Homeಮುಖಪುಟದೇಶದಲ್ಲಿ ಡೆಂಗ್ಯೂ ಹೆಚ್ಚಳ: 9 ರಾಜ್ಯಗಳಿಗೆ ತಜ್ಞರ ತಂಡ ಭೇಟಿ

ದೇಶದಲ್ಲಿ ಡೆಂಗ್ಯೂ ಹೆಚ್ಚಳ: 9 ರಾಜ್ಯಗಳಿಗೆ ತಜ್ಞರ ತಂಡ ಭೇಟಿ

- Advertisement -
- Advertisement -

ದೇಶದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣ ಮತ್ತು ನಿರ್ವಹಣೆಗಾಗಿ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಬೆಂಬಲಿಸಲು ಆರೋಗ್ಯ ಸಚಿವಾಲಯ ತಜ್ಞರ ತಂಡಗಳನ್ನು 9 ರಾಜ್ಯಗಳಿಗೆ ಕಳುಹಿಸಿದೆ.

ಹೆಚ್ಚಿನ ಡೆಂಗ್ಯೂ ಪ್ರಕರಣಗಳನ್ನು ವರದಿ ಮಾಡಿರುವ ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ತಜ್ಞರನ್ನು ಕಳುಹಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹರಿಯಾಣ, ಕೇರಳ, ಪಂಜಾಬ್, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ, ದೆಹಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಈ ಪಟ್ಟಿಯಲ್ಲಿ ಸೇರಿವೆ.

ಇದನ್ನೂ ಓದಿ: ನಾಲ್ವರಿಗೆ ಬೆಳಕಾದ ನಟ ಪುನೀತ್‌ ಕಣ್ಣುಗಳು: ರಾಜ್ಯದಲ್ಲಿ ಮೊದಲ ಬಾರಿಗೆ ಹೊಸ ತಂತ್ರ ಬಳಕೆ

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಹೆಚ್ಚಿನ  ಪ್ರಕರಣಗಳನ್ನು ಹೊಂದಿರುವ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಹಾಯವನ್ನು ನೀಡುವಂತೆ ಆರೋಗ್ಯ ಸಚಿವಾಲಯದ ಅಧಿಕಾರಿಗಳಿಗೆ ಸೂಚಿಸಿದ್ದರು.

ಹಿಂದಿನ ವರ್ಷದ ಇದೇ ಅವಧಿಯಲ್ಲಿನ ಪ್ರಕರಣಗಳ ಸಂಖ್ಯೆಗೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಕೆಲವು ರಾಜ್ಯಗಳಲ್ಲಿ ಗಣನೀಯವಾಗಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ. ಈವರೆಗೆ ದೇಶಾದ್ಯಂತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 1,16,991 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

ಪರಿಣಾಮಕಾರಿ ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆಯನ್ನು ಹೆಚ್ಚಿಸಲು ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಹಾಯ ಮಾಡಲು ತಜ್ಞರ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.


ಇದನ್ನೂ ಓದಿ: ದೇಶದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು: 11 ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾದಲ್ಲಿ ಶಂಕಿತ ಮೂವರು ಭಾರತೀಯರ ಬಂಧನ

0
ಸಿಖ್‌ ಪ್ರತ್ಯೇಕತವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಕೆನಡಾದಲ್ಲಿ ಕೆಲ ತಿಂಗಳ ಹಿಂದೆಯೇ ಈ ಶಂಕಿತರನ್ನು ಪೊಲೀಸರು ಗುರುತಿಸಿದ್ದು,...