Homeಮುಖಪುಟಅವಹೇಳನಕಾರಿ ಹೇಳಿಕೆ: ಬಿಜೆಪಿಯ ದಿಲೀಪ್ ಘೋಷ್, ಕಾಂಗ್ರೆಸ್ ನಾಯಕರಿಗೆ ಚುನಾವಣಾ ಆಯೋಗದಿಂದ ಎಚ್ಚರಿಕೆ

ಅವಹೇಳನಕಾರಿ ಹೇಳಿಕೆ: ಬಿಜೆಪಿಯ ದಿಲೀಪ್ ಘೋಷ್, ಕಾಂಗ್ರೆಸ್ ನಾಯಕರಿಗೆ ಚುನಾವಣಾ ಆಯೋಗದಿಂದ ಎಚ್ಚರಿಕೆ

- Advertisement -
- Advertisement -

ಮಹಿಳೆಯರ ಘನತೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ನಾಯಕ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್‌ನ ಸುಪ್ರಿಯಾ ಶ್ರಿನಾಟೆ ಅವರನ್ನು ಚುನಾವಣಾ ಆಯೋಗ ಸೋಮವಾರ ಖಂಡಿಸಿದ್ದು, “ಅವರು ಕೀಳು ಮಟ್ಟದ ವೈಯಕ್ತಿಕ ದಾಳಿ ನಡೆಸಿದ್ದಾರೆ ಮತ್ತು ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂಬುದು ಮನವರಿಕೆಯಾಗಿದೆ” ಎಂದು ಆಯೋಗ ಹೇಳಿದೆ.

ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಸಾರ್ವಜನಿಕ ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಅವರ ಚುನಾವಣಾ ಸಂಬಂಧಿತ ಸಂವಹನಗಳನ್ನು ಸೋಮವಾರದಿಂದ ಆಯೋಗವು ವಿಶೇಷವಾಗಿ ಮತ್ತು ಹೆಚ್ಚುವರಿಯಾಗಿ ಮೇಲ್ವಿಚಾರಣೆ ಮಾಡುತ್ತದೆ ಎಂದು ಹೇಳಿದೆ.

ಸಾರ್ವಜನಿಕ ವೇದಿಕೆಗಳಲ್ಲಿ ಸಂವಹನ ಮಾಡುವಾಗ ಜಾಗರೂಕರಾಗಿರಿ, ಅಂತಹ ಯಾವುದೇ ಅವಹೇಳನಕಾರಿ ಕಾಮೆಂಟ್‌ಗಳು ಮತ್ತು ಮಾದರಿ ನೀತಿ ಸಂಹಿತೆ ಮಾರ್ಗಸೂಚಿಗಳ ಉಲ್ಲಂಘನೆಯಿಂದ ದೂರವಿರಲು ತಮ್ಮ ಕಾರ್ಯಕರ್ತರನ್ನು ಸಂವೇದನಾಶೀಲಗೊಳಿಸಲು ಎಚ್ಚರಿಕೆಯ ಸೂಚನೆ ಅಥವಾ ಖಂಡನೆಯ ಪ್ರತಿಯನ್ನು ಆಯಾ ಪಕ್ಷದ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಸುಪ್ರಿಯಾ ಶ್ರೀನಾಟೆ ಅವರ ಖಾತೆಗಳಿಂದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವಿವಾದಾತ್ಮಕ ಕಾಮೆಂಟ್ ಅನ್ನು ಪೋಸ್ಟ್ ಮಾಡಲಾಗಿತ್ತು.

ವಿವಾದದ ನಂತರ ಶ್ರೀನಾಟೆ ಅವರು ತಮ್ಮ ಎಲ್ಲಾ ಸಾಮಾಜಿಕ ಖಾತೆಗಳಿಂದ ವಿವಾದಾತ್ಮಕ ಟೀಕೆಗಳನ್ನು ಅಳಿಸಿ ಹಾಕಿದ್ದರು. “ಅದನ್ನು ನಾನು ಪೋಸ್ಟ್ ಮಾಡಿಲ್ಲ, ನನ್ನ ಖಾತೆಗಳಿಗೆ ಪ್ರವೇಶವನ್ನು ಹೊಂದಿರುವ ಬೇರೊಬ್ಬರು ಪೋಸ್ಟ್ ಮಾಡಿದ್ದಾರೆ’ ಎಂದು ಹೇಳಿದ್ದಾರೆ.

ಘೋಷ್ ಅವರು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಕುಟುಂಬದ ಹಿನ್ನೆಲೆಯನ್ನು ಅಪಹಾಸ್ಯ ಮಾಡಿದ್ದ ವೀಡಿಯೋ ವೈರಲ್ ಆಗಿ, ವಿವಾದಕ್ಕೆ ಕಾರಣವಾಗಿತ್ತು. ನಂತರ, ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ವಿರುದ್ಧ ವಿವಾದಾತ್ಮಕ ಹೇಳಿಕೆಗಳಿಗಾಗಿ ಕ್ಷಮೆಯಾಚಿಸಿದರು.

ಇದನ್ನೂ ಓದಿ; ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ವಿಪಕ್ಷಗಳಿಗೆ ಕಿರುಕುಳ ಆರೋಪ; ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...