Homeಮುಖಪುಟಅಕ್ಬರ್ ನಗರದಲ್ಲಿ ತೆರವು ಕಾರ್ಯಾಚರಣೆ: 614 ಕಟ್ಟಡಗಳನ್ನು ಕೆಡವಿದ ಎಲ್‌ಡಿಎ

ಅಕ್ಬರ್ ನಗರದಲ್ಲಿ ತೆರವು ಕಾರ್ಯಾಚರಣೆ: 614 ಕಟ್ಟಡಗಳನ್ನು ಕೆಡವಿದ ಎಲ್‌ಡಿಎ

- Advertisement -
- Advertisement -

ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಮೀಪದ ಮುಸ್ಲಿಂ ಬಾಹುಳ್ಯ ಪ್ರದೇಶ ಅಕ್ಬರ್ ನಗರದಲ್ಲಿ ಜೂನ್ 10ರಿಂದ ಮನೆ, ಅಂಗಡಿಗಳು ಸೇರಿದಂತೆ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಲಕ್ನೋ ಅಭಿವೃದ್ದಿ ಪ್ರಾಧಿಕಾರ (ಎಲ್‌ಡಿಎ) ಅಕ್ಬರ್ ನಗರ ಹಂತ 1 ಮತ್ತು 2ರಲ್ಲಿ ತೆರವು ಕಾರ್ಯಾಚರಣೆ ನಡೆಸುತ್ತಿದೆ. ಇನ್ನು ಮೂರು ದಿನಗಳಲ್ಲಿ ಕಾರ್ಯಾಚರಣೆ ಅಂತ್ಯವಾಗಲಿದೆ ಎಂದು ಜೂನ್ 14ರಂದು ಎಲ್‌ಡಿಎ ವಿಸಿ ಇಂದ್ರಮಣಿ ತ್ರಿಪಾಠಿ ತಿಳಿಸಿದ್ದಾರೆ. ಅಕ್ಬರ್ ನಗರದಲ್ಲಿ ಈ ಹಿಂದೆಯೂ ತೆರವು ಕಾರ್ಯಾಚರಣೆ ನಡೆದಿದೆ. ಈ ನಡುವೆ ನ್ಯಾಯಾಲಯದ ಮಧ್ಯಪ್ರವೇಶದಿಂದ ಕಾರ್ಯಾಚರಣೆ ಸ್ಥಗಿತಗೊಂಡಿತ್ತು.

ಕುಕ್ರೈಲ್ ನದಿಪಾತ್ರದ ಅಭಿವೃದ್ದಿ ಮತ್ತು ಅತಿಕ್ರಮಣ ತೆರವಿಗಾಗಿ ಕಟ್ಟಡಗಳನ್ನು ಧ್ವಂಸ ಮಾಡಲಾಗುತ್ತಿದೆ ಎಂದು ಎಲ್‌ಡಿಎ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ (ಜೂನ್ 14) ಒಟ್ಟು 165 ನಿರ್ಮಾಣಗಳನ್ನು ಕಡೆವಲಾಗಿದ್ದು, ಜೂನ್ 10ರಿಂದ ಇದುವರೆಗೆ ಒಟ್ಟು 614 ಕಟ್ಟಡಗಳನ್ನು ಧ್ವಂಸ ಮಾಡಲಾಗಿದೆ.

ಸುಪ್ರೀಂ ಕೋರ್ಟ್ ಅಕ್ಬರ್‌ ನಗರದಲ್ಲಿ ತೆರವು ಕಾರ್ಯಾಚರಣೆ ನಡೆಸದಂತೆ ತಡೆ ನೀಡಿತ್ತು. ತಡೆ ಅವಧಿ ಪೂರ್ಣಗೊಂಡ ಹಿನ್ನೆಲೆ ತೆರವು ಕಾರ್ಯಾಚರಣೆ ಪುನರಾರಂಭಗೊಂಡಿದೆ ಎಂದು ವರದಿಯಾಗಿದೆ.

2015ರಲ್ಲಿ ಗೋಮತಿ ರಿವರ್ ಫ್ರಂಟ್ ಪ್ರಾಜೆಕ್ಟ್ ಅನ್ನು ಲಕ್ನೋ ಅಭಿವದ್ದಿ ಪ್ರಾಧಿಕಾರ ಕೈಗೆತ್ತಿಕೊಂಡಿದೆ. ಈ ಯೋಜನೆಯಡಿ ನಗರದ ನದಿ ಮತ್ತು ಅದರ ಪಾತ್ರದ ಅಭಿವೃದ್ದಿ. ನದಿ ಪಾತ್ರದ ಅಕ್ರಮ ನಿರ್ಮಾಣಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಯೋಜನೆಯ ಭಾಗವಾಗಿ ಕುಕ್ರೈಲ್ ನದಿ ಪಾತ್ರದ ಅಕ್ಬರ್ ನಗರದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ಬೀದಿಗೆ ಬಿದ್ದ ಸಾವಿರಾರು ಜನರು

ಅಕ್ರಮವೋ ಸಕ್ರವೋ ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಎಲ್‌ಡಿಎ ಮನೆ, ಅಂಗಡಿಗಳನ್ನು ಧ್ವಂಸ ಮಾಡಿರುವುದರಿಂದ ಅಕ್ಬರ್ ನಗರ ಜನರು ಬೀದಿಗೆ ಬಿದ್ದಿದ್ದಾರೆ. ಇರಲು ಮನೆಯಿಲ್ಲದೆ, ಜೀವನೋಪಾಯಕ್ಕೆ ದಾರಿಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅಕ್ಬರ್ ನಗರ ಮುಸ್ಲಿಂ ಬಾಹುಳ್ಯದ ಪ್ರದೇಶವಾದ್ದರಿಂದ ಯೋಗಿ ಅದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮುಸ್ಲಿಮರನ್ನು ಗುರಿಯಾಗಿಸಿ ತೆರವು ಕಾರ್ಯಾಚರಣೆ ನಡೆಸಿದೆ ಎಂಬ ಆರೋಪಗಳೂ ಕೇಳಿ ಬಂದಿವೆ.

ಇದನ್ನೂ ಓದಿ : ಮಾರ್ಕ್ಸ್‌ವಾದಿ ಇ ಕೆ ನಾಯನಾರ್ ನನ್ನ ರಾಜಕೀಯ ಗುರು: ಕೇಂದ್ರ ಸಚಿವ ಸುರೇಶ್‌ ಗೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...