Homeಮುಖಪುಟಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಜಿ.ಎನ್ ಸಾಯಿಬಾಬಾ ಯುಎಪಿಎಯಂತಹ ಕರಾಳ ಕಾಯ್ದೆಗಳಡಿ ಜೈಲಿನಲ್ಲಿದ್ದಾರೆ. ಆದರೆ ಸಮರ್ಪಕ ಔಷಧಿ, ಪುಸ್ತಕ ಮತ್ತು ಪತ್ರಗಳನ್ನು ನೀಡುವ ಅವರ ಹಕ್ಕುಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನು ಖಂಡಿಸಿ ಅವರು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ ಎಂದು ಅವರ ಪತ್ನಿ ವಸಂತ ಕುಮಾರಿ ತಿಳಿಸಿದ್ದಾರೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಅಪರಾಧಕ್ಕಾಗಿ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿಲ್ಲ.

ಈ ಕುರಿತು ಅವರ ಪತ್ನಿ ವಸಂತ ಕುಮಾರಿಯವರು ಪುಣೆಯ ಎಡಿಜಿಯವರಿಗೆ ಪತ್ರ ಬರೆದಿದ್ದು, ಜೈಲಿನಲ್ಲಿ ಅವರ ಹಕ್ಕುಗಳನ್ನು ದಮನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅವರ ಪ್ರಕಾರ

  • ಹಲವು ಗಂಭೀರ ರೋಗಗಳಿಗೆ ತುತ್ತಾಗಿರುವ ಸಾಯಿಬಾಬಾ ದಿನನಿತ್ಯ ಔಷಧಿ ಸೇವಿಸಬೇಕಾಗಿದೆ. ಅವುಗಳನ್ನು ವಕೀಲರು ಜೈಲಿನ ಅಧಿಕಾರಿಗಳಿಗೆ ನೀಡಿದ್ದರೂ ಸಹ ಅವುಗಳನ್ನು ಸಾಯಿಬಾಬಾ ಅವರಿಗೆ ನೀಡುತ್ತಿಲ್ಲ.
  • ಸಾಯಿಬಾಬರವರಿಗೆ ಕುಟುಂಬ ಸದಸ್ಯರು ಬರೆಯುವ ಪತ್ರಗಳನ್ನು ಜೈಲಿನ ಅಧಿಕಾರಿಗಳು ಕೊಡುತ್ತಿಲ್ಲ. ಅವರಿಗೆ ಪತ್ರಿಕೆಗಳನ್ನು ಸಹ ಒದಗಿಸುತ್ತಿಲ್ಲ.
  • ಜೈಲಿನ ಅಧಿಕಾರಿಗಳು ತಿಂಗಳಿಗೆ ಕೇವಲ ಒಂದೆರೆಡು ಫೋನ್ ಕಾಲ್‌ಗಳಿಗೆ ಮಾತ್ರ ಅವಕಾಶ ಕೊಡುತ್ತಿದ್ದಾರೆ. ಕೊರಾನಾ ಸಾಂಕ್ರಾಮಿಕ ಕಾಲದಲ್ಲಿ ಭೇಟಿಗೆ ಅವಕಾಶವಿಲ್ಲದಿರುವಾಗ, ವಕೀಲರು ಮತ್ತು ಕುಟುಂಬ ಸದಸ್ಯರಿಗೆ ಫೋನ್‌ ನಲ್ಲಿ ಮಾತನಾಡಲು ಸಹ ಅವಕಾಶ ನೀಡುತ್ತಿಲ್ಲ.
  • ಬ್ಯಾನ್ ಆಗದ, ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಪುಸ್ತಕಗಳನ್ನು ಕಳಿಸಿದರೂ ಸಹ ಜೈಲಿನ ಅಧಿಕಾರಿಗಳು ಅದನ್ನು ಸಾಯಿಬಾಬಾರವರಿಗೆ ಕೊಡುತ್ತಿಲ್ಲ. ಇದು ಜೈಲಿನ ನಿಯಮಗಳ ಉಲ್ಲಂಘನೆಯಾಗಿದೆ.

ಈ ಕಿರುಕುಳ ಮತ್ತು ಸಂಕಷ್ಟಗಳ ಹಿನ್ನೆಲೆಯಲ್ಲಿ ನಾಗ್ಪುರ ಜೈಲು ಅಧಿಕಾರಗಳ ‘ಅಮಾನವೀಯ ನಡವಳಿಕೆ ಮತ್ತು ಅನ್ಯಾಯದ ನಿರ್ಬಂಧಗಳನ್ನು’ ಖಂಡಿಸಿ ಪ್ರೊ.ಸಾಯಿಬಾಬಾ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧಿಸಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.

ಕಮಿಟಿ ಫಾರ್ ಡಿಫೆಂಡ್ ಅಂಡ್ ರಿಲೀಸ್ ಜಿ. ಎನ್. ಸಾಯಿಬಾಬಾ ಸಹ ನಾಗ್ಪುರ ಎಡಿಜಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಸಾಯಿಬಾಬಾರವರ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿದೆ. “ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ. ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ” ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.


ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...