್ಟ್ರೀಯ ನಾಯಕರು ಮತ್ತು ಎಂಎಸ್‌ಪಿ ಸಮಿತಿ ಪ್ರತಿನಿಧಿಸುವ ಡಾ.ಅಶೋಕ ಧವಳೆ ಉದ್ಘಾಟಿಸಲಿದ್ದಾರೆ. ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು ಅಧಿವೇಶನದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ರಾಜ್ಯ ರೈತ ಸಂಘ, ಜನಾಂದೋಲನಗಳ ಮಹಾ ಮೈತ್ರಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ.

ಬೆಳಗಾವಿಯಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ಡಿಸೆಂಬರ್ 13 ರಂದು ಆರಂಭವಾಗಲಿದೆ. ಹಿಂದಿನ ದಿನ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರೈತ ಹೋರಾಟ ಬಿರುಸು ಪಡೆದುಕೊಳ್ಳುತ್ತಿದೆ. ಕರ್ನಾಟಕ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದಲ್ಲಿ ಡಿಸೆಂಬರ್ 13 ರಂದು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ರೈತರ ವಿಜಯೀ ಮೆರವಣಿಗೆ ಆರಂಭ: ವಿಡಿಯೋ – ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...