Homeಅಂತರಾಷ್ಟ್ರೀಯಜೋ ಬೈಡನ್ ಆಡಳಿತದಿಂದ RSS-BJP ಸಂಪರ್ಕ ಹೊಂದಿರುವ ಡೆಮಾಕ್ರಟ್‌ಗಳು ಹೊರಕ್ಕೆ!

ಜೋ ಬೈಡನ್ ಆಡಳಿತದಿಂದ RSS-BJP ಸಂಪರ್ಕ ಹೊಂದಿರುವ ಡೆಮಾಕ್ರಟ್‌ಗಳು ಹೊರಕ್ಕೆ!

ಒಬಾಮಾ ಆಡಳಿತದ ಭಾಗವಾಗಿದ್ದ ಸೋನಾಲ್ ಷಾ ಮತ್ತು ಅಮಿತ್ ಜಾನಿ ಅವರರನ್ನು ಬೈಡನ್ ನಾಮನಿರ್ದೇಶಿತ ಭಾರತೀಯ-ಅಮೆರಿಕನ್ನರ ಪಟ್ಟಿಗೆ ಸೇರಿಸಿಲ್ಲ.

- Advertisement -
- Advertisement -

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರ ಆಡಳಿತದಲ್ಲಿ ಪ್ರಮುಖ ಸ್ಥಾನಗಳಿಗೆ 13 ಮಹಿಳೆಯರು ಸೇರಿದಂತೆ ಸುಮಾರು 20 ಭಾರತೀಯ-ಅಮೆರಿಕನ್ನರನ್ನು ನಾಮನಿರ್ದೇಶನ ಮಾಡಿದ್ದಾರೆ. ಆದರೆ ಬೈಡನ್ ಪರ ಅಭಿಯಾನದಲ್ಲಿ ಕೆಲಸ ಮಾಡಿದ್ದರೂ ಸಹ ಆರ್‌ಎಸ್‌ಎಸ್-ಬಿಜೆಪಿ ಸಂಪರ್ಕ ಹೊಂದಿರುವವರನ್ನು ಆ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.

ಮುಖ್ಯವಾಗಿ ಒಬಾಮಾ ಆಡಳಿತದ ಭಾಗವಾಗಿದ್ದ ಸೋನಾಲ್ ಷಾ ಮತ್ತು ಅಮಿತ್ ಜಾನಿ ಅವರರನ್ನು ಬೈಡನ್ ನಾಮನಿರ್ದೇಶಿತ ಭಾರತೀಯ-ಅಮೆರಿಕನ್ನರ ಪಟ್ಟಿಗೆ ಸೇರಿಸಿಲ್ಲ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಯೊಂದಿಗಿನ ಸಂಪರ್ಕ ಹೊಂದಿದ್ದರು ಎಂದು ಹಲವು ಸಂಘಟನೆಗಳು ದೂರಿರುವುದೇ ಅವರನ್ನು ಹೊರಗಿಡಲು ಪ್ರಮುಖ ಕಾರಣ ಎಂದು ವರದಿ ತಿಳಿಸಿದೆ.

ಬಿಡೆನ್ ಅವರ ಏಕತೆ ಕಾರ್ಯಪಡೆಯಲ್ಲಿ ಸೇವೆ ಸಲ್ಲಿಸಿರುವ ಸೋನಾಲ್ ಷಾ ಅವರ ತಂದೆ ಬಿಜೆಪಿ-ಯುಎಸ್ಎಯ ಸಾಗರೋತ್ತರ ಸಂಘದ ಅಧ್ಯಕ್ಷರಾಗಿದ್ದರು ಮತ್ತು ಆರ್‌ಎಸ್‌ಎಸ್ ನಡೆಸುತ್ತಿರುವ ಏಕಲ್ ವಿದ್ಯಾಲಯದ ಸ್ಥಾಪಕರಾಗಿದ್ದಾರೆ. ಅಲ್ಲದೆ ಏಕಲ್ ವಿದ್ಯಾಲಯಕ್ಕಾಗಿ ಸೋನಾಲ್ ಷಾ ಹಣವನ್ನು ಸಂಗ್ರಹಿಸಿದ್ದಾರೆ ಎಂಬ ಆರೋಪವಿದೆ.

ಜಾನಿ ಅವರು ‘ನೇಮ್ ಬಿಡೆನ್’ ಅಭಿಯಾನದ ‘ಮುಸ್ಲಿಂ ಔಟ್‌ರೀಚ್‌ನ’ ಸಂಯೋಜಕರಾಗಿದ್ದರು. ಆದರೆ ಅವರ ಕುಟುಂಬಕ್ಕೆ ಪಿಎಂ ಮೋದಿ ಮತ್ತು ಇತರ ಬಿಜೆಪಿ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದು ವರದಿಯಾಗಿದೆ.

ಆರ್‌ಎಸ್‌ಎಸ್-ಬಿಜೆಪಿ ಸಂಬಂಧ ಹೊಂದಿರುವವರು ಬಿಡೆನ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಏಕೆಂದರೆ ಜಾತ್ಯತೀತ ಭಾರತೀಯ-ಅಮೆರಿಕನ್ ಸಂಸ್ಥೆಗಳು ಅಂತಹ ವ್ಯಕ್ತಿಗಳನ್ನು ಬದಿಗೆ ಸರಿಸುವಂತೆ ಬೈಡನ್ ಅವರ ಪರಿವರ್ತನಾ ತಂಡವನ್ನು ಸತತವಾಗಿ ಒತ್ತಾಯಿಸಿವೆ ಎನ್ನಲಾಗಿದೆ.

ಇದಕ್ಕೆ ವ್ಯತಿರಿಕ್ತವಾಗಿ ದೇವಯಾನಿ ಖೋಬರ್‌ಗಡೆ ಪ್ರಕರಣದಲ್ಲಿ ಪಾತ್ರವಹಿಸಿದ್ದ ಹಿರಿಯ ರಾಜತಾಂತ್ರಿಕ ಉಜ್ರಾ ಜಯಾ ಅಥವಾ ಸಿಎಎ, ಎನ್‌ಆರ್‌ಸಿ ಮತ್ತು ಕಾಶ್ಮೀರ ಲಾಕ್‌ಡೌನ್ ವಿರುದ್ಧ ಯುಎಸ್‌ನಲ್ಲಿ ಪ್ರತಿಭಟನಾ ರ್ಯಾಲಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಸಮೀರಾ ಫಾಜಿಲಿ ಅವರಂತಹ ವ್ಯಕ್ತಿಗಳನ್ನು ಬಿಡೆನ್ ತಂಡ ಹೊಂದಿದೆ ಎಂದು ದಿ ಟ್ರಿಬ್ಯೂನ್‌ ವರದಿ ಮಾಡಿದೆ.


ಇದನ್ನೂ ಓದಿ: ಮೊದಲ ದಿನವೇ ವಲಸೆ, ಹವಾಮಾನ ಬದಲಾವಣೆ, ಕೋವಿಡ್ ನಿರ್ವಹಣೆಯ ನೀತಿಗಳ ಬದಲಾವಣೆಗೆ ಸಹಿ ಹಾಕಿದ ಬೈಡನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. America is not like India, they wouldn’t take decisions based on the allegations, but based on the materialistic evidence. That is the reason America is world strong democracy.

    India is just a country of sentimental fools.

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...