Homeಕರ್ನಾಟಕಮೂರು ತಿಂಗಳಾದರೂ ಹೊರಬೀಳದ 'ಡಿನೋಟಿಫಿಕೇಶನ್' ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ಮೂರು ತಿಂಗಳಾದರೂ ಹೊರಬೀಳದ ‘ಡಿನೋಟಿಫಿಕೇಶನ್’ ಆದೇಶ; ಚನ್ನರಾಯಪಟ್ಟಣ ರೈತರಿಂದ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿ ಮೂರು ತಿಂಗಳಾದರೂ ಚನ್ನರಾಯಪಟ್ಟಣ ಭೂಸ್ವಾಧೀನ ರದ್ದುಪಡಿಸುವ ಅಧಿಕೃತ ‘ಡಿನೋಟಿಫಿಕೇಶನ್’ ಆದೇಶವನ್ನು ಸರ್ಕಾರ ಹೊರಡಿಸದಿರುವ ಕಾರಣ, ಭೂಸ್ವಾಧೀನ ವಿರೋಧಿ ಹೋರಾಟದ ರೈತರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ಅಧಿಕೃತ ಆದೇಶ ಹೊರಡಿಸದಿರುವ ಕಾರಣ ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ ಎಂದು ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ ತಿಳಿಸಿದೆ.

ಘೋಷಣೆಯಾದರೂ ಮೌಖಿಕ ಆದೇಶಕ್ಕೆ ಸಿಗದ ಅಧಿಕೃತ ಮುದ್ರೆ

ಚನ್ನರಾಯಪಟ್ಟಣದ ರೈತರು, ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ನಡೆಸಿದ ತೀವ್ರ ಸಂಘರ್ಷಮಯ ಹೋರಾಟದ ಫಲವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜುಲೈ 15ರಂದು ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವುದಾಗಿ ಸ್ಪಷ್ಟವಾಗಿ ಘೋಷಿಸಿದ್ದರು. ಸರ್ಕಾರದ ಈ ತೀರ್ಮಾನ ದೇಶವ್ಯಾಪಿ ಸುದ್ದಿಯಾಗಿತ್ತು, ಸರ್ಕಾರವು ಕೂಡಾ ಇದನ್ನು ರೈತಪರ ನಿಲುವು ಎಂದು ವ್ಯಾಪಕವಾಗಿ ಪ್ರಚಾರ ಮಾಡಿತ್ತು. ಆದರೆ, ಘೋಷಣೆ ಹೊರಬಿದ್ದು ತಿಂಗಳುಗಳೇ ಕಳೆದರೂ, ಸರ್ಕಾರದ ಮೌಖಿಕ ಆದೇಶವು ಡಿನೋಟಿಫಿಕೇಶನ್ ರೂಪದಲ್ಲಿ ಅಧಿಕೃತವಾಗಿ ಹೊರಬಂದಿಲ್ಲ.

ಆತಂಕಕ್ಕೆ ಕಾರಣವಾದ ಸಭೆಯ ಹುನ್ನಾರ

ಈ ಮಧ್ಯೆ, ಸರ್ಕಾರದ ಘೋಷಣೆಗೆ ವ್ಯತಿರಿಕ್ತವಾಗಿ, ಎರಡು ಹಳ್ಳಿಗಳಿಗೆ ಬೆಲೆ ನಿಗದಿ ಸಭೆ ನಡೆಸುವ ಹುನ್ನಾರಗಳು ನಡೆದಿದ್ದವು. ರೈತರ ತೀವ್ರ ಪ್ರತಿರೋಧದ ನಂತರ ಈ ಸಭೆಯನ್ನು ಮುಂದೂಡಲಾಗಿದೆ. “ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿದರೆ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಭಯದಲ್ಲೇ ರೈತರು ಬದುಕುವಂತಾಗಿದೆ” ಎಂದು ಹೋರಾಟಗಾರರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಒಂದು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ರೈತರ ಆತಂಕವನ್ನು ಹೆಚ್ಚಿಸಿದೆ.

ಹೋರಾಟ ತೀವ್ರಗೊಳಿಸಲು ರೈತರ ಸಿದ್ಧತೆ

ಡಿನೋಟಿಫಿಕೇಶನ್ ಆದೇಶದ ವಿಳಂಬದಿಂದ ರೋಸಿಹೋಗಿರುವ ರೈತರು, ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಯೋಜನೆಯೊಂದಿಗೆ ಹೆಜ್ಜೆ ಇಟ್ಟಿದ್ದಾರೆ. ತಮ್ಮ ತಮ್ಮ ಊರುಗಳಲ್ಲಿ ಸಭೆಗಳನ್ನು ಕರೆಯುವ ಮೂಲಕ ಸಂಘಟನೆಯನ್ನು ಗಟ್ಟಿಗೊಳಿಸಿಕೊಂಡು ಹೋರಾಟವನ್ನು ಚುರುಕುಗೊಳಿಸಲು ಮುಂದಾಗಿದ್ದಾರೆ.

ಈ ಮಧ್ಯೆ, ಮಾನ್ಯ ಕೈಗಾರಿಕಾ ಸಚಿವರು ಅ.17 ರಂದು ಬ್ರಿಗೇಡ್ ಪೌಂಡೇಶನ್ ಸಹಯೋಗದಲ್ಲಿ ಲಕ್ಷ ಗಿಡಗಳ ನೆಡುವ ಕಾರ್ಯಕ್ರಮಕ್ಕಾಗಿ ಹರಳೂರು ಬಳಿಯ ಏರೋಸ್ಪೇಸ್ ಡಿಫೆನ್ಸ್ ಪಾರ್ಕ್‌ಗೆ ಭೇಟಿ ನೀಡುತ್ತಿದ್ದಾರೆ. “ಇಲ್ಲಿ ಶತಮಾನಗಳಿಂದ ಲಕ್ಷಾಂತರ ಗಿಡಮರಗಳನ್ನು ನೆಟ್ಟು ಪೋಷಿಸುತ್ತಿರುವ ರೈತರು ಆತಂಕದಲ್ಲಿದ್ದಾರೆ. ಇದು ವೈರುಧ್ಯವೇ ಸರಿ” ಎಂದು ರೈತ ಹೋರಾಟ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಸಚಿವರ ಭೇಟಿಯ ಹಿನ್ನೆಲೆಯಲ್ಲಿ, ‘ಸಚಿವರು ಈ ರೈತರಿಗೆ ಸರ್ಕಾರ ಆದೇಶದಂತೆ ಈ ತಿಂಗಳಿನೊಳಗೆ ಡಿನೋಟಿಫಿಕೇಶನ್ ಮಾಡುವ ಖಚಿತ ಬರವಸೆ ನೀಡಿ ಅದನ್ನು ಕಾರ್ಯರೂಪಕ್ಕೆ ತರಬೇಕು’ ಎಂದು ಸಮಿತಿಯು ಬಲವಾಗಿ ಒತ್ತಾಯಿಸಿದೆ. ಅಧಿಕೃತ ಆದೇಶ ಹೊರಬೀಳುವವರೆಗೆ ರೈತರ ಆತಂಕ ನಿವಾರಣೆಯಾಗುವುದು ಕಷ್ಟ.

ರೈತರ ಸಮಸ್ಯೆ ಬಗೆಹರಿಸುವುದು ಉಸ್ತುವಾರಿ ಸಚಿವರ ಜವಾಬ್ದಾರಿ

ನಮ್ಮ ಉಸ್ತುವಾರಿ ಸಚಿವರಾದ ಕೆ. ಎಚ್. ಮುನಿಯಪ್ಪನವರು ಕೂಡ ಅಂದಿನ ಸಭೆಯಲ್ಲಿ ಸರ್ಕಾರದ ಪರವಾಗಿ ಹಾಜರಿದ್ದು, ಭೂಸ್ವಾಧೀನ ರದ್ದತಿ ಆದೇಶಕ್ಕೆ ಸಾಕ್ಷಿಯಾಗಿದ್ದರು. ಮೂರು ತಿಂಗಳಾದರೂ ಸರ್ಕಾರದ ಆದೇಶ ಜಾರಿಯಾಗದಿರುವುದನ್ನು ಅವರು ಸೂಕ್ಷ್ಮವಾಗಿ ಪರಿಗಣಿಸಬೇಕು. ಅಲ್ಲದೆ, ನಮ್ಮ ರೈತರ ಹಿತ ಕಾಯುವುದು ಮತ್ತು ಸಮಸ್ಯೆ ಬಗೆಹರಿಸುವುದು ಕೂಡ ಉಸ್ತುವಾರಿ ಸಚಿವರ ಜವಾಬ್ದಾರಿಯಾಗಿದ್ದು, ಅವರು ಅದರಂತೆ ಡಿನೋಟಿಫಿಕೇಶನ್ (ಭೂಸ್ವಾಧೀನ ರದ್ದತಿ) ಆದೇಶ ಹೊರಡಿಸಲು ಕ್ರಮವಹಿಸಬೇಕೆಂದು ಸಮಿತಿ ಒತ್ತಾಯಿಸುತ್ತದೆ.

ಪತ್ರಿಕಾಗೋಷ್ಠಿಯಲ್ಲಿ, ಪ್ರಭಾ ಬೆಳವಂಗಲ, ಕಾರಳ್ಳಿ‌ ಶ್ರೀನಿವಾಸ್, ಜಯರಾಮೇಗೌಡ, ಮಾರೇಗೌಡ, ನಲ್ಲಪ್ಪನಹಳ್ಳಿ ನಂಜಪ್ಪ, ಚೀಮಾಚನಹಳ್ಳಿ ರಮೇಶ್‌, ಅಶ್ವತ್ತಪ್ಪ, ಜಯರಾಮೇಗೌಡ, ಸುಬ್ರಮಣಿ, ಕೃಷ್ಣಪ್ಪ, ವೆಂಕಟಮ್ಮ, ಪಿಳಪ್ಪ, ವೆಂಕಟೇಶ್, ಗೋಪಾಲಗೌಡ, ಮಂಜುನಾಥ್, ಗೋಪಿನಾಥ್, ಗೋಪಾಲಪ್ಪ, ವೆಂಕಟೇಶ್, ಅಶ್ವತ್ತಪ್ಪ, ಪ್ರಮೋದ್ ಭಾಗವಹಿಸಿದ್ದರು.

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...