Homeಅಂತರಾಷ್ಟ್ರೀಯಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆಯಿಂದ ‘ಪ್ರಜಾಪ್ರಭುತ್ವ’ದ ಪಾಠ!

ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆಯಿಂದ ‘ಪ್ರಜಾಪ್ರಭುತ್ವ’ದ ಪಾಠ!

ಭಾರತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವುದನ್ನು ಜಗತ್ತು ಗಮನಿಸುತ್ತಿದೆ, ಪ್ರಧಾನಿ ತಮ್ಮ ಸರ್ವಾಧಿಕಾರಿ ಧೋರಣೆ ಬಿಡುವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

- Advertisement -
- Advertisement -

ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವೆನಿಕೊಂಡಿರುವ ಭಾರತದ ಪ್ರಧಾನಿ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಂದ ಪ್ರಜಾಪ್ರಭುತ್ವದ ಪಾಠ ಕೇಳುವಂತಾಗಿದ್ದು ದೇಶದ ಅತಿ ದೊಡ್ಡ ವಿಪರ್ಯಾಸ ಎಂದು ರಾಜ್ಯ ಕಾಂಗ್ರೆಸ್ ಶನಿವಾರ ಆಕ್ರೋಶ ವ್ಯಕ್ತಪಡಿಸಿದೆ.

ಮೂರು ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಶುಕ್ರವಾರ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು, ‘‘ವಿಶ್ವದೆಲ್ಲೆಡೆ ಪ್ರಜಾಪ್ರಭುತ್ವಕ್ಕೆ ಅಪಾಯವಿದ್ದು, ಇದನ್ನು ತಡೆಗಟ್ಟಲು, ನಮ್ಮ ದೇಶಗಳಲ್ಲಿ ಪ್ರಜಾಸತ್ತಾತ್ಮಕ ನೀತಿಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ರಕ್ಷಿಸಿಕೊಳ್ಳುವ ತುರ್ತು ಅಗತ್ಯವಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

“ನಮ್ಮ ದೇಶಗಳಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ನಾವೆಲ್ಲಾ ಏನು ಮಾಡಬೇಕು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕು. ನಮ್ಮ ದೇಶದ ಹಿತಾಸಕ್ತಿಗಾಗಿ ನಾವಿದನ್ನು ಮಾಡಲೇಬೇಕಿದೆ. ಪ್ರಜಾಪ್ರಭುತ್ವದ ಬಗ್ಗೆ ಭಾರತೀಯರ ಬದ್ಧತೆಯ ಬಗ್ಗೆ ಸ್ವತಃ ನನ್ನ ಕುಟುಂಬದವರನ್ನು ನೋಡಿ, ಅರ್ಥೈಸಿಕೊಂಡಿದ್ದೇನೆ. ಪ್ರಜಾಸತ್ತಾತ್ಮಕ ನೀತಿಗಳು ಮತ್ತು ಸಂಸ್ಥೆಗಳನ್ನು ಕಾಪಾಡಿಕೊಳ್ಳಲು ಏನೆಲ್ಲಾ ಮಾಡಬೇಕು ಎಂಬುದು ನನಗೆ ತಿಳಿದಿದೆ” ಎಂದು ಕಮಲಾ ಅವರು ಹೇಳಿದ್ದಾರೆ.

ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ತಾಯಿ ಶ್ಯಾಮಲಾ ಗೋಪಾಲನ್ ಅವರು ತಮಿಳುನಾಡಿನಲ್ಲಿ ನಾಗರಿಕ ಹಕ್ಕುಗಳ ಹೋರಾಟಗಾರರಾಗಿದ್ದರು.

ಇದನ್ನೂ ಓದಿ: ಮೋದಿ ಪ್ರವಾಸ ವಿರೋಧಿಸಿ ವೈಟ್‌ ಹೌಸ್‌ ಮುಂದೆ ಅನಿವಾಸಿ ಭಾರತೀಯರ ಪ್ರತಿಭಟನೆ

ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಪ್ರಜಾಪ್ರಭುತ್ವದ ಬಗ್ಗೆ ಪಾಠ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್‌, ಭಾರತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವುದನ್ನು ಜಗತ್ತು ಗಮನಿಸುತ್ತಿದೆ, ಪ್ರಧಾನಿ ತಮ್ಮ ಸರ್ವಾಧಿಕಾರಿ ಧೋರಣೆ ಬಿಡುವರೇ? ಎಂದು ಪ್ರಶ್ನಿಸಿದೆ.

ತನ್ನ ಅಧೀಕೃತ ಟ್ವಿಟರ್‌ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಕಾಂಗ್ರೆಸ್, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವೆನಿಸಿಕೊಂಡಿದ್ದ ಭಾರತದ ಪ್ರಧಾನಿ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಂದ ಪ್ರಜಾಪ್ರಭುತ್ವದ ಪಾಠ ಕೇಳುವಂತಾಗಿದ್ದು ದೇಶದ ಅತಿ ದೊಡ್ಡ ವಿಪರ್ಯಾಸ. ಭಾರತದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವುದನ್ನು ಜಗತ್ತು ಗಮನಿಸುತ್ತಿದೆ, ಪ್ರಧಾನಿ ತಮ್ಮ ಸರ್ವಾಧಿಕಾರಿ ಧೋರಣೆ ಬಿಡುವರೇ?” ಎಂದು ಕೇಳಿದೆ.

ಕಮಲಾ ಹ್ಯಾರಿಸ್ ಭೇಟಿಯ ನಂತರ ಶ್ವೇತಭವನದಲ್ಲಿ ಅಮೆರಿಕಾ ಅಧ್ಯಕ್ಷ ಜೊ ಬೈಡನ್‌ ‌ಅವರನ್ನು ಭೇಟಿಯಾದ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷೀಯ ಮಾತುಕತೆಯ ನಂತರ ಕ್ವಾಡ್ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಪ್ರಧಾನಿಯ ಮೂರು ದಿನದ ಅಮೆರಿಕಾ ಪ್ರವಾಸದಲ್ಲಿ ಇಂದು ಕೊನೆಯ ದಿನವಾಗಿದ್ದು, ಇಂದು ಸಂಜೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ತೆರಳಿ ಅಲ್ಲಿ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಕುರಿತು ಮೋದಿಯೊಂದಿಗೆ ಮಾತನಾಡಿ: ಬೈಡನ್‌ಗೆ ರಾಕೇಶ್ ಟಿಕಾಯತ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...