Homeದಲಿತ್ ಫೈಲ್ಸ್ನವವಿವಾಹಿತ ದಲಿತ ದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಣೆ; ಅರ್ಚಕನ ಬಂಧನ

ನವವಿವಾಹಿತ ದಲಿತ ದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಣೆ; ಅರ್ಚಕನ ಬಂಧನ

- Advertisement -
- Advertisement -

ರಾಜಸ್ಥಾನದ ಜಲೋರ್‌‌ ಜಿಲ್ಲೆಯ ದೇವಸ್ಥಾನವೊಂದರಲ್ಲಿ ನವವಿವಾಹಿತ ದಲಿತ ದಂಪತಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡದ ಆರೋಪದ ಮೇಲೆ ಪೊಲೀಸರು ಅರ್ಚಕನನ್ನು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಅಹೋರ್ ಉಪವಿಭಾಗದ ನೀಲಕಂಠ ಗ್ರಾಮದ ದೇವಸ್ಥಾನದ ಗೇಟ್‌ನಲ್ಲಿ ಆರೋಪಿ ವೇಲಾ ಭಾರತಿ ದಂಪತಿಗಳನ್ನು ನಿಲ್ಲಿಸುತ್ತಿರುವ ಘಟನೆಯ ವೀಡಿಯೊ ಶನಿವಾರದಂದು ವೈರಲ್ ಆಗಿತ್ತು. ಜೊತೆಗೆ ನಂತರ ನಡೆದ ವಾಗ್ವಾದವನ್ನೂ ವಿಡಿಯೋ ಸೆರೆ ಹಿಡಿದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯಿಂದ ನೊಂದ ಸಂತ್ರಸ್ತ ಕುಟುಂಬಸ್ಥರು ಪೊಲೀಸರನ್ನು ಸಂಪರ್ಕಿಸಿ, ಅರ್ಚಕನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅರ್ಚಕನ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ ಎಂದು ಜಲೋರ್ ಪೊಲೀಸ್ ವರಿಷ್ಠಾಧಿಕಾರಿ ಹರ್ಷವರ್ಧನ್ ಅಗರ್‌ವಾಲಾ ಭಾನುವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

“ಮದುವೆಯ ಮೆರವಣಿಗೆ ಶನಿವಾರ ನೀಲಕಂಠ ಗ್ರಾಮಕ್ಕೆ ತಲುಪಿತ್ತು. ನವವಿವಾಹಿತ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನದಲ್ಲಿ ತೆಂಗಿನಕಾಯಿಯನ್ನು ಅರ್ಪಿಸಲು ಬಯಸಿದ್ದರು. ಆದರೆ ಅರ್ಚಕರು ನಮ್ಮನ್ನು ಗೇಟ್‌ನಲ್ಲಿ ನಿಲ್ಲಿಸಿ ತೆಂಗಿನಕಾಯಿಯನ್ನು ಹೊರಗೆ ನೀಡುವಂತೆ ಹೇಳಿದರು. ನಾವು ದಲಿತ ಸಮುದಾಯದವರಾಗಿರುವುದರಿಂದ ದೇವಸ್ಥಾನಕ್ಕೆ ಪ್ರವೇಶಿಸಬೇಡಿ ಎಂದು ಅವರು ಹೇಳಿದ್ದಾರೆ” ಎಂದು ವಧುವಿನ ಸೋದರ ಸಂಬಂಧಿ ತಾರಾ ರಾಮ್ ದೂರು ನೀಡಿದ್ದಾರೆ.

ಕೆಲವು ಗ್ರಾಮಸ್ಥರು ಕೂಡಾ ಅರ್ಚಕನ ವಾದಕ್ಕೆ ದನಿಗೂಡಿಸಿ, ಆರೋಪಿಯನ್ನು ಬೆಂಬಲಿಸಿದ್ದಾರೆ ಎಂದು ದೂರಲಾಗಿದ್ದು, “ಇದು ಗ್ರಾಮದ ನಿರ್ಧಾರ ಮತ್ತು ಅರ್ಚಕನೊಂದಿಗೆ ವಾದ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಅವರು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ದಲಿತ ಇತಿಹಾಸ ತಿಂಗಳು; ಅಂಬೇಡ್ಕರ್ ಮತ್ತು ದಲಿತರ ಬಗ್ಗೆ ಮಿತಿಮೀರಿದ ಅಸಹನೆ; ಸಂವಿಧಾನವೇ ಉತ್ತರ

“ನಾವು ಅರ್ಚಕನ ಬಳಿ ಸಾಕಷ್ಟು ಮನವಿ ಮಾಡಿಕೊಂಡೆವು. ಆದರೆ ಅವರು ನಮಗೆ ಅವಕಾಶ ನೀಡಲಿಲ್ಲ. ನಂತರ ನಾವು ಅರ್ಚಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇವೆ” ಎಂದು ತಾರಾ ರಾಮ್ ಹೇಳಿದ್ದಾರೆ ಎಂದು ಎನ್‌ಡಿಟವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...