Homeಮುಖಪುಟಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

ಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

- Advertisement -
- Advertisement -

AIADMKಯ ಹಿರಿಯ ನಾಯಕಿಯಾಗಿದ್ದ ದಿವಂಗತ ಜೆ ಜಯಲಲಿತಾರವರ ಬಗ್ಗೆ ತಮಿಳುನಾಡಿನ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಅಣ್ಣಾಮಲೈ ಅವಹೇಳನಕಾರಿಯಾಗಿ ಮಾತನಾಡಿರುವುದರ ವಿರುದ್ಧ AIADMK ಪಕ್ಷ ನಿರ್ಣಯ ಮಂಡಿಸಿದೆ.

ಅಣ್ಣಾಮಲೈ ಅವರು ಜಯಲಲಿತಾ ಅವರನ್ನು “ಉದ್ದೇಶಪೂರ್ವಕವಾಗಿ” ನಿಂದಿಸಿದ್ದಾರೆ. ಇದು ಎಐಎಡಿಎಂಕೆ ಕಾರ್ಯಕರ್ತರು ಮತ್ತು ಸಾರ್ವಜನಿಕರ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ನಿರ್ಣಯ ಮಂಡಿಸಿದ ನಂತರ AIADMK ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ತಿಳಿಸಿದ್ದಾರೆ.

ಅಮ್ಮ (ಜಯಲಲಿತಾ) 16 ವರ್ಷಗಳ ಕಾಲ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು ಮತ್ತು ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ತಂದರು. ಅವರು ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಇತರ ರಾಜ್ಯಗಳಿಗೆ ಸ್ಫೂರ್ತಿಯಾಗಿವೆ. ಆದರೆ ಯಾವುದೇ ರಾಜಕೀಯ ಅನುಭವ ಅಥವಾ ಪ್ರಬುದ್ಧತೆ ಇಲ್ಲದ ಬಿಜೆಪಿ ನಾಯಕ ಅಣ್ಣಾಮಲೈ ಅವರು ಉದ್ದೇಶಪೂರ್ವಕವಾಗಿ ಜಯಲಲಿತಾ ವಿರುದ್ಧ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಎಲ್ ಕೆ ಅಡ್ವಾಣಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು “ಅಮ್ಮ” (ಜಯಲಲಿತಾ)ನ ಬಗ್ಗೆ ಅಪಾರ ಗೌರವ ಹೊಂದಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಸಹ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು. 1998 ರಲ್ಲಿ ಬಿಜೆಪಿಯು ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಎಐಎಡಿಎಂಕೆ ಪಕ್ಷದ ಬೆಂಬಲವೇ ಕಾರಣ. ಎಐಎಡಿಎಂಕೆ ಬೆಂಬಲದಿಂದಾಗಿ ಬಿಜೆಪಿ ಈಗ ರಾಜ್ಯ ವಿಧಾನಸಭೆಯಲ್ಲಿ ನಾಲ್ಕು ಶಾಸಕರನ್ನು ಹೊಂದಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಪ್ರಮುಖ ಇಂಗ್ಲಿಷ್ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಣ್ಣಾಮಲೈ, ”ಸಾರ್ವಜನಿಕ ಖಜಾನೆಯನ್ನು ಲಪಟಾಯಿಸಿದ ಯಾವುದೇ ಸರ್ಕಾರವನ್ನು ಪ್ರಶ್ನಿಸುತ್ತೇವೆ. ತಮಿಳುನಾಡಿನ ಹಲವು ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಚಾರ ನಡೆದಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದೆ. ಹಾಗಾಗಿಯೇ ತಮಿಳುನಾಡು ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದಾಗಿದೆ. 1991-96ರ ನಡುವಿನ ಅವಧಿಯು (ಜಯಲಲಿತಾ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ) ಭ್ರಷ್ಟಾಚಾರದಲ್ಲಿ ನಂಬರ್ ಒನ್ ಅವಧಿ ಎಂದು ಹೇಳುತ್ತೇನೆ” ಎಂದಿದ್ದರು.

ಇದನ್ನೂ ಓದಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...