Homeಮುಖಪುಟಭಾರತೀಯರ ಗಡಿಪಾರು | ಟ್ರಂಪ್ ಮಾಡಿದ್ದರಲ್ಲಿ ತಪ್ಪಿಲ್ಲ ಎಂದ ಬಿಜೆಪಿ ಸಚಿವ!

ಭಾರತೀಯರ ಗಡಿಪಾರು | ಟ್ರಂಪ್ ಮಾಡಿದ್ದರಲ್ಲಿ ತಪ್ಪಿಲ್ಲ ಎಂದ ಬಿಜೆಪಿ ಸಚಿವ!

- Advertisement -
- Advertisement -

ಅಕ್ರಮ ವಲಸಿಗರನ್ನು ಗಡೀಪಾರು ಮಾಡುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯಾವುದೇ ತಪ್ಪು ಮಾಡಿಲ್ಲ ಎಂದು ಬಿಜೆಪಿ ಆಡಳಿತದ ಹರ್ಯಾಣ ಸಚಿವ ಅನಿಲ್ ವಿಜ್ ಗುರುವಾರ ಹೇಳಿದ್ದಾರೆ. ದೇಶವೊಂದು ತನ್ನ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸುವವರನ್ನು ಹೊರಹಾಕುವ ಎಲ್ಲಾ ಹಕ್ಕನ್ನು ಹೊಂದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಭಾರತೀಯರ ಗಡಿಪಾರು

ತಮ್ಮ ಸರ್ಕಾರವು ಅಕ್ರಮ ವಲಸಿಗರ ಗಡಿಪಾಡು ಮಾಡುತ್ತದೆ ಎಂದು ಕಳೆದ ತಿಂಗಳು ಪ್ರಮಾಣವಚನ ಸ್ವೀಕರಿಸುವಾಗ ಅಮೆರಿಕ ಅಧ್ಯಕ್ಷ ಟ್ರಂಪ್ ನಿರ್ಧಾರ ಘೋಷಿಸಿದ್ದರು. ವಲಸಿಗರ ವಿರುದ್ಧದ ಅವರ ಕಠಿಣ ಕ್ರಮದ ಭಾಗವಾಗಿ ಅಮೆರಿಕದಲ್ಲಿ ಇರುವ ಭಾರತೀಯ ಅಕ್ರಮ ವಲಸೆಗಾರರ ಮೊದಲ ಬ್ಯಾಚ್ ಪಂಜಾಬ್‌ಗೆ ಬಂದಿಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ ಅಮೆರಿಕದ ಮಿಲಿಟರಿ ವಿಮಾನದಲ್ಲಿ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸುಮಾರು 104 ಅಕ್ರಮ ಭಾರತೀಯ ವಲಸಿಗರನ್ನು ಗಡೀಪಾರಿನ ನಂತರ ಸಚಿವ ಅನಿಲ್ ವಿಜ್‌ ಈ ಹೇಳಿಕೆ ನೀಡಿದ್ದಾರೆ.

“ವ್ಯಕ್ತಿಯೊಬ್ಬ ಅಕ್ರಮವಾಗಿ ಬೇರೆ ದೇಶಕ್ಕೆ ಹೋದರೆ, ಆ ರಾಷ್ಟ್ರವು ಅವರನ್ನು ಹೊರಹಾಕುವ ಎಲ್ಲ ಹಕ್ಕನ್ನು ಹೊಂದಿದೆ. ಈ ವಿಚಾರದಲ್ಲಿ ಟ್ರಂಪ್ ಯಾವುದೇ ತಪ್ಪು ಮಾಡಿಲ್ಲ” ಎಂದು ವಿಜ್ ಹೇಳಿದ್ದಾರೆ. ಪಂಜಾಬ್‌ನ ಎನ್‌ಆರ್‌ಐ ವ್ಯವಹಾರಗಳ ಸಚಿವ ಕುಲದೀಪ್ ಸಿಂಗ್ ಧಲಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಗಡೀಪಾರು ಕುರಿತು ಅಮೆರಿಕ ಅಧ್ಯಕ್ಷರೊಂದಿಗೆ ಮಾತನಾಡಲು ಮಾಡಿದ ಮನವಿಗೆ ಪ್ರತಿಕ್ರಿಯೆಯಾಗಿ ಅವರು ಈ ಹೇಳಿಕೆ ನೀಡಿದ್ದಾರೆ. ಭಾರತೀಯರ ಗಡಿಪಾರು

“ಇದರಿಂದ ಒಂದು ನಿದರ್ಶನ ಪಡೆದುಕೊಳ್ಳಿ ಎಂದು ನಾನು ಸಲಹೆ ನೀಡುತ್ತೇನೆ. ಈ ದೇಶದಲ್ಲಿ ಲಕ್ಷಾಂತರ ಜನರು ಅಕ್ರಮವಾಗಿ ಇದ್ದಾರೆ… ಅವರು ಬೇರೆಡೆ ಜನಿಸಿದವರು, ಆದರೆ ನಾವು ಅವರಿಗೆ ಆಹಾರವನ್ನು ನೀಡುತ್ತಿದ್ದೇವೆ. ಅವರನ್ನು ಅವರವರ ದೇಶಗಳಿಗೆ ಹಿಂತಿರುಗಿಸಬೇಕು” ಎಂದು ಅವರು ಹೇಳಿದ್ದಾರೆ.

ಬುಧವಾರ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿದ 104 ಭಾರತೀಯ ಅಕ್ರಮ ವಲಸೆಗಾರರಲ್ಲಿ ತಲಾ 33 ಜನರು ಹರಿಯಾಣ ಮತ್ತು ಗುಜರಾತ್‌ನವರಾಗಿದ್ದು, 30 ಜನರು ಪಂಜಾಬ್‌ನವರು. ತಲಾ ಮೂವರು ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದವರು ಮತ್ತು ಇಬ್ಬರು ಚಂಡೀಗಢದವರು.

ಬುಧವಾರದಂದು ಪಂಜಾಬ್ ಸಚಿವ ಧಲಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಪ್ರವೇಶವನ್ನು ಕೋರಿದ್ದು, ಭಾರತೀಯರ ಗಡೀಪಾರು ಕುರಿತು ತಮ್ಮ “ಸ್ನೇಹಿತ” ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂಓದಿ:  ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...