HomeUncategorizedಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ: ಠಾಣೆಗೆ ಹಾಜರಾಗುವಂತೆ ರಾಮ್‌ದೇವ್‌ಗೆ ರಾಜಸ್ಥಾನ ಹೈಕೋರ್ಟ್ ನೋಟಿಸ್

ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ: ಠಾಣೆಗೆ ಹಾಜರಾಗುವಂತೆ ರಾಮ್‌ದೇವ್‌ಗೆ ರಾಜಸ್ಥಾನ ಹೈಕೋರ್ಟ್ ನೋಟಿಸ್

- Advertisement -
- Advertisement -

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಯೋಗ ಗುರು ರಾಮ್‌ದೇವ್ ವಿರುದ್ಧದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಅಕ್ಟೋಬರ್ 5 ರಂದು ಬಾರ್ಮರ್‌ನ ಚೋಹ್ತಾನ್ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ರಾಜಸ್ಥಾನ ಹೈಕೋರ್ಟ್ ನೋಟಿಸ್ ನೀಡಿದೆ.

ತನಿಖಾಧಿಕಾರಿ ಕರೆದಾಗಲೆಲ್ಲಾ ಠಾಣೆಗೆ ಹಾಜರಾಗಬೇಕು ಎಂದು ರಾಮ್‌ದೇವ್‌ಗೆ ಹೈಕೋರ್ಟ್ ಹೇಳಿದೆ. ಜತೆಗೆ ಪಕರಣದ ದಿನಚರಿಯನ್ನು ಅ. 16ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ಗೆ ಸೂಚಿಸಿದೆ. ಜತೆಗೆ ರಾಮ್‌ ದೇವ್ ಬಂಧನಕ್ಕೆ ನೀಡಿದ ತಡೆಯನ್ನು ಹೈಕೋರ್ಟ್‌ ವಿಸ್ತರಿಸಿದೆ.

ಎಫ್‌ಐಆರ್ ರದ್ದು ಕೋರಿ ಬಾಬಾ ರಾಮ್‌ದೇವ್ ಹೈಕೋರ್ಟ್ ಮೊರೆ ಹೋಗಿದ್ದರು. ಕ್ರಿಮಿನಲ್ ವಿವಿಧ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಕುಲದೀಪ್ ಮಾಥುರ್ ಸೋಮವಾರ ಈ ನಿರ್ದೇಶನ ನೀಡಿದ್ದಾರೆ.

”ಅರ್ಜಿದಾರರಿಗೆ 05.10.2023ರಂದು ಬೆಳಿಗ್ಗೆ 11.30ಕ್ಕೆ ವಿಚಾರಣೆಗಾಗಿ ತನಿಖಾ ಅಧಿಕಾರಿಯ ಮುಂದೆ ಹಾಜರಾಗಲು ಸೂಚಿಸಲಾಗಿದೆ. ಅರ್ಜಿದಾರರು ವಿಚಾರಣೆಗೆ ಕರೆದಾಗ ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹಿಂದಿನ ವಿಚಾರಣೆ ವೇಳೆ ರಾಮ್‌ದೇವ್ ಬಂಧನಕ್ಕೆ, ನ್ಯಾಯಾಲಯ ತಡೆ ನೀಡಿತ್ತು. ಮೇ 20ರಂದು ತನಿಖಾಧಿಕಾರಿ ಎದುರು ಹಾಜರಾಗುವಂತೆಯೂ ಸೂಚಿಸಿತ್ತು. ಆದರೆ ರಾಮ್‌ ದೇವ್ ಹಾಜರಾಗಿರಲಿಲ್ಲ.

2023ರ ಫೆ. 2ರಂದು ಚಾರ್ಮ‌್ರನಲ್ಲಿ ನಡೆದಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಬಾಬಾ ರಾಮ್‌ ದೇವ್ ಅವರು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂಬ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು.

ನಂತರ ಚೋಹ್ತಾನ್ ಪೊಲೀಸರು ದ್ವೇಷವನ್ನು ಪ್ರಚೋದಿಸುವ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಆರೋಪದಡಿಯಲ್ಲಿ ಕೇಸು ದಾಖಲಿಸಿದ್ದರು.

”ರಾಮ್‌ದೇವ್ ಅವರು ‘ಉದ್ದೇಶಪೂರ್ವಕವಾಗಿ… ಇಸ್ಲಾಂ ವಿರುದ್ಧ ದ್ವೇಷ ಮತ್ತು ದ್ವೇಷದ ಮನೋಭಾವವನ್ನು ರೂಪಿಸಲು’ ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ. ಅವರ ಹೇಳಿಕೆಗಳಿಂದ ಕೋಟ್ಯಂತರ ಮುಸ್ಲಿಮರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...