Homeಕರ್ನಾಟಕಫೇಸ್‌ಬುಕ್‌ನಲ್ಲಿ ಅಂಬೇಡ್ಕರ್‌ ಅವಹೇಳನ: ಕಠಿಣ ಕ್ರಮಕ್ಕೆ ದಲಿತ ಸೇನೆ ಮಹಿಳಾ ಘಟಕ ಆಗ್ರಹ: ಪೊಲೀಸ್ ಮಹಾ...

ಫೇಸ್‌ಬುಕ್‌ನಲ್ಲಿ ಅಂಬೇಡ್ಕರ್‌ ಅವಹೇಳನ: ಕಠಿಣ ಕ್ರಮಕ್ಕೆ ದಲಿತ ಸೇನೆ ಮಹಿಳಾ ಘಟಕ ಆಗ್ರಹ: ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಕೆ 

- Advertisement -
- Advertisement -

ಬೆಂಗಳೂರು: ಫೇಸ್‌ಬುಕ್‌ನಲ್ಲಿ 15ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ಸೃಷ್ಟಿಸಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಬರಹಗಳನ್ನು ಪೋಸ್ಟ್ ಮಾಡುತ್ತಾ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಸಮಾಜದಲ್ಲಿ ದ್ವೇಷ ಮತ್ತು ಗಲಭೆ ಹುಟ್ಟುಹಾಕುವ ಪ್ರಯತ್ನ ನಡೆಸುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸೇನೆ ಮಹಿಳಾ ಘಟಕದ ವತಿಯಿಂದ ಜನವರಿ 22ರಂದು ಪೊಲೀಸ್ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ, ‘ತಪ್ಪು ಮಾಡುವವರ ಅಪ್ಪ ನಾನೆ’, ‘ಗುಲಾಮರ ದೊಡ್ಡಪ್ಪ’, ‘ದಾಸ್ ಮಂಜುನಾಥ್ (ಕ್ರಿಸ್ಟೋಫರ್ ಚಕ್ರವರ್ತಿ)’ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ನಕಲಿ ಖಾತೆಗಳ ಮೂಲಕ ಕೆಟ್ಟ ಪದಗಳ ಬಳಕೆ, ಅವಹೇಳನಕಾರಿ ಬರಹಗಳು ಹಾಗೂ ಪ್ರಚೋದನಕಾರಿ ವಿಡಿಯೋಗಳನ್ನು ಅಪ್‌ಲೋಡ್ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಪ್ರಯತ್ನಿಸಲಾಗುತ್ತಿದೆ. ಇಂತಹ ಕೃತ್ಯಗಳು ಸಂವಿಧಾನ ವಿರೋಧಿ ಹಾಗೂ ಸಮಾಜದ ಶಾಂತಿಗೆ ಭಾರೀ ಧಕ್ಕೆ ಉಂಟುಮಾಡುವಂತಹವುಗಳಾಗಿದ್ದು, ಸದರಿ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸೇನೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪವಿತ್ರ ಜಿ, ‘ಡಾ.ಅಂಬೇಡ್ಕರ್ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಸಮುದಾಯಗಳ ನಡುವೆ ವೈಷಮ್ಯ ಮೂಡಿಸುವುದು ಗಂಭೀರ ಅಪರಾಧ. ಇಂತಹ ಸಮಾಜ ವಿರೋಧಿ ಶಕ್ತಿಗಳಿಗೆ ಕಾನೂನಿನ ಮೂಲಕ ಕಠಿಣ ಪಾಠ ಕಲಿಸಬೇಕು. ಸಾಮಾಜಿಕ ಜಾಲತಾಣಗಳ ದುರುಪಯೋಗಕ್ಕೆ ಕಡಿವಾಣ ಹಾಕುವುದು ಪೊಲೀಸ್ ಇಲಾಖೆಯ ಕರ್ತವ್ಯವಾಗಿದ್ದು, ಈ ಪ್ರಕರಣದಲ್ಲಿ ತಕ್ಷಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ಮನವಿ ಸಲ್ಲಿಕೆಯ ಸಂದರ್ಭದಲ್ಲಿ ದಲಿತ ಸೇನೆ ವಿಜಯಪುರ ಜಿಲ್ಲೆಯ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಪ್ರಕಾಶ್ ಹೊಸಮನಿ, ಉತ್ತರ ಕರ್ನಾಟಕದ ಅಧ್ಯಕ್ಷ ಮಹೇಶ್ ಜಾಬನೂರು ಉಪಸ್ಥಿತರಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...