Homeಕರ್ನಾಟಕಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

- Advertisement -
- Advertisement -

ಉಡುಪಿ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಅವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಉಡುಪಿಯ ಕಾಲೇಜೊಂದರ ಟಾಯ್ಲೆಟ್​ನಲ್ಲಿ 3 ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಅದರ ಸುತ್ತ ನಾನಾ ಬಗೆಯ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಕೆಲವರು ರಾಜ್ಯಸರ್ಕಾರದ ಮೇಲೆ ಆರೋಪ ಮಾಡಿದರೆ ಇನ್ನೂ ಕೆಲವರು ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್​ ವಿರುದ್ಧ ಮಾತನಾಡುತ್ತಿದ್ದಾರೆ. ಈ ನಡುವೆ ಬಿಜೆಪಿಯ ಕಾರ್ಯಕರ್ತೆಯೊಬ್ಬರು, ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮಾತನಾಡಿ ಜೈಲು ಪಾಲಾಗಿದ್ದಾರೆ.

ಬಿಜೆಪಿ ನಾಯಕಿ ಶಕುಂತಲಾ ಅವರು ಪ್ರಧಾನಿ ಮೋದಿ ಅವರೊಂದಿಗಿನ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಇವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾಕಾರ್ಯದರ್ಶಿ ಸಿಟಿ ರವಿ ಅವರು ಟ್ವಿಟರ್ ನಲ್ಲಿ ಫಾಲೋ ಮಾಡುತ್ತಾರೆ. ಆದರೆ ಶಕುಂತಲಾ ಇದೇ ಮೊದಲ ಬಾರಿಗೆ ಇಂತಹ ಪೋಸ್ಟಗಳನ್ನು ಹಂಚಿಕೊಂಡವಳಲ್ಲ, ಇದೇ ರೀತಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕವಾಗಿ ಪೋಸ್ಟ್ ಮಾಡುವ ಮೂಲಕ ಕುಖ್ಯಾತಿ ಗಳಿಸಿದ್ದಾರೆ.

ಉಡುಪಿ ಕಾಲೇಜಿನ ಶೌಚಗೃಹದಲ್ಲಿ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಬಿಜೆಪಿ ನಾಯಕಿ ಶಕುಂತಲಾ ಎನ್ನುವವರು ಅವಹೇಳನ ಟ್ವೀಟ್ ಮಾಡಿದ್ದರು. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗಿತ್ತು, ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿತ್ತು.

ಈ ಹಿಂದೆ ಕಾಂಗ್ರೆಸ್ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಪೋಸ್ಟ್ ”ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಎಂದು ನಕಲಿ ಸುದ್ದಿ ಸೃಷ್ಟಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ABVP ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ?” ಎಂದು ಪ್ರಶ್ನೆ ಮಾಡಿತ್ತು.

”ವಿದ್ಯಾರ್ಥಿನಿಯರ ಮಕ,ಳಾಟವನ್ನು ರಾಜಕೀಯದ ಕಳ್ಳಾಟಕ್ಕೆ, ಬಳಸಿಕೊಳ್ಳಲು ಉಪ್ಪು ಖಾರ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ ಬಿಜೆಪಿಗೆ ನಮ್ಮ ದಕ್ಷಪೊಲೀಸರು ತಡಮಾಡದೆ ತನಿಖೆ ಮಾಡಿ ಸತ್ಯಾಂಶ ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಲಾಗಿತ್ತು.

ಇದರಬೆನ್ನಲ್ಲೇ ಬಿಜೆಪಿ ನಾಯಕಿ ಶಕುಂತಲಾ ಅವರು ಸಿಎಂ ಸೊಸೆ, ಹೆಂಡ್ತಿ ವೀಡಿಯೋ ಮಾಡಿದ್ರೆ ಹೀಗೆ ಹೇಳ್ತಿದ್ರಾ? ಎಂದು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಶಕುಂತಲಾ ಅವರು, ”ಮುಸ್ಲಿಂ ಯುವತಿಯರು ಹಿಂದೂ ಹುಡುಗಿಯರ ನಗ್ನ ಚಿತ್ರ ವೀಡಿಯೋ ಮಾಡಿದ್ದು ತಮಾಷೆ,ಮಕ್ಕಳಾಟ ಎನ್ನುತ್ತಿರುವ ಕಾಂಗ್ರೆಸ್ ಮತ್ತದರ ಅನುಯಾಯಿಗಳು, ಅನ್ಯಾಯವಾದ ಹೆಣ್ಣುಮಕ್ಕಳು ಬರೆದಿರುವ ದೂರು ಕೂಡ ನಕಲಿ ಎಂದು ಹೇಳುತ್ತಾರೆಯೇ?” ಎಂದು ಪ್ರಶ್ನೆ ಮಾಡಿದ್ದರು.

ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿದ ದೂರು ದಾಖಲು ಮಾಡಲಾಗಿತ್ತು. ದೂರು ದಾಖಲಿಸಿಕೊಂಡು ಹೈಗ್ರೌಂಡ್ಸ್ ಪೊಲೀಸರು ಬಿಜೆಪಿ ನಾಯಕಿ ಶಕುಂತಲಾಳನ್ನ ಬಂಧಿಸಿದ್ದಾರೆ.

ಉಡುಪಿಯ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ರಹಸ್ಯ ಚಿತ್ರೀಕರಣವನ್ನು ಮಾಡಿರುವ ಘಟನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿ ಮತ್ತು ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ತುಮಕೂರು ಬಿಜೆಪಿ ಜಿಲ್ಲಾ ಮಹಿಳಾಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆಯಲ್ಲಿ ಶಕುಂತಲಾ ಭಾಗಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...