Homeಕರ್ನಾಟಕಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಕಾಮೆಂಟ್: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಕಾಮೆಂಟ್: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

- Advertisement -
- Advertisement -

ಕೆಪಿಸಿಸಿ ಸೋಷಿಯಲ್ ಮೀಡಿಯಾ ಉಪಾಧ್ಯಕ್ಷೆ ಸೌಗಂಧಿಕಾ ರಘುನಾಥ್ ವಿರುದ್ಧ ಅವಹೇಳನಕಾರಿ ಕಾಮೆಂಟ್​ ಮಾಡಿದ ಹಿನ್ನೆಲೆಯಲ್ಲಿ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.

ಶಿವಮೊಗ್ಗದಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ನಗರದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸಲಾಗಿದೆ.

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ್ದಾರೆ ಎಂದು ಅರೋಪಿಸಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ಎಂಬುವರು ದೂರು ನೀಡಿದ್ದಾರೆ.

ಚಂದ್ರಯಾನದ ಬಗ್ಗೆ ಪೋಸ್ಟ್​ಗೆ ಸೌಗಂಧಿಕಾ ಕಾಮೆಂಟ್ ಮಾಡಿದ್ದರು. ಇದಕ್ಕೆ ಸೂಲಿಬೆಲೆ, ”ನಿನಗೆ ಯಾಕೆ, ಎಲ್ಲಿ ಉರಿ ಬಂತೋ ಗೊತ್ತಾಗಿಲ್ಲ” ಎಂದು ಚಕ್ರವರ್ತಿ ಸೂಲಿಬೆಲೆ ಕಾಮೆಂಟ್ ಮಾಡಿದ್ದಾರೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಸೌಗಂಧಿಕಾ ದೂರು ನೀಡಿದ್ದಾರೆ.

ಚಂದ್ರಯಾನ 3 ಕುರಿತಾದ ಫೇಸ್ಬುಕ್ ಪೋಸ್ಟ್ ವೇಳೆ ಚಕ್ರವರ್ತಿ ಸೂಲಿಬೆಲೆ ಅವಾಚ್ಯವಾಗಿ ಕಾಮೆಂಟ್ ಮಾಡಿದ್ದಾರೆ ಅಂತ ಸೌಂಗಧಿಕಾ ರಘುನಾಥ್ ದೂರಿದ್ದಾರೆ.

ಫೇಸ್‌ಬುಕ್ ಪೋಸ್ಟ್ ಮತ್ತು ಕಾಮೆಂಟ್ ವಿವರ:

ಚಕ್ರವರ್ತಿ ಸೂಲಿಬೆಲೆ ಫೇಸ್‌ಬುಕ್‌ನಲ್ಲಿ, ”ಎಲ್ಲರೂ ದೇವಸ್ಥಾನಗಳಿಗೆ ಹೋಗಿ ಕೈಮುಗಿದು ಚಂದ್ರಯಾನ 3 ಯಶಸ್ವಿಯಾಗಲಿ, ಫೋಟೋಗಳನ್ನು ಹಾಕಿ” ಎಂದು ಪೋಸ್ಟ್ ಮಾಡಿದ್ದರು.

ಇದಕ್ಕೆ ಪ್ರತ್ಯುತ್ತರವಾಗಿ ಸೌಗಂಧಿಕಾ ಅವರು, ”ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು” ಎಂದು ಕಾಮೆಂಟ್ ಮಾಡಿದ್ದರು.

ಆ ಕಾಮೆಂಟ್‌ಗೆ ಚಕ್ರವರ್ತಿ ಸೂಲಿಬೆಲೆ, ”ನಿನಗೆ ಎಲ್ಲಿ ಯಾಕೆ ಉರಿ ಬಂತೋ ಗೊತ್ತಿಲ್ಲ” ಎಂದು ಕೆಟ್ಟ ರೀತಿಯಲ್ಲಿ ಕಾಮೆಂಟ್ ಹಾಕಿದ್ದರು.

ಈ ಕಾರಣಕ್ಕೆ ಫೇಸ್‌ಬುಕ್‌ನಲ್ಲಿ ಅವಾಚ್ಯ ಪದಗಳಿಂದ ಕಾಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ರಘುನಾತ್ ಆರೋಪಿಸಿದ್ದಾರೆ.

”ಕಾಮೆಂಟ್ ಹಾಕಿದ ಬಳಿಕ ಸಾಕಷ್ಟು ಫೇಕ್ ಅಕೌಂಟ್‌ಗಳಿಂದ ನನ್ನ ತೇಜೋವಧೆಗೆ ಪ್ರಯತ್ನಪಟ್ಟಿವೆ. ಆದರೆ ನಾನು ಯಾವುದಕ್ಕೂ ಸೊಪ್ಪು ಹಾಕೋದಿಲ್ಲ” ಎಂದು ಸೌಗಂಧಿಕಾ ರಘುನಾಥ್ ಹೇಳಿದ್ದಾರೆ.

ಇದನ್ನೂ ಓದಿ: ಸೂಲಿಬೆಲೆ ಆಟ ಇನ್ನು ನಡೆಯಲ್ಲ: ಎಂ.ಬಿ.ಪಾಟೀಲ್ ಖಡಕ್‌ ಎಚ್ಚರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...