Homeಮುಖಪುಟಛತ್ತಿಸ್‌ಗಢ ಆದಿವಾಸಿ ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಒತ್ತಾಯ: ಸಿಎಂ ಗೆ ಪತ್ರ

ಛತ್ತಿಸ್‌ಗಢ ಆದಿವಾಸಿ ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಒತ್ತಾಯ: ಸಿಎಂ ಗೆ ಪತ್ರ

- Advertisement -
- Advertisement -

ಗಣಿಗಾರಿಕೆ ವಿರೋಧಿ ಮತ್ತು ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ 28 ವರ್ಷದ ಹಿಡ್ಮೆ ಮಾರ್ಖಂ ಅವರನ್ನು ಬಿಡುಗಡೆಗೊಳಿಸುವಂತೆ ಛತ್ತಿಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಗೇಲ್‌ಗೆ ಅಲ್ಲಿನ ನಾಗರಿಕರು ಪತ್ರ ಬರೆದಿದ್ದಾರೆ.

ದಂತೇವಾಡಾದ ಸಮೇಲಿಯಲ್ಲಿ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿಡ್ಮೆ ಮಾರ್ಖಂ ಅವರನ್ನು ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಬಂಧಿಸಿದ್ದರು. ಆದರೆ ಇದು ಅಪಹರಣ ಎಂದು ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಆರೋಪಿಸಿತ್ತು. ಆದರೆ ಪೊಲೀಸರು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈಗ ಹಿಡ್ಮೆ ಮೂರು ವಾರಗಳಿಂದ ಜೈಲಿನಲ್ಲಿದ್ದಾರೆ.

ಪಿಯುಸಿಎಲ್‌‌ ಹೇಳಿಕೆಯಂತೆ, “ಶಾಂತಿಯುತವಾಗಿ ನೆರೆದಿದ್ದ ಮುನ್ನೂರು ಗ್ರಾಮಸ್ಥರು ಮತ್ತು ಹೋರಾಟಗಾರರ ಮುಂದೆ ಹಿಡ್ಮೆ ಮಾರ್ಖಂ ಅವರನ್ನು ಎಳೆದೊಯ್ಯಲಾಯಿತು. ನೆರೆದಿದ್ದವರಲ್ಲಿ ಜೈಲು ಬಂದಿ ರಿಹೈ ಸಮಿತಿ ಮತ್ತು ಛತ್ತೀಸ್‌ಗಢ ಮಹಿಳಾ ಅಧಿಕಾರಿ ಮಂಚ್‌ನ ಹೋರಾಟಗಾರರು ಕೂಡ ಇದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ದಿನದಂದೇ ಆದಿವಾಸಿ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಅಪಹರಣ ಮಾಡಿದ ಪೊಲೀಸರು: ಆರೋಪ

ಬಂಧನದಲ್ಲಿದ್ದಾಗ ಛತ್ತೀಸ್‌ಗಡ ಪೊಲೀಸ್‌‌ ಮತ್ತು ಅರೆಸೈನಿಕ ಪಡೆಗಳಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಕವಾಸಿ ನಂದೆ ಮತ್ತು ಪಾಂಡೆ ಎಂಬ ಇಬ್ಬರು ಯುವತಿಯರ ನೆನಪಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪೊಲೀಸರ ದೌರ್ಜನ್ಯದಿಂದಾಗಿ ನಂದೆ ಮತ್ತು ಪಾಂಡೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಹಿಡ್ಮೆ ಅರೆಸೈನಿಕ ಪಡೆ ಕ್ಯಾಂಪ್‌ಗಳು ಮತ್ತು ಒಕ್ಕಲೆಬ್ಬಿಸುವುದರ ವಿರುದ್ಧದ ಗಟ್ಟಿ ಧ್ವನಿಯ ಹೋರಾಟಗಾರ್ತಿಯಾಗಿದ್ದಾರೆ. ‘ಜೈಲ್‌ ಬಂದಿ ರಿಹೈ ಸಮಿತಿ’ಯ ಕನ್ವೀನರ್ ಆಗಿರುವ ಅವರು ರಾಜ್ಯಪಾಲರು, ಮುಖ್ಯಮಂತ್ರಿ, ಪೊಲೀಸ್ ವರಿಷ್ಠಾಧಿಕಾರಿ, ಕಲೆಕ್ಟರ್ ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಿ, ಜೈಲುಗಳು ಮತ್ತು ಪೊಲೀಸ್ ಶಿಬಿರಗಳಲ್ಲಿ ಬಂಧಿಸಲ್ಪಟ್ಟ ಮತ್ತು ಶಿಕ್ಷೆಗೊಳಗಾದ ಅಮಾಯಕ ಆದಿವಾಸಿಗಳ ಬಿಡುಗಡೆಗಾಗಿ ಹಲವಾರು ಹೋರಾಟವನ್ನು ನಡೆಸಿದ್ದಾರೆ.

ತಮ್ಮ ಭೂಮಿಯನ್ನು ಪವಿತ್ರ ಭೂವಿ ಎಂದು ಪ್ರತಿಪಾದಿಸುವ ಅವರು ಅಲ್ಲಿನ ಗಣಿಗಾರಿಕೆ ವಿರುದ್ಧವೂ ಹೋರಾಡುತ್ತಿದ್ದರು. ಆದಿವಾಸಿಗಳು ಪವಿತ್ರ ಎಂದು ನಂಬುವ ನಂದರಾಜ್ ಬೆಟ್ಟವನ್ನು ಉಳಿಸುವ ಆಂದೋಲನದ ಭಾಗವಾಗಿ, ಅದಾನಿ ಪ್ರೈವೆಟ್‌‌ ಲಿಮಿಟೆಡ್‌‌ನಂತಹ ಕಂಪೆನಿಗಳು ಬೆಟ್ಟವನ್ನು ನಾಶಪಡಿಸುವುದನ್ನು ವಿರೋಧಿಸಿ, ಕಂಪೆನಿಯ ಗಣಿಗಾರಿಕೆ ಯೋಜನೆಗಳ ವಿರುದ್ಧ ತೀವ್ರವಾಗಿ ಹೋರಾಟವನ್ನು ಸಂಘಟಿಸಿದ್ದರು.


ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...