Homeಮುಖಪುಟ’ಕೆಡವುವಿಕೆ ಪ್ರತಿಕಾರವಾಗಿರಬಾರದು’: ಬುಲ್ಡೋಜರ್‌ ದಾಳಿ ನಡೆಸಿದ್ದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

’ಕೆಡವುವಿಕೆ ಪ್ರತಿಕಾರವಾಗಿರಬಾರದು’: ಬುಲ್ಡೋಜರ್‌ ದಾಳಿ ನಡೆಸಿದ್ದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

- Advertisement -
- Advertisement -

ಪ್ರವಾದಿ ಮುಹಮ್ಮದ್ ಕುರಿತ ಅವಹೇಳನಾಕಾರಿ ಹೇಳಿಕೆ ನೀಡಿದವರ ವಿರುದ್ಧ ಉತ್ತರಪ್ರದೇಶದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಆರೋಪಿಗಳ ಮನೆಗಳನ್ನು ಧ್ವಂಸಗೊಳಿಸಿಸಲು ಬುಲ್ಡೋಜರ್‌ ದಾಳಿ ನಡೆಸಿದ್ದ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ (ಜೂನ್.16) ಛೀಮಾರಿ ಹಾಕಿದೆ.

“ಕೆಡವುವಿಕೆ ಎಂಬುದು ಕಾನೂನಿನ ಪ್ರಕಾರವಾಗಿರಬೇಕು, ಅವು ಪ್ರತೀಕಾರವಾಗಿರಬಾರದು” ಎಂದಿರುವ ಸುಪ್ರೀಂಕೋರ್ಟ್ ಗುರುವಾರ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಆದರೆ, ಕಟ್ಟಡವನ್ನು ನೆಲಸಮ ಮಾಡುವುದನ್ನು ನಿಲ್ಲಿಸುವಂತೆ ಆದೇಶ ನೀಡಿಲ್ಲ. “ನಾವು ಕಟ್ಟಡ ಉರುಳಿಸುವಿಕೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ. ಅವರಿಗೆ ಕಾನೂನಿನ ಪ್ರಕಾರ ಹೋಗಿ ಎಂದು ಹೇಳಬಹುದು” ಎಂದು ನ್ಯಾಯಾಲಯ ಹೇಳಿದೆ.

ಜಮಿಯತ್ ಉಲಾಮಾ-ಇ-ಹಿಂದ್ (Jamiat Ulama-i-Hind) ಎಂಬ ಸಂಘಟನೆಯು ಬುಲ್ಡೋಜರ್‌ ದಾಳಿ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದು, ಮನೆಗಳನ್ನು ಅಕ್ರಮವಾಗಿ ಧ್ವಂಸ ಮಾಡಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು.

ಇದನ್ನೂ ಓದಿ: ಹಿಂಸಾಚಾರದ ಆರೋಪ; ಮನೆ ನೆಲಸಮಗೊಳಿಸಿದ ಯುಪಿ ಸರ್ಕಾರ – ಅಫ್ರೀನ್‌ ಫಾತಿಮಾ ಯಾರು?

ಸಂಘಟನೆಯು, ’ಕಾನೂನು ಪ್ರಕ್ರಿಯೆಗಳನ್ನು ಅನುಸರಿಸದೆ ಬೇರೆ ಯಾವುದೇ ಕಟ್ಟಡವನ್ನು ಕೆಡವದಂತೆ ನೋಡಿಕೊಳ್ಳಲು ನ್ಯಾಯಾಲಯವು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಬೇಕು’ ಎಂದು ಅರ್ಜಿಯಲ್ಲಿ ಮನವಿ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರವಾದಿ ಮುಹಮ್ಮದ್ ಕುರಿತು ಇಬ್ಬರು ಬಿಜೆಪಿ ನಾಯಕರ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ ಆರೋಪದ ಮೇಲೆ ಯೋಗಿ ಆದಿತ್ಯನಾಥ್ ಸರ್ಕಾರ ಇತ್ತೀಚೆಗೆ ಹಲವರು ಆಸ್ತಿ ಮೇಲೆ ಬುಲ್ಡೋಜರ್‌ ದಾಳಿ ನಡೆಸಿದೆ.

“ಈ ದಾಳಿಗಳು ಆಘಾತಕಾರಿ ಮತ್ತು ಭಯಾನಕ. ಮನೆಗಳನ್ನು ನೆಲಸಮಗೊಳಿಸಿದ ನಂತರ ನೋಟಿಸ್‌ಗಳನ್ನು ನೀಡಲಾಗಿದೆ. ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ. ಯಾವುದೇ ಕಟ್ಟಡವನ್ನು ನೆಲಸಮ ಮಾಡುವ ಮುನ್ನ ಯುಪಿ ಕಾನೂನಿನ ಪ್ರಕಾರ ಕನಿಷ್ಠ 15 ರಿಂದ 40 ದಿನಗಳ ಸೂಚನೆ ಅತ್ಯಗತ್ಯ” ಎಂದು ಅರ್ಜಿದಾರರ ಪರ ವಕೀಲ ಸಿ.ಯು ಸಿಂ‌ಗ್  ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಯುಪಿ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ, ’ಕಟಟ್ಟಡಗಳನ್ನು ಕೆಡವಲು ಸರ್ಕಾರ ಕಾನೂನಿನ ಸರಿಯಾದ ಮಾರ್ಗಗಳನ್ನು ಅನುಸರಿಸಿದೆ. ಮಾಧ್ಯಮಗಳು ಅನಗತ್ಯವಾಗಿ ರಾಜಕೀಯ ಹೇಳಿಕೆಗಳೊಂದಿಗೆ ಪ್ರಕರಣವನ್ನು ಜೋಡಿಸುತ್ತವೆ” ಎಂದಿದ್ದಾರೆ.

ಅಕ್ರಮ ಬಂಧನ, ಮನೆಗಳ ಮೇಲೆ ಬುಲ್ಡೋಜರ್‌ ದಳಿ ಮತ್ತು ಪೊಲೀಸರ ಹಲ್ಲೆಯ ಆರೋಪಗಳ ಕುರಿತು ಗಮನಿಸುವಂತೆ ಕೆಲವು ಮಾಜಿ ನ್ಯಾಯಾಧೀಶರು ಮತ್ತು ಹಿರಿಯ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರಿಗೆ ಪತ್ರ ಬರೆದಿದ್ದರು. ಇದಾದ ಎರಡು ದಿನಗಳ ನಂತರ ನ್ಯಾಯಮೂರ್ತಿಗಳಾದ ಬೋಪಣ್ಣ ಮತ್ತು ವಿಕ್ರಮ್ ನಾಥ್‌ ಅವರ ರಜಾಕಾಲದ ಪೀಠ ಪ್ರಕರಣವನ್ನು ಕೈಗೆತ್ತಿಕೊಂಡಿದೆ.


ಇದನ್ನೂ ಓದಿ: ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ: ಬುಲ್ಡೋಜರ್‌ಗಳಿಂದ ಮನೆಗಳ ನಾಶಕ್ಕೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿಜವಾಗ್ಲೂ ಮನೆಗಳನ್ನು ಬುಲ್ಡೋಜರ್ ನಿಂದ ಏಕಪಕ್ಷೀಯವಾಗಿ ಕೆಡವಿಹಾಕುವುದು ಅವಿವೇಕತನದ ಪರಮಾವಧಿ. ಕೋರ್ಟು ಛೀಮಾರಿ ಹಾಕಿದ್ದು ನಾಚಿಕೆಗೇಡು…..

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...