Homeಮುಖಪುಟನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

ನೋಟು ಅಮಾನ್ಯೀಕರಣ ಕಾನೂನುಬಾಹಿರವಾಗಿದೆ: ಭಿನ್ನಮತದ ತೀರ್ಪು ಪ್ರಕಟಿಸಿದ ಜಸ್ಟಿಸ್ ನಾಗರತ್ನ

500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ..

- Advertisement -
- Advertisement -

₹ 1,000 ಮತ್ತು ₹ 500 ಮುಖಬೆಲೆಯ ನೋಟುಗಳನ್ನು ನಿಷೇಧಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಲು ಸಾಧ್ಯವಿಲ್ಲ. ಹಾಗಾಗಿ ನೋಟು ಅಮಾನ್ಯೀಕರಣದ ಕುರಿತ ಸರ್ಕಾರದ ಅಧಿಸೂಚನೆಯು ಕಾನೂನುಬಾಹಿರ ಎಂದು ನ್ಯಾಯಮೂರ್ತಿ ಜಸ್ಟಿಸ್ ಬಿ.ವಿ.ನಾಗರತ್ನರವರು ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಭಿನ್ನಮತದ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಸುಪ್ರೀಂ ಕೋರ್ಟ್ 4:1ರ ಬಹುಮತದ ಆಧಾರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಎತ್ತಿಹಿಡಿದಿದೆ. 4 ಜನ ನ್ಯಾಯಾಧೀಶರು ಕೇಂದ್ರ ನಿಲುವನ್ನು ಒಪ್ಪಿದರೆ ಒಬ್ಬರು ನ್ಯಾಯಾಧೀಶರು ಅರ್ಜಿದಾರರ ಪರ ತೀರ್ಪು ನೀಡಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆಯ ಸೆಕ್ಷನ್ 26 ರ ಪ್ರಕಾರ ಆರ್‌ಬಿಐನ ಕೇಂದ್ರೀಯ ಮಂಡಳಿಯು ಸ್ವತಂತ್ರವಾಗಿ ನೋಟು ಅಮಾನ್ಯೀಕರಣವನ್ನು ಶಿಫಾರಸು ಮಾಡಿರಬೇಕು ಮತ್ತು ಅದು ಸರ್ಕಾರದ ಸಲಹೆಯ ಮೂಲಕ ಮಾಡಬಾರದಿತ್ತು. ಆರ್‌ಬಿಐ ಸ್ವತಂತ್ರ ಮನಸಿನಿಂದ ನೋಟು ನಿಷೇಧದ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಜಸ್ಟಿಸ್ ನಾಗರತ್ನರವರು ಒತ್ತಿ ಹೇಳಿದ್ದಾರೆ.

“ಆರ್‌ಬಿಐ ಸಲ್ಲಿಸಿದ ದಾಖಲೆಗಳನ್ನು ನೋಡಿದಾಗ, “ಕೇಂದ್ರ ಸರ್ಕಾರವು ಬಯಸಿದಂತೆ”, ಶಿಫಾರಸು ಪಡೆಯಲಾಗಿದೆ, “ಸರಕಾರವು 500 ಮತ್ತು 1000 ನೋಟುಗಳ ಕಾನೂನುಬದ್ಧ ಟೆಂಡರ್ ಅನ್ನು ಹಿಂಪಡೆಯಲು ಶಿಫಾರಸು ಮಾಡಿದೆ” ಎಂಬ ಪದಗಳು ಮತ್ತು ಪದಗುಚ್ಛಗಳ ಬಳಕೆಯನ್ನು ನಾನು ಗಮನಿಸಿದ್ದೇನೆ. ಇವೆಲ್ಲವೂ ಸ್ವಯಂ ವಿವರಣಾತ್ಮಕವಾಗಿವೆ. ಆರ್‌ಬಿಐ ಸ್ವಂತ ಮನಸ್ಸಿನಿಂದ ಯಾವುದೇ ಸ್ವತಂತ್ರ ಶಿಫಾರಸ್ಸು ಮಾಡಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಇಂತಹ ಗಂಭೀರ ತೀರ್ಮಾನ ತೆಗೆದುಕೊಳ್ಳುವಾಗ ಅದರ ಕುರಿತು ಆಲೋಚಿಸಲು ಸಹ ಆರ್‌ಬಿಐಗೆ ಸಮಯವಿರಲಿಲ್ಲ. 500ರೂ ಮತ್ತು 1000ರೂ ನೋಟುಗಳ ಅಮಾನ್ಯೀಕರಣದ ಸಂಪೂರ್ಣ ಪ್ರಕ್ರಿಯೆಯನ್ನು ಕೇವಲ 24 ಗಂಟೆಗಳಲ್ಲಿ ಮುಗಿಸಲಾಗಿದೆ” ಎಂದು ಅವರು ತಮ್ಮ ತೀರ್ಪಿನಲ್ಲಿ ಬರೆದಿದ್ದಾರೆ.

“ನನ್ನ ಅಭಿಪ್ರಾಯದಲ್ಲಿ 2016 ನವೆಂಬರ್ 8 ರ ಅಧಿಸೂಚನೆಯ ಮೂಲಕ ನೋಟು ಅಮಾನ್ಯೀಕರಣದ ಕ್ರಮವು ಕಾನೂನುಬಾಹಿರವಾಗಿದೆ. ಆದರೆ 2016 ರಲ್ಲಿದ್ದ ಯಥಾಸ್ಥಿತಿಯನ್ನು ಈಗ ಪುನಃಸ್ಥಾಪಿಸಲು ಸಾಧ್ಯವಿಲ್ಲ. ನೋಟು ಅಮಾನ್ಯೀಕರಣವು ಕಾನೂನಿಗೆ ವಿರುದ್ಧವಾದ ಅಧಿಕಾರ ಚಲಾಯಿಸಿ ಜಾರಿಗೊಳಿಸಿರುವುದರಿಂದ ಅದು ಕಾನೂನುಬಾಹಿರ” ಎಂದು ಅವರು ಹೇಳಿದ್ದಾರೆ.

ನೋಟು ಅಮಾನ್ಯೀಕರಣವು ಸದುದ್ದೇಶದಿಂದ ಕೂಡಿತ್ತು ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದು ಉತ್ತಮ ಉದ್ದೇಶದ ಪ್ರಶ್ನೆಯಲ್ಲ. ಇದು ಕಪ್ಪು ಹಣ, ಭಯೋತ್ಪಾದಕ ನಿಧಿಯಂತಹ ದುಷ್ಟಶಕ್ತಿಗಳನ್ನು ಗುರಿಯಾಗಿಸಿದೆ. ಆರ್‌ಬಿಐ ಕಾಯಿದೆಯ ಪ್ರಕಾರ ನೋಟು ಅಮಾನ್ಯೀಕರಣದ ಶಿಫಾರಸು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಂಡಳಿಯಿಂದ ಪ್ರಸ್ತಾಪವಾಗಬೇಕು. ಆದರೆ ಈ ಪ್ರಕರಣದಲ್ಲಿ ಕೇಂದ್ರವು ನವೆಂಬರ್ 7 ರಂದು ಆರ್‌ಬಿಐಗೆ ಪತ್ರ ಬರೆದು ಅಂತಹ ಶಿಫಾರಸಿಗೆ ಸಲಹೆ ನೀಡಿದೆ. ಹಾಗಾಗಿ ಈ ಕ್ರಮವು ಕಾನೂನುಬಾಹಿರವಾಗಿ ಜಾರಿಯಾಗಿದೆ ಎಂದಿದ್ದಾರೆ.

ನಮ್ಮ ದೇಶದ ಸಂಸತ್ತು ನಮ್ಮ ಇಡೀ ಭಾರತವನ್ನು ಪ್ರತಿನಿಧಿಸುತ್ತದೆ. ಪ್ರಜಾಪ್ರಭುತ್ವದ ಕೇಂದ್ರವಾಗಿರುವ ಸಂಸತ್ತು ಇಂತಹ ನಿರ್ಣಾಯಕ ಪ್ರಾಮುಖ್ಯತೆಯ ವಿಷಯದಲ್ಲಿ ದೂರವಿರಲು ಸಾಧ್ಯವಿಲ್ಲ ಎಂದು ಜಸ್ಟೀಸ್ ನಾಗರತ್ನರವರು ಅಭಿಪ್ರಾಯಪಟ್ಟಿದ್ದಾರೆ.

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.

ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೊಂದಿಗೆ ಸಮಾಲೋಚಿಸಿದ ನಂತರವೆ ಕೇಂದ್ರವು ಕ್ರಮ ಕೈಗೊಂಡಿದೆ ಮತ್ತು ಆರು ತಿಂಗಳ ಕಾಲ ಇಬ್ಬರ ನಡುವೆ ಸಮಾಲೋಚನೆ ನಡೆದಿದೆ ಎಂದು ಐವರು ಸದಸ್ಯರ ಪೀಠದ ನಾಲ್ವರು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: 2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...