HomeಮುಖಪುಟLGBTQIA+ ಸಮುದಾಯದ ಅವಹೇಳನಕಾರಿ ಚಿತ್ರಣ ಆರೋಪ : ಮಲಯಾಳಂ ಸಿನಿಮಾ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ

LGBTQIA+ ಸಮುದಾಯದ ಅವಹೇಳನಕಾರಿ ಚಿತ್ರಣ ಆರೋಪ : ಮಲಯಾಳಂ ಸಿನಿಮಾ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ

- Advertisement -
- Advertisement -

ಎಂ. ಮೋಹನನ್ ನಿರ್ದೇಶನದ, ವಿನೀತ್ ಶ್ರೀನಿವಾಸನ್ ಮತ್ತು ನಿಖಿಲಾ ವಿಮಲ್ ನಟಿಸಿರುವ ಮಲಯಾಳಂ ಚಲನಚಿತ್ರ ‘ಒರು ಜಾತಿ ಜಾತಕಂ’ನಲ್ಲಿ LGBTQIA+ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯನ್ನು ಕೇರಳ ಹೈಕೋರ್ಟ್ ಸ್ವೀಕರಿಸಿದೆ.

LGBTQIA+ ಸಮುದಾಯದ ಪ್ರತಿನಿಧಿ ಮತ್ತು ಕೇರಳದ ಅಲಪ್ಪುಝ ನಿವಾಸಿ ಶಾಖಿಯಾ ಎಸ್ ಪ್ರಿಯಂವದ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ವರದಿಗಳ ಪ್ರಕಾರ, ನಿರ್ಮಾಪಕ ಸೇರಿದಂತೆ ಚಿತ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಲಿದೆ.

LGBTQIA+ ಸಮುದಾಯದವನ್ನು ಅವಹೇಳನಕಾರಿಯಾಗಿ ಚಿತ್ರಿಸಿರುವ ಕೆಲವು ಕೆಲವು ಪದಗಳು ಮತ್ತು ಸಂಭಾಷಣೆಗಳು ಸಿನಿಮಾದಲ್ಲಿವೆ. ಈ ಪದಗಳು ತಾರತಮ್ಯವನ್ನು ಉತ್ತೇಜಿಸುತ್ತವೆ. ಮಾನವ ಘನತೆಯನ್ನು ಕುಗ್ಗಿಸುತ್ತದೆ. ಸಮುದಾಯದ ವಿರುದ್ದ ಹಾನಿಕಾರಕ ಸಂದೇಶವನ್ನು ಕಟ್ಟಿಕೊಡುತ್ತದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಭಾರತದ ಸಂವಿಧಾನದ ವಿಧಿ 14 (ಸಮಾನತೆಯ ಹಕ್ಕು), ವಿಧಿ 19 (ಸಮಂಜಸವಾದ ನಿರ್ಬಂಧಗಳೊಂದಿಗೆ ವಾಕ್ ಸ್ವಾತಂತ್ರ್ಯ) ಮತ್ತು ವಿಧಿ 21 (ಜೀವನ ಮತ್ತು ಘನತೆಯ ಹಕ್ಕು) ಅಡಿಯಲ್ಲಿ LGBTQ+ ವ್ಯಕ್ತಿಗಳು ಸೇರಿದಂತೆ ಪ್ರತಿಯೊಬ್ಬರೂ ಗೌರವ ಮತ್ತು ಘನತೆಯಿಂದ ಬದುಕುವ ಹಕ್ಕನ್ನು ಹೊಂದಿದ್ದಾರೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

‘ಒರು ಜಾತಿ ಜಾತಕಂ’ ಸಿನಿಮಾ ಜನವರಿ 31, 2025ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಕಥೆಯನ್ನು ರಾಕೇಶ್ ಮಂಟೋಡಿ ಬರೆದಿದ್ದಾರೆ ಮತ್ತು ಮಹಾ ಝುಬೈರ್ ಮತ್ತು ವರ್ಣಚಿತ್ರ ಬಿಗ್ ಸ್ಕ್ರೀನ್ ನಿರ್ಮಿಸಿದ್ದಾರೆ. ಬಾಬು ಆಂಟನಿ, ಇಶಾ ತಲ್ವಾರ್, ಪೂಜಾ ಮೋಹನರಾಜ್, ಸಯನೋರಾ ಫಿಲಿಪ್ ಮತ್ತು ಪಿಪಿ ಕುಂಞಿಕೃಷ್ಣನ್ ಅವರಂತಹ ಜನಪ್ರಿಯ ನಟರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರದ ಕಥೆಯು ಕೇರಳದ ಉತ್ತರ ಜಿಲ್ಲೆಯೊಂದರ 37 ವರ್ಷದ ಜಯೇಶ್ (ವಿನೀತ್) ಎಂಬಾತನ ಸುತ್ತ ಸುತ್ತುತ್ತದೆ. ಚಿತ್ರದಲ್ಲಿ ಅರೇಂಜ್ ವಿವಾಹ ಆಗಲು ಬಯಸುವ ವ್ಯಕ್ತಿ ಮಹಿಳೆಯರ ಚರ್ಮದ ಬಣ್ಣ ಅಥವಾ ಮದುವೆಯ ನಂತರ ಕೆಲಸ ಮಾಡುವ ಆಯ್ಕೆಯ ಆಧಾರದ ಮೇಲೆ ಅವರನ್ನು ತಿರಸ್ಕರಿಸುವ ವಿಷಯವಿದೆ.  ಚಿತ್ರದ ಕುರಿತು ದಿ ನ್ಯೂಸ್ ಮಿನಿಟ್‌ನಲ್ಲಿ ಪ್ರಕಟಗೊಂಡಿರುವ ವಿಮರ್ಶೆಯಲ್ಲಿ, “ವಿಫಲ ಹಾಸ್ಯದಿಂದ ಹಿಡಿದು ಸಲಿಂಗಕಾಮಿ ಸಮುದಾಯದ ಸಂಪೂರ್ಣ ಅಸಹ್ಯಕರ ಚಿತ್ರಣದವರೆಗೆ ಹಲವು ವಿಭಿನ್ನ ರೀತಿಯ ತಪ್ಪುಗಳು ಚಿತ್ರದಲ್ಲಿವೆ ಎಂದು ವಿಮರ್ಶಕ ಕ್ರಿಸ್ ಬರೆದಿದ್ದಾರೆ.

ಗಲ್ಫ್ ರಾಷ್ಟ್ರಗಳಲ್ಲಿ ಚಿತ್ರಕ್ಕೆ ನಿರ್ಬಂಧ

LGBTQIA+ ಸಮುದಾಯದ ವಿಷಯವನ್ನು ಇಟ್ಟುಕೊಂಡು ಮಾಡಿರುವ ಹಿನ್ನೆಲೆ ‘ಒರು ಜಾತಿ ಜಾತಕಂ’ ಸಿನಿಮಾದ ಪ್ರದರ್ಶನಕ್ಕೆ ಅನೇಕ ಗಲ್ಫ್‌ ದೇಶದಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಯಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸೌದಿ ಅರೇಬಿಯಾ ಮತ್ತು ಕತಾರ್ ಸೇರಿದಂತೆ ಅನೇಕ ಗಲ್ಫ್ ರಾಷ್ಟ್ರಗಳಲ್ಲಿ ಸಿನಿಮಾಗೆ ನಿರ್ಬಂಧ ವಿಧಿಸಲಾಗಿದೆ. ಒಮಾನ್‌ನಲ್ಲಿ ಮಾತ್ರ ನಿರ್ಬಂಧಿಸಿಲ್ಲ ಎಂದು ವರದಿಗಳು ಹೇಳಿವೆ.

ಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...