Homeಕರ್ನಾಟಕಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

- Advertisement -
- Advertisement -

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಜಿಸಿಬಿ ಯಂತ್ರಗಳನ್ನು ಬಳಸಿ, ಜಿಬಿಎ ಅಧಿಕಾರಿಗಳು ಮತ್ತು ಪೊಲೀಸರ ಸಮ್ಮುಖದಲ್ಲಿ, ಯಾವುದೇ ಪೂರ್ವ ಸೂಚನೆ ಅಥವಾ ಕಾನೂನುಬದ್ಧ ಮಾಹಿತಿ ನೀಡದೇನೆಲಸಮಗೊಳಿಸಿ128 ದಿನಗಳು ಕಳೆದಿವೆ. ಸರ್ಕಾರವು ಪುನರ್ವಸತಿಯ ಭರವಸೆ ನೀಡಿತ್ತು. ಆದರೆ ಇಂದಿಗೂ ಆ ಭರವಸೆ ಈಡೇರಿಲ್ಲ. ಜನರು ತೀವ್ರ ಚಳಿ ಮತ್ತು ಉರಿಯುವ ಬಿಸಿಲನ್ನುಸಹಿಸಿಕೊಂಡು ಇನ್ನೂ ಬೀದಿಯಲ್ಲೇ ಬದುಕುತ್ತಿದ್ದಾರೆ ಎಂದು ಕೋಗಿಲು ಲೇಔಟ್‌ ಸ್ಲಂ ನಿವಾಸಿಗಳ ಹೋರಾಟ ಸಮಿತಿ ತಿಳಿಸಿದೆ. 

2026 ಏಪ್ರಿಲ್ 29ರ, ಮಧ್ಯಾಹ್ನ 12:30 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಮಿತಿ ಸರ್ಕಾರವು ಮುಂದಿನ 15ದಿನಗಳೊಳಗೆ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿದೆ. ಪುನರ್ವಸತಿ ಕಲ್ಪಿಸುವಲ್ಲಿ ಸರ್ಕಾರ ವಿಫಲವಾದಲ್ಲಿ, ಸಮಿತಿಯು ಅನಿರ್ದಿಷ್ಟಾವಧಿ ಹೋರಾಟ ಆರಂಭಿಸುವ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಗೌರಮ್ಮ ಅವರು, ‘ಸರ್ಕಾರವು ಬಡವರ ಮನೆಗಳನ್ನು ನೆಲಸಮಗೊಳಿಸಿ ಅವರನ್ನು ಬೀದಿಗೆ ತಳ್ಳಿದೆ’ ಎಂದು ಹೇಳಿದ್ದಾರೆ. ಜನಪರ ಸರ್ಕಾರವೆಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರವು ಹೊಸ ವರ್ಷದ ಮೊದಲು ಒಳ್ಳೆಯ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ರಾಜಕೀಯ ಒತ್ತಡದ ಕಾರಣದಿಂದ ಆ ಭರವಸೆಯನ್ನು ಈಡೇರಿಸಲು ವಿಫಲವಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ನ್ಯಾಯ ಸಿಗುವವರೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯು ಸಮುದಾಯದೊಂದಿಗೆ ನಿಲ್ಲುತ್ತದೆ ಎಂದು ಅವರು ತಿಳಿಸಿದ್ದಾರೆ ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟವನ್ನು ಆರಂಭಿಸಲಾಗುವುದು ಎಂದು ಎಚ್ಚರಿಸಿದ್ದಾರೆ. 

ಪ್ರಜಾ ವಿಮೋಚನಾ ಚಳುವಳಿಯ ಮುನಿ ಅಂಜಿನಪ್ಪ ಅವರು ಮಾತನಾಡಿ, ‘ಕೋಗಿಲು ಲೇಔಟ್‌ನ ಸ್ಥಳಾಂತರಗೊಂಡ ನಿವಾಸಿಗಳಿಗೆ ಕಂದಾಯ ಸಚಿವರು, ವಸತಿ ಸಚಿವರು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಪುನರ್ವಸತಿ ಕಲ್ಪಿಸುವ ಭರವಸೆ ನೀಡಿದ್ದರು, ಇಷ್ಟು ದಿನ ನಾವು ತಾಳ್ಮೆಯಿಂದ ಕಾಯುತ್ತಿದ್ದೇವೆ. ಆದರೆ ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ಹಗಲು-ರಾತ್ರಿ ನಿರಂತರ ಧರಣಿ ಆರಂಭಿಸಲಾಗುವುದು’ ಎಂದು ಹೇಳಿದ್ದಾರೆ. 

ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಮರಿಯಪ್ಪ ಅವರು ಮಾತನಾಡಿ, ‘ಜಿಬಿಎ ನಡೆಸಿದ ನೆಲಸಮ ಕಾರ್ಯಾಚರಣೆಯಿಂದ ಸಮುದಾಯವು ಕಳೆದ ನಾಲ್ಕು ತಿಂಗಳುಗಳಿಂದ ಬೀದಿಯಲ್ಲೇ ಬದುಕುವಂತಾಗಿದೆ’ ಎಂದು ಹೇಳಿದ್ದು, ಅತ್ಯಂತ ಅಂಚಿನ ಸಮುದಾಯಗಳು ಮೂಲಭೂತ ಸೌಲಭ್ಯಗಳಿಲ್ಲದೆ ತೀವ್ರ ಹವಾಮಾನ ಪರಿಸ್ಥಿತಿಯಲ್ಲಿ ಬದುಕುತ್ತಾ, ಇನ್ನೂ ಭರವಸೆ ನೀಡಿದ ಪುನರ್ವಸತಿಗಾಗಿಕಾಯುತ್ತಿವೆ, ಇನ್ನೂ ಹೆಚ್ಚು ಕಾಲ ಕಾಯಲು ಸಾಧ್ಯವಿಲ್ಲ. ಕರ್ನಾಟಕದಾದ್ಯಂತ ಎಲ್ಲಾ ಜನಪರ ಸಂಘಟನೆಗಳು ಕೋಗಿಲು ಲೇಔಟ್ ನಿವಾಸಿಗಳ ಹೋರಾಟಕ್ಕೆ ಬೆಂಬಲ ನೀಡಲಿವೆ ಎಂದು ಕರೆನೀಡಿದ್ದಾರೆ. ಅಲ್ಲದೇ ಮೇ 12ರಿಂದ ನಿರಂತರ ಹೋರಾಟ ಆರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

ಸಮುದಾಯದ ಪ್ರತಿನಿಧಿಗಳಾದ ಶಬಾನಾ, ಹಸೀನಾ ಮತ್ತು ನಾರಾಯಣಮ್ಮ ಅವರು ಕಳೆದ 128 ದಿನಗಳಿಂದ ಅನುಭವಿಸಿದ ಕಷ್ಟಗಳನ್ನು ಹಂಚಿಕೊಂಡರು, ಚುನಾವಣೆಯ ಸಮಯದಲ್ಲಿ ನಾಯಕರು ಮತ ಕೇಳಲು ನಮ್ಮ ಮನೆಗಳಿಗೆ ಬಂದಿದ್ದರು. ಈಗ ಅವರು ನಮಗೆ ಮನೆಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ್ದು, ಅದು ಸಾಧ್ಯವಾಗದಿದ್ದರೆ, ನಾವು ಈಗಿರುವ ಸ್ಥಳದಲ್ಲಿಯೇ ಭೂಮಿ ಹಕ್ಕು ನೀಡಬೇಕು, ಆಗ ನಾವು ಮನೆಗಳನ್ನು ಪುನರ್‌ನಿರ್ಮಿಸಿ ಅಲ್ಲಿಯೇ ಬದುಕಬಹುದು ಎಂದು ಹೇಳಿದ್ದಾರೆ. ಇಲ್ಲವಾದಲ್ಲಿ, ಫ್ರೀಡಂಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ದುಡಿಯುವ ಜನರ ವೇದಿಕೆಯ ಪರವಾಗಿ ಮಾತನಾಡಿದ ನಂದಿನಿ ಅವರು, ‘ನಗರಗಳಿಗೆ ವಲಸೆ ಬಂದು ನಗರ ನಿರ್ಮಾಣಕ್ಕೆ ಕೊಡುಗೆ ನೀಡುವ ಸಮುದಾಯಗಳಿಗೆ ಗೌರವಯುತ ವಸತಿ ಕಲ್ಪಿಸುವುದು ಸರ್ಕಾರದ ಸಂವಿಧಾನಬದ್ಧ ಜವಾಬ್ದಾರಿ’ ಎಂದು ಹೇಳಿದರು. ಆದರೆ ಸರ್ಕಾರವು ಅವರ ಮನೆಗಳನ್ನು ನೆಲಸಮಗೊಳಿಸಿ ಅವರನ್ನು ಬೀದಿಗೆ ತಳ್ಳಿರುವುದು ಅನ್ಯಾಯವಾಗಿದೆ ಎಂದಿದ್ದಾರೆ. ಮುಂದಿನ ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದೇ ಏಕೈಕ ಮಾರ್ಗವಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...