Homeಮುಖಪುಟಸಂಸತ್‌ನಲ್ಲಿ ಗಡಿಪಾರು ಗದ್ದಲ : ಉಭಯ ಸದನಗಳ ಕಲಾಪ ಮುಂದೂಡಿಕೆ

ಸಂಸತ್‌ನಲ್ಲಿ ಗಡಿಪಾರು ಗದ್ದಲ : ಉಭಯ ಸದನಗಳ ಕಲಾಪ ಮುಂದೂಡಿಕೆ

- Advertisement -
- Advertisement -

ಅಮೆರಿಕದಿಂದ ಭಾರತೀಯ ವಲಸಿಗರನ್ನು ಗಡಿಪಾರು ಮಾಡಿರುವ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಸದಸ್ಯರು ಪಟ್ಟು ಹಿಡಿದ ಕಾರಣ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿಕೆ ಮಾಡಲಾಗಿದೆ.

ಇಂದು (ಫೆ.6) ಬೆಳಿಗ್ಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು, ವಿಶೇಷವಾಗಿ ಕಾಂಗ್ರೆಸ್ ಸದಸ್ಯರು ಗಡಿಪಾರು ವಿಷಯವನ್ನು ಪ್ರಸ್ತಾಪಿಸಿ ಚರ್ಚೆಗೆ ಅಗ್ರಹಿಸಿದರು. ಸರ್ಕಾರದ ವಿರುದ್ದ ಪ್ರತಿಭಟನೆ ವ್ಯಕ್ತಪಡಿಸಿದರು.

ಸರ್ಕಾರವು ಅವರ ಕಳವಳಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳುವ ಮೂಲಕ ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.

“ಇದು ವಿದೇಶಾಂಗ ನೀತಿಯ ವಿಷಯ. ವಿದೇಶಕ್ಕೂ ತನ್ನದೇ ಆದ ನಿಯಮಗಳು ಮತ್ತು ನಿಬಂಧನೆಗಳಿವೆ. ನೀವು ಮಧ್ಯಾಹ್ನ ನಿಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಬಹುದು. ಪ್ರಶ್ನೋತ್ತರ ಅವಧಿಯನ್ನು ಸುಗಮವಾಗಿ ನಡೆಸಲು ಅವಕಾಶ ನೀಡಬೇಕು” ಎಂದು ಸ್ಪೀಕರ್ ಮನವಿ ಮಾಡಿದರು.

ಆದರೆ, ಪ್ರತಿಭಟನಾ ನಿರತ ಸದಸ್ಯರು ಸ್ಪೀಕರ್ ಮನವಿಯನ್ನು ನಿರ್ಲಕ್ಷಿಸಿ ಪ್ರತಿಭಟನೆ ಮುಂದುವರೆಸಿದರು. ನಂತರ ಸ್ಪೀಕರ್ ಬಿರ್ಲಾ ಅವರು ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ನಂತರ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ರಾಜ್ಯಸಭೆಯ ವಿರೋಧ ಪಕ್ಷದ ಸದಸ್ಯರು ನಿಯಮ 267 ರ ಅಡಿಯಲ್ಲಿ ನೋಟಿಸ್‌ಗಳನ್ನು ನೀಡಿದರು. ಪಟ್ಟಿ ಮಾಡಲಾದ ದಿನದ ವ್ಯವಹಾರಗಳನ್ನು ಬದಿಗಿಟ್ಟು ಗಡಿಪಾರು ವಿಷಯವನ್ನು ಚರ್ಚೆಗೆ ಎತ್ತಿಕೊಳ್ಳುವಂತೆ ಆಗ್ರಹಿಸಿದರು. ಆದರೆ, ಸಭಾಧ್ಯಕ್ಷ ಮನವಿಯನ್ನು ತಿರಸ್ಕರಿಸಿದರು. ನಂತರ, ಸದಸ್ಯರು ತಮ್ಮ ಸ್ಥಳಗಳಲ್ಲಿ ನಿಂತು ವಿಷಯವನ್ನು ಪ್ರಸ್ತಾಪಿಸಿದರು.

ಅಮೆರಿಕವು ಭಾರತೀಯ ವಲಸಿಗರನ್ನು ಮಿಲಿಟರಿ ವಿಮಾನದಲ್ಲಿ ಅತ್ಯಂತ ಅಮಾನವೀಯ ರೀತಿಯಲ್ಲಿ ಗಡಿಪಾರು ಮಾಡಿದೆ. ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಸಂಸದರು ಆಕ್ರೋಶ ವ್ಯಕ್ತಪಡಿಸಿದರು.

ಸಭಾಧ್ಯಕ್ಷರ ಪೀಠದಲ್ಲಿದ್ದ ಉಪ ಸಭಾಧ್ಯಕ್ಷ ಹರಿವಂಶ್ ಅವರು ವಿರೋಧ ಪಕ್ಷದ ಸಂಸದರ ಹೇಳಿಕೆಗಳನ್ನು ದಾಖಲಿಸಬಾರದು ಎಂದು ಮೊದಲು ಆದೇಶಿಸಿದರು. ಸಂಸದರು ಚರ್ಚೆಗೆ ಪಟ್ಟು ಹಿಡಿದಾಗ ಮಧ್ಯಾಹ್ನ 12 ಗಂಟೆಯವರೆಗೆ ಕಲಾಪವನ್ನು ಮುಂದೂಡಿದರು.

104 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನವು ಬುಧವಾರ ಪಂಜಾಬ್‌ನ ಅಮೃತಸರಕ್ಕೆ ಬಂದಿಳಿದಿದೆ. ಅಕ್ರಮ ವಲಸಿಗರ ವಿರುದ್ಧದ ಕ್ರಮದ ಭಾಗವಾಗಿ ಡೊನಾಲ್ಡ್ ಟ್ರಂಪ್ ಸರ್ಕಾರವು ಗಡಿಪಾರು ಮಾಡಿದ ಭಾರತೀಯರ ಮೊದಲ ಬ್ಯಾಚ್ ಇದಾಗಿದೆ.

ಮೊದಲ ಬ್ಯಾಚ್‌ನಲ್ಲಿ ತಲಾ 33 ಜನರು ಹರಿಯಾಣ ಮತ್ತು ಗುಜರಾತ್‌ನವರು, 30 ಜನರು ಪಂಜಾಬ್‌ನವರು, ತಲಾ ಮೂವರು ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದವರು ಮತ್ತು ಇಬ್ಬರು ಚಂಡೀಗಢದವರು ಇದ್ದರು.

“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...