Homeಕರ್ನಾಟಕಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಣೆ: ಸಮರ್ಥಿಸಿಕೊಂಡ ಪ್ರಹ್ಲಾದ್ ಜೋಶಿ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಣೆ: ಸಮರ್ಥಿಸಿಕೊಂಡ ಪ್ರಹ್ಲಾದ್ ಜೋಶಿ

- Advertisement -
- Advertisement -

ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಣೆ ಹಿನ್ನಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ವಿರೋಧ ಪಕ್ಷಗಳು ಮತ್ತು ಕನ್ನಡ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.

“ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ. ಕರ್ನಾಟಕದ ಸ್ತಬ್ಧಚಿತ್ರವನ್ನು ತಿರಸ್ಕರಿಸಿರುವುದು ಬಿಜೆಪಿ ನಮ್ಮ ರಾಜ್ಯದ ಹೆಮ್ಮೆಯನ್ನು ಎತ್ತಿಹಿಡಿಯುವ ಬಗ್ಗೆ ಎಷ್ಟು ಗಂಭೀರವಾಗಿದೆ ಎಂಬುದನ್ನು ಪ್ರತಿಬಿಂಬಿಸುತ್ತದೆ” ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕನ್ನಡಿಗರೆಲ್ಲರೂ ಇದನ್ನು ಒಕ್ಕೊರಲಿನಿಂದ ಖಂಡಿಸಬೇಕು. ಸತತ ಹದಿಮೂರು ವರ್ಷಗಳ ಕಾಲ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ಥಬ್ದ ಚಿತ್ರಗಳು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಪ್ರಕೃತಿಯ ಹಿರಿಮೆಗಳನ್ನು ಪ್ರದರ್ಶಿಸಿ ಇಡೀ ದೇಶದ ಶ್ಲಾಘನೆಗೆ ಪಾತ್ರವಾಗಿದೆ. ಇದೇ ಮೊದಲ ಬಾರಿ ಬಿಜೆಪಿ ಈ ಗೌರವಕ್ಕೆ ಧಕ್ಕೆ ತಂದಿದೆ” ಎಂದು ಅವರು ಹೇಳಿದ್ದಾರೆ.

“ಕೇಂದ್ರ ಸರ್ಕಾರದ ಎದುರು ಮಾಂಡಲೀಕರಂತೆ ವರ್ತಿಸುತ್ತಿರುವ ಕರ್ನಾಟಕದ ಬಿಜೆಪಿ ನಾಯಕರು ರಾಜ್ಯದ ಘನತೆ-ಗೌರವಗಳನ್ನು ದೆಹಲಿ ನಾಯಕರಿಗೆ ಅಡ ಇಟ್ಟಿರುವುದು ದುರದೃಷ್ಟಕರ. ಮಾತು ಮಾತಿಗೆ ಡಬಲ್ ಎಂಜಿನ್ ಸರ್ಕಾರ ಎಂದು ರಾಜ್ಯದ ಬಿಜೆಪಿ‌ ನಾಯಕರು ಎದೆ ಬಡಿದುಕೊಳ್ಳುತ್ತಿದ್ದಾರೆ. ರಾಜ್ಯದ ಹಕ್ಕು ಮತ್ತು ಗೌರವದ ಪ್ರಶ್ನೆ ಎದುರಾದಾಗ ಮಾತ್ರ ಕರ್ನಾಟಕದ ಎಂಜಿನ್ ಗುಜರಿ ಆಗುತ್ತದೆ” ಎಂದು ಅವರು ಹೇಳಿದ್ದಾರೆ.

ಕಳೆದ ಎಂಟು ವರ್ಷಗಳಿಂದ ಕೈಬಿಟ್ಟಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಕ್ಷಣಾ ಸಚಿವಾಲಯ ಅವಕಾಶ ನೀಡಲು ಬಯಸಿದ್ದರಿಂದ ಈ ಬಾರಿ ಕರ್ನಾಟಕಕ್ಕೆ ಅವಕಾಶ ನೀಡಿಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರದ ಕ್ರಮವನ್ನು ಸಮರ್ಥಿಸಿಕೊಂಡಿದೆ.

ಏತನ್ಮಧ್ಯೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಕೂಡಾ ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದು, ತಜ್ಞರು ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ.

ಕಳೆದ ವರ್ಷ ಕೇರಳ ಸರ್ಕಾರವು ನಾರಾಯಣ ಗುರು ಅವರ ಬಗ್ಗೆಗಿನ ಸ್ತಬ್ಧಚಿತ್ರವನ್ನು ನಿರ್ಮಾಣ ಮಾಡಿಕೊಂಡಿತ್ತು. ಆದರೆ ಕೇಂದ್ರ ಸರ್ಕಾರ ಕೇರಳಕ್ಕೆ ಅವಕಾಶ ನೀಡದ ಕಾರಣ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಕರಾವಳಿಯ ಬಿಲ್ಲವ ಸಂಘಟನೆಗಳು ಇದನ್ನು ವಿರೋಧಿಸಿ ನಾರಾಯಣ ಗುರುಗಳ ಟ್ಯಾಬ್ಲೋ ರ್‍ಯಾಲಿ ನಡೆಸಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಅದೇನು ಘನಂದಾರಿ ಮಾನದಂಡ ಅದನ್ನ ಸಾರ್ವಜನಿಕರ ಗಮನಕ್ಕೆ ತರೋದಿಕ್ಕೆ ನಿಮಗೇನು ದಾಡಿ? ಇವನು ಒಬ್ಬ ಕರ್ನಾಟಕದ ಕೇಂದ್ರ ಮಂತ್ರಿ ನೋ ಅಥವಾ ಗುಲಾಮನೋ?

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...