Homeಮುಖಪುಟರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು

ರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು

- Advertisement -
- Advertisement -

2021 ರ ಮಾನನಷ್ಟ ಪ್ರಕರಣದಲ್ಲಿ ನಟಿ, ಲೋಕಸಭೆ ಸದಸ್ಯೆ ಕಂಗನಾ ರಣಾವತ್‌ಗೆ ಪಂಜಾಬ್‌ನ ಭಟಿಂಡಾ ನಗರದ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

81 ವರ್ಷದ ಮಹಿಳೆ ಮಹಿಂದರ್ ಕೌರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಂಗನಾ ರನೌತ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಿಂದ ಪರಿಹಾರ ಪಡೆಯಲು ವಿಫಲರಾಗಿದ್ದರು.

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ 81 ವರ್ಷದ ರೈತ ಮಹಿಳೆ ಮಹಿಂದರ್ ಕೌರ್  2021 ರಲ್ಲಿ ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರನೌತ್ ವರದಿಗಾರರಿಗೆ ತಪ್ಪು ತಿಳುವಳಿಕೆ ಉಂಟಾಗಿದೆ ಎಂದು ಹೇಳಿದರು, ಏನು ಚಿತ್ರಿಸಲಾಗಿದೆ ಎಂದು ನನಗೆ ಊಹಿಸಲೂ ಸಾಧ್ಯವಿಲ್ಲ ಎಂದರು. 

ಲೋಕಸಭೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರವನ್ನು ಪ್ರತಿನಿಧಿಸುವ ರನೌತ್, ನ್ಯಾಯಾಲಯದಲ್ಲಿ ವೃದ್ಧ ರೈತ ಮಹಿಳೆಯ ಪತಿ ಲಾಭ್ ಸಿಂಗ್ ಅವರ ಬಳಿ ಕ್ಷಮೆಯಾಚಿಸಿದ್ದಾರೆ. 

“ತಾಯಿ ಹಿಮಾಚಲ ಪ್ರದೇಶದವರಾಗಿರಲಿ ಅಥವಾ ಪಂಜಾಬ್‌ನವರಾಗಿರಲಿ, ಅವರು ನನಗೆ ಗೌರವಾನ್ವಿತರು. ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ” ಎಂದು ಅವರು ಹೇಳಿದರು. “ಇದು ಮರುಟ್ವೀಟ್ ಮಾಡಲಾದ ಮೀಮ್ ಆಗಿತ್ತು. ನಾನು ತಾಯಿ ಮಹಿಂದರ್ ಜಿ ಅವರ ಪತಿಯೊಂದಿಗೆ ಈ ಬಗ್ಗೆ ಮಾತನಾಡಿದ್ದೆ. ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ದೇಶದಲ್ಲಿ ಅನೇಕ ಚಳುವಳಿಗಳು ನಡೆಯುತ್ತಿದ್ದವು. ನಾನು ಅದರ ಬಗ್ಗೆ ಸಾಮಾನ್ಯ ಟ್ವೀಟ್ ಮಾಡಿದ್ದೆ. ಸಂಭವಿಸಿದ ತಪ್ಪು ತಿಳುವಳಿಕೆಗೆ ನಾನು ವಿಷಾದಿಸುತ್ತೇನೆ” ಎಂದು ಅವರು ಹೇಳಿದರು. ಈ ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ 24 ರಂದು ನಡೆಯಲಿದೆ. 

ಮಹಿಂದರ್ ಕೌರ್ ಬದಲಿಗೆ ಅವರ ಪತಿ ನ್ಯಾಯಾಲಯಕ್ಕೆ ಹಾಜರಾಗಿದ್ದರು

ಸೋಮವಾರ ಬೆಳಗ್ಗೆ, ಪೊಲೀಸ್ ಅಧಿಕಾರಿಗಳ ಬೆಂಗಾವಲಿನೊಂದಿಗೆ ರಣಾವತ್ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಭಟಿಂಡಾ ನಗರದ ಪೊಲೀಸ್ ವರಿಷ್ಠಾಧಿಕಾರಿ ನರಿಂದರ್ ಸಿಂಗ್ ಮಾತನಾಡಿ, ನ್ಯಾಯಾಲಯದ ಸಂಕೀರ್ಣದ ಸುತ್ತಲೂ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಭದ್ರತೆಯನ್ನು ಬಲಪಡಿಸಲಾಗಿದೆ. 

“ಯಾವುದೇ ಕಿಡಿಗೇಡಿತನವು ಯಾವುದೇ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಭದ್ರವಾಗಿಡುವುದು ನಮ್ಮ ಮುಖ್ಯ ಗುರಿಯಾಗಿದೆ” ಎಂದು ಅವರು ಹೇಳಿದರು.

2020-21ರ ರೈತರ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಘಟನೆಯಾಗಿದ್ದು, ಭಟಿಂಡಾದ ಬಹದ್ದೂರ್‌ಗಢ್ ಜಾಂಡಿಯನ್ ಗ್ರಾಮದ ಮಹಿಂದರ್ ಕೌರ್ ಅವರನ್ನು ಉಲ್ಲೇಖಿಸಿ ರನೌತ್ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಅನ್ನು ಹಂಚಿಕೊಂಡಿದ್ದರು. 

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೃದ್ಧ ಮಹಿಳೆಯೊಬ್ಬರ ಛಾಯಾಚಿತ್ರವನ್ನು ಒಳಗೊಂಡ ಪೋಸ್ಟ್‌ಗೆ ರನೌತ್ ಕಾಮೆಂಟ್ ಮಾಡಿದ್ದು, ಕೆಲವು ಭಾಗವಹಿಸುವವರಿಗೆ ಹಣ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಆ ಮಹಿಳೆಯನ್ನು “ಭಾರತದ ಶಕ್ತಿಶಾಲಿ ಮಹಿಳೆಯರಲ್ಲಿ ಟೈಮ್ ನಿಯತಕಾಲಿಕೆಯಲ್ಲಿ ಕಾಣಿಸಿಕೊಂಡ ಅದೇ ದಾದಿ” ಎಂದು ಅವರು ಉಲ್ಲೇಖಿಸಿದ್ದರು. “ಅವರು 100 ರೂ.ಗೆ ಲಭ್ಯವಿದ್ದಾರೆ” ಎಂದು ಟ್ವಿಟ್ ಮಾಡಿದ್ದರು. ಈ ಪೋಸ್ಟ್ ರೈತ ಸಂಘದ ಮುಖಂಡರು ಸೇರಿದಂತೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಆಕ್ರೋಶ ಮತ್ತು ಪ್ರಕರಣದ ದಾಖಲಾದ ನಂತರ ಅದನ್ನು ನಂತರ ಅಳಿಸಲಾಗಿತ್ತು. 

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜನವರಿ 4, 2021 ರಂದು ಕಂಗನಾ ರನೌತ್ ವಿರುದ್ಧ ರೈತ ಮಹಿಳೆ ಮಹಿಂದರ್ ಕೌರ್  ಮಾನನಷ್ಟ ಮೊಕದ್ದಮೆ ಹೂಡಿದ್ದರು, ನಟಿಯ ಹೇಳಿಕೆಗಳು ತಮ್ಮನ್ನು ಅವಮಾನಿಸಿವೆ ಮತ್ತು ರೈತ ಚಳವಳಿಯಲ್ಲಿ ನನ್ನ ಪಾತ್ರವನ್ನು ತಪ್ಪಾಗಿ ನಿರೂಪಿಸಿದೆ ಎಂದು ಆರೋಪಿಸಿದರು. 

ಸುಮಾರು 13 ತಿಂಗಳ ವಿಚಾರಣೆಯ ನಂತರ, ಭಟಿಂಡಾ ನ್ಯಾಯಾಲಯವು ರನೌತ್ ಅವರಿಗೆ ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತು. ತರುವಾಯ, ಪ್ರಕರಣದಲ್ಲಿ ಪರಿಹಾರ ಕೋರಿ ರನೌತ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಮೊರೆ ಹೋದರು, ಆದರೆ ನ್ಯಾಯಾಲಯವು ಅದನ್ನು ಸ್ವೀಕರಿಸಲಿಲ್ಲ. ನಂತರ ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದರು ಆದರೆ ಅಲ್ಲಿಯೂ ಯಾವುದೇ ಪರಿಹಾರ ಸಿಗಲಿಲ್ಲ. ನ್ಯಾಯಾಲಯದ ನಿರ್ದೇಶನಗಳನ್ನು ಅನುಸರಿಸಿ, ಬಿಜೆಪಿ ಸಂಸದರು ಸೋಮವಾರ ಭಟಿಂಡಾ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

ಪಕ್ಷ ವಿರೋಧಿ ಚಟುವಟಿಕೆ : ಇಬ್ಬರು ಹಾಲಿ ಶಾಸಕರು ಸೇರಿ 27 ಮಂದಿಯನ್ನು ಉಚ್ಚಾಟಿಸಿದ ಆರ್‌ಜೆಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...