Homeಮುಖಪುಟಹೆಚ್ ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲು

ಹೆಚ್ ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲು

- Advertisement -
- Advertisement -

ಮಾಜಿ ಪ್ರಧಾನಮಂತ್ರಿಗಳು ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಅವರ ತೇಜೋವದೆಗೆ ಯತ್ನಿಸಿದ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಾಗಿದೆ.

ಟ್ವಿಟ್ಟರ್ ಹಾಗೂ ಫೇಸ್‌ಬುಕ್​ನಲ್ಲಿ ಅವಹೇಳನಕಾರಿಯಾಗಿ ಬರೆದಿರುವ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷರಾದ ಎ.ಪಿ.ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಸೇರಿ ಹಲವರು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹಗೊಂಡ ಹಿನ್ನಲೆಯಲ್ಲಿ ದೇವೇಗೌಡರನ್ನು ಎಳೆದು ತಂದು ಅಪಮಾನ ಮಾಡಲಾಗಿತ್ತು. “ಈ ಕೇಸ್ ಬಗ್ಗೆ ಸಿಂಪಲ್ ಆಗಿ ಹೇಳಬೇಕು ಎಂದರೆ, ದೇವೇಗೌಡ ಕಳ್ಳ ಅನ್ನೋದಕ್ಕೂ, ಗೌಡರು ಅನ್ನೋರೆಲ್ಲ ಕಳ್ಳರೇ ಯಾಕಿರುತ್ತಾರೆ ಅನ್ನೋದಕ್ಕೂ ವ್ಯತ್ಯಾಸ ಇದೆ. ಮೊದಲನೆಯದ್ದಕ್ಕೆ ದೇವೇಗೌಡರು ಕೇಸ್ ಹಾಕಬೇಕು, ಎರಡನೆಯದ್ದಕ್ಕೆ ಅವನ ಮಗನೋ ಮೊಮ್ಮಗನೋ ಅಥವಾ ಯಾರಾದರೂ ಗೌಡ ಕೇಸ್ ಹಾಕಬಹುದು” ಎಂದು ಬರೆದು “ಸುಮ್ಮನೆ ಒಂದು ಉದಾಹರಣೆ ಕೊಟ್ಟೆ ಅಷ್ಟೆ, ಸೀರಿಯಸ್ ಆಗಿ ತಗೊಳಬೇಡಿ” ಎಂದು ಪ್ರಶಾಂತ್ ಸಂಬರ್ಗಿ ಪೋಸ್ಟ್ ಮಾಡಿದ್ದರು.

ಅವಹೇಳನಕಾರಿ ಬರೆದು ತೆಜೋವಧೆ ಮಾಡಿದ ಸಂಬರ್ಗಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಮಾರ್ಚ್ 15ರಂದು ಹೆಚ್ ಡಿ ದೇವೇಗೌಡ ಅವರ ವಿರುದ್ಧ Elephant whisperers ಪೋಸ್ಟ್​ ಮೇಲೆ ‘ಎಲ್ಲೇ ಕೂಸು ಹುಟ್ಟಲಿ ನಾನೇ ಅಪ್ಪ’ ಎಂದು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ. ಮಾರ್ಚ್ 11ರಂದು ದೇವೇಗೌಡ ಅವರ ವಿರುದ್ಧ ‘ಇವರು ಹೊಟ್ಟೆಗೆ ಅನ್ನ ತಿಂತಾರ ಇಲ್ಲ ಏನು ತಿಂತಾರೆ?’ ಎಂದು ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಮಾರ್ಚ್ 13ರಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿದ ಸಾರ್ವಜನಿಕ ಭಾಷಣದ ಕ್ಲಿಪ್ ಬಳಿಸಿಕೊಂಡು ಪ್ರಶಾಂತ್ ಸಂಬರಗಿ ‘ಚೀ ಕಳ್ಳ ಕುಮಾರ್ ಸಾಬ್ ಖಾನ್’ ಎಂದು ಹೇಳಿ ಅವಮಾನಿಸಿದ್ದಾನೆ. ಈ ಎಲ್ಲ ಪೋಸ್ಟ್​ಗಳನ್ನು ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ದೂರಿನಲ್ಲಿ ಉಲ್ಲೆಖಿಸಿದೆ.

ಅತ್ತ ದೂರು ದಾಖಲಾಗುತ್ತಲೇ ಬೆದರಿದ ಪ್ರಶಾಂತ್ ಸಂಬರ್ಗಿ ದೇವೇಗೌಡರ ಬಳಿ ಕ್ಷಮೆ ಕೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, “ನನ್ನ ತಂದೆ ಸಮಾನರಾದ Shri ದೇವೆಗೌಡ್ರ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ನಾನು ಒಂದು ಉದಾರಣೆಯಾಗಿ ದೇವೆ ಗೌಡ ಎಂದು ಹೆಸರನ್ನು ಬಳಸಿದೆ ಹೊರತು ಯಾವುದೇ ದುರುದ್ವೇಷ ವಿರಲಿಲ್ಲ. ಇದು ಯಾವುದೇ ರೀತಿಯಲ್ಲೂ ಅವರ ಗೌರವಕ್ಕೆ ಚುತ್ತಿ ತರಲು ಬಳಸಲಿಲ್ಲ. ಇದರಿಂದ ಯಾರಿಗಾದರೂ ಅಸಮಾಧಾನವಾಗಿದ್ದರೆ ನನ್ನ ಕಳ ಕಳಿಯ ಕ್ಷಮೆ ವಿರಲಿ #sorry” ಎಂದು ಬರೆದಿದ್ದಾರೆ.

ದೇವೇಗೌಡರ ಬಗ್ಗೆ ತಾನು ಮಾಡಿದ್ದ ಅವಹೇಳನಕಾರಿ ಟ್ವೀಟ್ ಅನ್ನು ಡಿಲೀಟ್ ಮಾಡಿರುವ ಪ್ರಶಾಂತ್ ಸಂಬರ್ಗಿ, ಮತ್ತೊಂದು ಟ್ವೀಟ್‌ನಲ್ಲಿ ದೇವೇಗೌಡರ ಹೆಸರು ತೆಗೆದು ಶಾರೂಕ್ ಖಾನ್ ಹೆಸರು ಹಾಕಿ ಅದೇ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿ: ಮುಸ್ಲಿಂ ಸಮುದಾಯದ 8 ಮಂದಿಗೆ, 6 ಮಹಿಳೆಯರಿಗೆ ಟಿಕೆಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...